Categories: ಮೈಸೂರು

ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಶಾಸಕ ಎಂ.ಆರ್.ಕೃಷ್ಣಮೂರ್ತಿ ಭೇಟಿ

ನಂಜನಗೂಡು: ನಂಜನಗೂಡು ನಗರದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಶಾಸಕ ಎಂ.ಆರ್.ಕೃಷ್ಣಮೂರ್ತಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಸುಮಾರು 19 ವರ್ಷಗಳ ನಂತರ ವಿಧಾನ ಸಭಾ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ದೇವಾಲಯಕ್ಕೆ ಆಗಮಿಸಿದ ಶಾಸಕರಿಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತ ಕೋರಿದರು. ಶ್ರೀ ನಂಜುಂಡೇಶ್ವರ ಸ್ವಾಮಿ, ಪಾರ್ವತಮ್ಮ, ಚಂಡಿಕೇಶ್ವರ, ಗಣಪತಿ, ಸುಬ್ರಮಣ್ಯ, ನಾರಾಯಣಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು, ಸಚಿವ ಸ್ಥಾನವನ್ನು ವರಿಷ್ಠರು ನಿರ್ಧರಿಸುತ್ತಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಕಾಂಗ್ರೆಸ್ ಸಂಸದರನ್ನು ಕಳುಹಿಸಲು ಸಮರ್ಥ ಮುಖ್ಯ ಮಂತ್ರಿಯನ್ನು ಆಯ್ಕೆ ಮಾಡಲಿದ್ದಾರೆ. ಸಿದ್ದರಾಮಯ್ಯ ರವರ ಅಭಿವೃದ್ಧಿ ಕಾರ್ಯಗಳು ಹಾಗೂ ಹಲವು ಜನಪರ ಯೋಜನೆಗಳು ನಮಗೆ ಕೈ ಹಿಡಿದಿವೆ. ಈ ಬಾರಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ನಗರ ಅಧ್ಯಕ್ಷ ಶಂಕರ್, ಜಯಮಾಲಾ ಬೀರೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Umesha HS

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

5 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

5 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

5 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

6 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

6 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

6 hours ago