ಮೈಸೂರು: ವಿಧಾನಸಭಾ ಅಧಿವೇಶನದಲ್ಲಿ ರಾಜ್ಯಪಾಲರಿಗೆ ಅಗೌರವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಂಸದ ಯದುವೀರ್ ಒಡೆಯರ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ಸರ್ಕಾರದ ನಡೆಯನ್ನ ಜನ ಗಮನಿಸಿದ್ದಾರೆ. ರಾಜ್ಯಪಾಲರು ಸಂವಿಧಾನತ್ಮಕವಾಗಿ ತಮ್ಮ ಜವಾಬ್ದಾರಿ ನಿಭಾಯಿಸಿ ಹೋಗಿದ್ದಾರೆ. ಮಾನ್ಯ ಶಾಸಕರ ಗೂಂಡಾ ರೀತಿ ವರ್ತನೆ ಖಂಡನೀಯ. ರಾಜ್ಯಪಾಲರು ಸಂವಿಧಾನ ಬದ್ದವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರೋದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಖಂಡಿಸಿದರು.

ಚಾಮುಂಡಿ ಬೆಟ್ಟದ ಪ್ರಸಾದ್ ಯೋಜನೆ ಕಾಮಗಾರಿ ವಿಚಾರವಾಗಿ ಪ್ರತಿಕ್ರಿಯಿಸಿ ಈ ಬಗ್ಗೆ ನನ್ನ ಅಭಿಪ್ರಾಯವನ್ನ ನಾನು ತಿಳಿಸಿದ್ದೇನೆ. ಅಲ್ಲಿ ಗ್ರಾಮಸ್ಥರು ವಿರೋಧ ಮಾಡಿದ್ದಾರೆ. ಬೆಟ್ಟದ ಪಕ್ಕದಲ್ಲೇ ಕಾಮಗಾರಿ ನಡೆಯುತ್ತಿದೆ. ಗೋಪುರಕ್ಕೆ ಸುತ್ತಮುತ್ತ ಕಾಮಗಾರಿಯಿಂದ ತೊಂದರೆಯಾಗಬಹುದು. ಈ ಹಿಂದೆ ಯಾವ ರೀತಿ ಕಾಮಗಾರಿ ಮಾಡಿದ್ದಾರೆ ಎಂಬುದನ್ನ ತಿಳಿಯಲಿ. ನಂತರ ಕಾಮಗಾರಿ ಮುಂದುವರೆಸಲಿ.

ಚಾಮುಂಡಿ ಬೆಟ್ಟದ ಅಭಿವೃದ್ಧಿ ಕೂಡ ಆಗಬೇಕಿದೆ. ನನ್ನ ಅನುಮತಿಗಿಂತ ಕಾಮಗಾರಿಗೆ ವಿರೋಧ ಮಾಡಿರುವವರ ಅನುಮತಿ ತುಂಬಾ ಮುಖ್ಯ. ಅಧಿಕಾರಿಗಳು ತರಾತುರಿಯಲ್ಲಿ ಮಾಡ್ತಿರೋದು ಯಾಕೆ ಎಂಬುದು ಗೊತ್ತಿಲ್ಲ. ಜನರ ಅಭಿಪ್ರಾಯವನ್ನು ಪಡೆದು ಕಾಮಗಾರಿ ಮುಂದುವರೆಸಲಿ ಎಂದು ಸಂಸದ ಯದುವೀರ್ ಹೇಳಿಕೆ ನೀಡಿದರು.