Categories: ಮೈಸೂರು

ಮೋದಿ ಬಂದು ಜೆಡಿಎಸ್ ತಿಥಿ ಮಾಡಿದರು: ಜಿ.ಟಿ.ದೇವೇಗೌಡ

ಮೈಸೂರು: ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಮೈಸೂರು ಭಾಗಕ್ಕೆ ದಂಡೆತ್ತಿ ಬಂದರೂ ಗೆದ್ದಿದ್ದು ಮಾತ್ರ ಒಂದು ಸ್ಥಾನ. ಅವರು ಜೆಡಿಎಸ್ ತಿಥಿ ಮಾಡಿದ್ದಲ್ಲದೆ ಬಿಜೆಪಿಯ ಕತೆಯನ್ನೂ ಮುಗಿಸಿದರೂ ಎಂದು ಶಾಸಕ ಜಿ.ಟಿ.ದೇವೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಕುವೆಂಪುನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಧನ್ಯತಾ ಸಮಾಗಮ ಕಾರ್ಯಕ್ರಮದಲ್ಲಿ ಮತದಾರರು, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಅವರು, ಬಿಜೆಪಿ ಕಟ್ಟಿ ಬೆಳೆಸಿದವರು ಯಡಿಯೂರಪ್ಪ. ಅವರನ್ನೇ ಬದಿಗಿಟ್ಟು ಪಕ್ಷ ಕಟ್ಟಲು ಮುಂದಾದರು. ಉತ್ತರ ಕರ್ನಾಟಕದಲ್ಲಿ ಪ್ರಚಾರ ಮಾಡುವ ಬದಲು ಮೈಸೂರು ಭಾಗಕ್ಕೆ ಬಂದರು. ಆದರೆ, ಗೆದ್ದಿದ್ದು ಎಷ್ಟು ಸ್ಥಾನ? ಹಿಜಾಬ್, ಹಲಾಲ್ ಎಂದು ಕೋಮು ಭಾವನೆ ಕೆರಳಿಸಿ ಅಲ್ಪಸಂಖಾತರನ್ನು ದೂರವಿಟ್ಟರು. ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಈಗ ಸಿದ್ದರಾಮಯ್ಯ-ಡಿ.ಕೆ.ಶಿವಕುಮಾರ್ ಜೋಡಿ ಹುಲಿಯಾಗಿದ್ದಾರೆ. ಬಿಜೆಪಿಯವರು ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ಜೆಡಿಎಸ್‌ನಲ್ಲಿ ಬೇಸರಗೊಂಡಿದ್ದ ನನ್ನೊಂದಿಗೆ ಮಾತನಾಡಿದ್ದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಹಾಗೂ ರಣದೀಪ್ ಸುರ್ಜೆವಾಲಾ ಹರೀಶ್‌ಗೌಡರನ್ನು ಲೋಕಸಭೆಗೆ ನಿಲ್ಲಿಸಿ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನೀವು ನಿಲ್ಲಿ, ಸರ್ಕಾರ ಬಂದರೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ, 2013ರಲ್ಲಿ ಹುಣಸೂರಿನಿಂದ ಸ್ಪರ್ಧೆ ಮಾಡಿದ್ದರಿಂದ ಅವಕಾಶ ಸಿಕ್ಕಿರಲಿಲ್ಲ. ಹರೀಶ್‌ಗೌಡ ಹತ್ತು ವರ್ಷಗಳಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದರಿಂದ ಶಾಸಕರನ್ನಾಗಿಯೇ ಮಾಡುವಂತೆ ಮುಖಂಡರು, ಯುವಕರು ಒತ್ತಡ ಹೇರಿದ್ದರು. ಹೀಗಾಗಿ ಈ ಬಾರಿ ಹುಣಸೂರಿನಿಂದ ಸ್ಪರ್ಧಿಸಬೇಕಾಯಿತು ಎಂದರು.

ನಾನು ಮತ್ತು ಸಿದ್ದರಾಮಯ್ಯ ಒಟ್ಟಿಗೆ ರಾಜಕಾರಣ ಮಾಡಿಕೊಂಡು ಬಂದವರು. ಅವರ ವಿರುದ್ಧ ಚುನಾವಣೆಗೆ ನಿಲ್ಲುವ ಮನಸ್ಸಿರಲಿಲ್ಲ. 2013ರಲ್ಲಿ ನನ್ನ ತವರಾದ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಿದೆ. ಮೂವರು ಒಕ್ಕಲಿಗರು ನಿಂತಿರುವ ಕಾರಣ ಜಿ.ಟಿ.ದೇವೇಗೌಡ ಸೋಲುತ್ತಾನೆಂದು ಹೇಳಿದರೂ ಕ್ಷೇತ್ರದ ಜನರು ಕೈಬಿಡಲಿಲ್ಲ. 2013ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವರು ಜಿ.ಟಿ.ದೇವೇಗೌಡರ ಮೇಲೆ ತನಿಖೆ ನಡೆಸಲು ಲೋಕಾಯುಕ್ತ, ಸಿಐಡಿಗೆ ಕೊಡಿ ಎಂದು ಒತ್ತಾಯಿಸಿದ್ದರು. ಆದರೆ, ತನಿಖೆ ಏನಾಯ್ತು? ಕೆಲವರು ಅಪ್ಪ-ಮಗನನ್ನು ಹೇಗಾದರೂ ಮಾಡಿ ಜೈಲಿಗೆ ಕಳುಹಿಸಬೇಕು ಎಂದು ಕನಸು ಕಂಡಿದ್ದರು. ಆದರೆ, ನಾವೆಂದಿಗೂ ಸತ್ಯ, ಪ್ರಾಮಾಣಿಕತೆ ಬಿಟ್ಟು ನಡೆದಿಲ್ಲ ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 8 ಜಿಪಂ, ತಾಲೂಕು ಪಂಚಾಯಿತಿಯಲ್ಲಿ ಅಧಿಕಾರ ಹಿಡಿದಿದ್ದೆವು. ಬಿಜೆಪಿಯವರು ಸಿಎಂ ಆಗಿದ್ದಾಗಲೂ ಮೈಮುಲ್‌ನಲ್ಲಿ ಗೆದ್ದಿದ್ದೇವೆ. ಜಿ.ಪಂ, ತಾ.ಪಂ ಚುನಾವಣೆಯಲ್ಲಿ ಮುಖಂಡರು, ಕಾರ್ಯಕರ್ತರು ಎದುರಿಸಲು ಸಜ್ಜಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಬೆಳವಾಡಿ ಶಿವಮೂರ್ತಿ, ಆರ್.ಲಿಂಗಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ನರಸಿಂಹಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಗಂಗಾಧರಗೌಡ, ಹಿನಕಲ್ ರಾಜು, ಗೆಜ್ಜಗಳ್ಳಿ ಲೋಕೇಶ್, ನಾಗನಹಳ್ಳಿ ದಿನೇಶ್, ಎಸ್‌ಸಿ ಘಟಕ ರಾಜ್ಯ ಅಧ್ಯಕ್ಷ ಶಿವಕುಮಾರಸ್ವಾಮಿ ಸೇರಿದಂತೆ ಹಲವರು ಭಾಗವಹಿಸಿದ್ದರು.

 

Sneha Gowda

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

4 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

4 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

4 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

5 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

5 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

5 hours ago