Categories: ಮೈಸೂರು

ದಸರಾ ಕವಿಗೋಷ್ಠಿಯಲ್ಲಿ 250ಕ್ಕೂ ಹೆಚ್ಚು ಕವಿಗಳು ಭಾಗಿ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಕವಿಗೋಷ್ಠಿ ವೈವಿಧ್ಯಪೂರ್ಣವಾಗಿದೆ. ಅ.17ರಿಂದ 21ರವರೆಗೆ 7 ವಿಭಾಗಗಳಲ್ಲಿ ಕವಿಗೋಷ್ಠಿ ಜರುಗಲಿದೆ. 250ಕ್ಕೂ ಹೆಚ್ಚು ಭಾಗಿಗಳು ಪಾಲ್ಗೊಳ್ಳುತ್ತಿದ್ದಾರೆ.

ನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಉಪ ಸಮಿತಿ ಉಪ ವಿಶೇಷಾಧಿಕಾರಿ ಡಾ.ಎಂ.ದಾಸೇಗೌಡ ಪೋಸ್ಟರ್ ಲೋಕಾರ್ಪಣೆ ಮಾಡಿ ವಿವರ ನೀಡಿ, ಅ.17ರಂದು ಬೆಳಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ಕಾವ್ಯ ಸಂಭ್ರಮವನ್ನು ಕವಿ ಜಯಂತ ಕಾಯ್ಕಿಣಿ ಉದ್ಘಾಟಿಸುವರು. ಶಾಸಕ ಕೆ.ಹರೀಶ್‌ಗೌಡ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಾಹಿತಿ ಕುಂ.ವೀರಭದ್ರಪ್ಪ ಅತಿಥಿಗಳಾಗಿ ಪಾಲ್ಗೊಳ್ಳುವರು. ಗುರುರಾಜ್ ಮೈಸೂರು, ದೇವಾನಂದ ವರಪ್ರಸಾದ್ ತಂಡದವರಿAದ ಜಾನಪದ ಗಾಯನ ಇರಲಿದೆ ಎಂದು ಹೇಳಿದರು.

ಅ.18ರಂದು ಬೆಳಗ್ಗೆ 11 ಗಂಟೆಗೆ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಚಿಗುರು ಕವಿಗೋಷ್ಠಿಯನ್ನು ಶಾಸಕ ಹರೀಶ್‌ಗೌಡ ಉದ್ಘಾಟಿಸುವರು. ಕವಯತ್ರಿ ಡಾ.ಎನ್.ಕೆ.ಲೋಲಾಕ್ಷಿ, ಮಕ್ಕಳ ಸಾಹಿತಿ ಫಾ.ಗು.ಸಿದ್ದಾಪುರ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಮಹಿಳಾ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಸವಿತಾ ನಾಗಭೂಷಣ ವಹಿಸುವರು. ಕಲಾವಿದ ಚಿತ್ಕಾಳ ಬಿರಾದರ್, ಕವಿ ಸತೀಶ್ ಕುಲಕರ್ಣಿ ಭಾಗವಹಿಸುವರು.

ಅ.19ರಂದು ಬೆಳಗ್ಗೆ 11 ಗಂಟೆಗೆ ರಾಣಿಬಹದ್ದೂರ್ ಸಭಾಂಗಣದಲ್ಲಿ ಪ್ರಾದೇಶಿಕ ಕವಿಗೋಷ್ಠಿಯನ್ನು ಸಾಹಿತಿ ಎಸ್.ಜಿ.ಸಿದ್ಧರಾಮಯ್ಯ ಉದ್ಘಾಟಿಸುವರು. ಚ.ಸರ್ವಮಂಗಳ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಎಚ್.ಟಿ. ಪೋತೆ ಅತಿಥಿಯಾಗಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಯುವ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಯತ್ರಿ ಡಾ.ವಿನಯಾ ಒಕ್ಕುಂದ ವಹಿಸುವರು. ಶಾಸಕ ಶ್ರೀವತ್ಸ, ಕವಿ ಡಾ.ಎಚ್.ಸಿ. ಸತ್ಯನಾರಾಯಣ ಭಾಗವಹಿಸುವರು.

ಅ.19ರಂದು ಸಂಜೆ 7 ಗಂಟೆಗೆ ಕ್ಲಾಸಿಕ್ ಕನ್ವೆನ್ಷನ್ ಹಾಲ್‌ನಲ್ಲಿ ಉರ್ದು ಕವಿಗೋಷ್ಠಿ ನಡೆಯಲಿದೆ. ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು. ಶಾಸಕರಾದ ತನ್ವೀರ್ ಸೇಠ್, ಜಿ.ಟಿ.ದೇವೇಗೌಡ ಭಾಗವಹಿಸುವರು. ಅ.21ರಂದು ಕಲಾಮಂದಿರದಲ್ಲಿ ಪ್ರಧಾನ ಕವಿಗೋಷ್ಠಿ ನಡೆಯಲಿದೆ. ಕವಯತ್ರಿ ಶಶಿಕಲಾ ವಸ್ತçದ ಉದ್ಘಾಟಿಸುವರು. ಕವಿ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅಧ್ಯಕ್ಷತೆ ವಹಿಸುವರು. ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕ ಕೆ.ಹರೀಶ್‌ಗೌಡ ಭಾಗವಹಿಸುವರು ಎಂದು ಹೇಳಿದರು.

ಹಾಸ್ಯ-ಚುಟುಕು ಕವಿಗೋಷ್ಠಿಯಲ್ಲಿ 20, ಚಿಗುರು ಕವಿಗೋಷ್ಠಿ 40, ಮಹಿಳಾ ಕವಿಗೋಷ್ಠಿ 40, ಪ್ರಾದೇಶಿಕ ಕವಿಗೋಷ್ಠಿಯಲ್ಲಿ 42, ಯುವ ಕವಿಗೋಷ್ಠಿಯಲ್ಲಿ 40, ಉರ್ದು ಕವಿಗೋಷ್ಠಿಯಲ್ಲಿ 20, ಪ್ರಧಾನ ಕವಿಗೋಷ್ಠಿಯಲ್ಲಿ 40 ಕವಿಗಳು ಪಾಲ್ಗೊಳ್ಳುವರು.

ದಸರಾ ಕವಿಗೋಷ್ಠಿ ಉಪ ಸಮಿತಿ ಕಾರ್ಯಾಧ್ಯಕ್ಷೆ ಪ್ರೊ.ವಿಜಯಕುಮಾರಿ ಎಸ್.ಕರಿಕಲ್, ಕಾರ್ಯದರ್ಶಿ ಗಿರಿಧರ್ ಭಾಗವಹಿಸಿದ್ದರು.

Ashika S

Recent Posts

ಅವರೆಕಾಳು ಕಚೋರಿ ಮನೆಯಲ್ಲೇ ಮಾಡುವುದು ಹೇಗೆ?

ಬಿಸಿ, ಬಿಸಿ ಅವರೆ ಕಚೋರಿಯನ್ನು ಮನೆಯಲ್ಲಿಯೇ ಮಾಡಿ ಸವಿಯುವುದು ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ತಯಾರಿಯ ಬಗೆಗಿನ ಮಾಹಿತಿ.

17 mins ago

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

25 mins ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

28 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

40 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

43 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

44 mins ago