ಮೈಸೂರು : ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ರಾದ ಘಟನೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿರುವ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.
ನ್ಯೂ ಇಯರ್ ದಿನದಂದು ಕೇಕ್ ಕಟ್ ಮಾಡಿ ಉಳಿದಿದ್ದ ಕೇಕನ್ನು ಎರಡು ದಿನಗಳ ನಂತರ ಮಕ್ಕಳು ತಿಂದಿದ್ದಾರೆಂದು ಹೇಳಲಾಗಿದೆ. ಕೇಕ್ ಸೇವಿಸಿದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಉಂಟಾಗಿದೆ. ಬೋಳನಹಳ್ಳಿಯ ಆಯುಷ್ಮಾನ್ ಆರೋಗ್ಯ ಕೇಂದ್ರಕ್ಕೆ ಮಕ್ಕಳು ದಾಖಲಾಗಿದ್ದಾರೆ.
ಚಿಕಿತ್ಸೆ ನಂತರ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದಾರೆ. ಕೇಕ್ ತಿಂದು ಅಸ್ವಸ್ಥರಾಗಿದ್ದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯದ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ್ ಮಾಹಿತಿ ಪಡೆದಿದ್ದಾರೆ. ನಿರ್ಲಕ್ಷ್ಯತೆ ವಹಿಸಿದ ಶಾಲಾ ಮುಖ್ಯೋಪಾದ್ಯಾಯ ಅಶ್ವತ್ಥ್‌ರಿಗೆ ಬಿಇಓ ಕ್ಲಾಸ್ ತೆಗೆದುಕೊಂಡಿದ್ದಾರೆ.