Bengaluru 23°C
Ad

ರಘುಪತಿ ಭಟ್‌ ಅವರಿಗೆ ಎಂಎಲ್‌ಸಿ ಟಿಕೆಟ್‌ ನೀಡದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪ್ರತಾಪ್‌ ಸಿಂಹ

ಮೈಸೂರು ಸಂಸದ ಪ್ರತಾಪ್‌ ಸಿಂಹ ಮಾಜಿ ಶಾಸಕ ರಘುಪತಿ ಭಟ್‌ ಅವರಿಗೆ ಎಂಎಲ್‌ಸಿ ಟಿಕೆಟ್‌ ನೀಡದ್ದಕ್ಕೆ   ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರು: ಮೈಸೂರು ಸಂಸದ ಪ್ರತಾಪ್‌ ಸಿಂಹ ಮಾಜಿ ಶಾಸಕ ರಘುಪತಿ ಭಟ್‌ ಅವರಿಗೆ ಎಂಎಲ್‌ಸಿ ಟಿಕೆಟ್‌ ನೀಡದ್ದಕ್ಕೆ   ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ  ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಅವರು, ಉಡುಪಿ ಶಾಲೆಯೊಂದರಲ್ಲಿ ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್ಟರಿಗೆ ಎಂಎಲ್‌ಎ ಟಿಕೆಟ್‌ ಸಿಗಲಿಲ್ಲ ಎಂಎಲ್‌ಸಿ ಟಿಕೆಟ್ಟನ್ನೂ ಕೊಟ್ಟಿಲ್ಲ.

ಸಾಲದೆಂಬಂತೆ ಪಕ್ಷದಿಂದಲೂ ಉಚ್ಛಾಟನೆಗೆ ಒಳಗಾಗಿ ಬುರ್ಖಾ ಸ್ಟೂಡೆಂಟ್ ಅಸ್ಸಾದಿಯಿಂದ ಗೇಲಿಗೆ ಒಳಗಾಗುವ ಪರಿಸ್ಥಿತಿ ಹಿಂದುತ್ವವಾದಿಗಳಿಗೆ ಬಂದಿದ್ದು ದುರದೃಷ್ಟಕರ ಎಂದು ಬರೆದುಕೊಂಡಿದ್ದಾರೆ.

ರಘುಪತಿ ಭಟ್‌ ಅವರಿಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್‌ ನಿರಾಕರಿಸಲಾಗಿತ್ತು. ಈ ಬಾರಿ ಪದವೀಧರ ಶಿಕ್ಷಕರ ಕ್ಷೇತ್ರ ಟಿಕೆಟ್‌ ಸಿಗಬಹುದು ಎಂದು ಎಂಬ ನಿರೀಕ್ಷೆಯಲ್ಲಿ ರಘುಪತಿ ಭಟ್ಟರಿದ್ದರು. ರಘುಪತಿ ಭಟ್‌ಗೆ ಈ ಟಿಕೆಟ್‌ ಕೈತಪ್ಪಿದ್ದು,ಪಕ್ಷೇತರವಾಗಿ ಕಣಕ್ಕೆ ಇಳಿದಿದ್ದಾರೆ. ಈ ಕಾರಣದಿಂದಾಗಿ ರಘುಪತಿ ಭಟ್ಟರನ್ನು ಪಕ್ಷದಿಂದ 6 ವರ್ಷ ಉಚ್ಚಾಟನೆ ಮಾಡಿದೆ.

Ad
Ad
Nk Channel Final 21 09 2023
Ad