ತಿ. ನರಸೀಪುರ: ಸಂಸದ ಸುನಿಲ್ ಬೋಸ್ ರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಲಾಯಿತು. ಟಿ ನರಸೀಪುರ ವಿಧಾನಸಭಾ ಕ್ಷೇತ್ರದ ಚೌಹಳ್ಳಿ ಮಾದಾಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಸದ ಸುನಿಲ್ ಬೋಸ್ ಭೇಟಿ ನೀಡಿದರು.

4.5 ಕೋಟಿ ರೂಗಳ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಸಂಸದ ಸುನಿಲ್ ಬೋಸ್ ರಿಂದ ಚಾಲನೆ ನೀಡಿದರು. ನರಸೀಪುರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಅಭಿವೃದ್ಧಿಯಲ್ಲಿ ಮಾದರಿ ಕ್ಷೇತ್ರವನ್ನಾಗಿಸುವುದೇ ನಮ್ಮ ಗುರಿ ಎಂದು ಸಂಸದ ಸುನಿಲ್ ಬೋಸ್ ಹೇಳಿಕೆ ನೀಡಿದರು.