ಮೈಸೂರು: ಸೈಟ್ ಹಂಚಿಕೆ ಹಗರಣ ಸಂಬಂಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ.ದಿನೇಶ್‌ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ಮುಡಾ ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು.
ಆದರೆ ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಅಮಾನತುಗೊಳಿಸಲಾಗಿದೆ. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಸ್ಥಳ ನಿರೀಕ್ಷಣೆಯಲ್ಲಿದ್ದ ಇವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತಿನಲ್ಲಿರಿಸಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಉಮಾದೇವಿ ಆದೇಶದಲ್ಲಿ ತಿಳಿಸಿದ್ದಾರೆ.

