Categories: ಮೈಸೂರು

ಮುಳಬಾಗಿಲು: ಜೆಡಿಎಸ್ ಅಧ್ಯಕ್ಷರು ಕಾರ್ಯಕರ್ತರ ಮಾತು ಕೇಳಬೇಕು- ಹಾಲಂಗೂರು ಶಿವಣ್ಣ

ಮುಳಬಾಗಿಲು: ಇಲ್ಲಿನ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಜೆಡಿಎಸ್ ಪಕ್ಷದ ಅಧ್ಯಕ್ಷರು ತಾಲೂಕಿನ ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಕಲಿಯಬೇಕಾಗುತ್ತದೆ ಎಂದು ಜೆಡಿಎಸ್ ತಾಲೂಕು ಮಾಜಿ ಅಧ್ಯಕ್ಷ ಹಾಲಂಗೂರು ಶಿವಣ್ಣ ಎಚ್ಚರಿಕೆ ನೀಡಿದ್ದಾರೆ.

ತಾಲೂಕಿನ ಆಲಂಗೂರು ಗ್ರಾಮದಲ್ಲಿ ದಿವಂಗತ ಮಾಜಿ ಸಚಿವ ಆಲಂಗೂರು ಶ್ರೀನಿವಾಸ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾದ ಸ್ವಾಭಿಮಾನಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಆಲಂಗೂರು ಶ್ರೀನಿವಾಸ್ ಅವರು ಜೆಡಿಎಸ್ ಪಕ್ಷವನ್ನು ಬಲಿ?ವಾಗಿ ಕಟ್ಟಿದ್ದಾರೆ. ಅವರ ನೆರಳಲ್ಲಿ ಬೆಳೆದ ಸಾಕ? ಮಂದಿ ಕಾರ್ಯಕರ್ತರು ಅಧಿಕಾರ ಇಲ್ಲದಿದ್ದರೂ ಸಹ ಪಕ್ಷದಲ್ಲಿಯೇ ಇದ್ದಾರೆ. ಅಂತಹ ಸ್ವಾಭಿಮಾನಿ ಕಾರ್ಯಕರ್ತರನ್ನು ಹಗುರವಾಗಿ ಮಾತನಾಡುವ ಪದ್ಧತಿ ನಿಲ್ಲಬೇಕು ಎಂದು ಬೇಸರ ವ್ಯಕ್ತಪಡಿಸಿದರು.

ಮಾಜಿ ಸಂಸದ ಕೆ.ಎಸ್.ಮುನಿಯಪ್ಪ ನಮಗೆ ತುಂಬಾ ಆತ್ಮೀಯರು, ಮಾಜಿ ಶಾಸಕ ಕೊತ್ತೂರು ಮಂಜುನಾಥ ಅವರು ಸಹ ಗೆಳೆಯರು, ಅದೇ ರೀತಿ ಶಾಸಕರಾದ ಎಚ್ ನಾಗೇಶ್ ಅವರು ಸಹ ಸಹೋದರ ಸಮಾನ ಅವರೆಲ್ಲರೂ ನಮ್ಮ ಮನೆಗೆ ಬಂದು ಹೋಗುವುದು ಸರ್ವೇಸಾಮಾನ್ಯ. ಆದರೆ ಕೆಲವರು ಶಿವಣ್ಣ ಪ್ಯಾಕೇಜ್ ಆಗಿದ್ದಾರೆ ಎಂದು ಹೇಳಿಕೊಳ್ಳುವುದು ಬಿಡಬೇಕು ಎಂದರು.

ವಿರೋಧ ಪಕ್ಷದ ನಾಯಕರು ನಮ್ಮ ಮನೆಗೆ ಬಂದರೂ ಸಹ ಅವರ ಪಕ್ಷದ ಪರವಾಗಿ ಯಾವುದೇ ಚುನಾವಣೆಯಲ್ಲಿ ಇವರ ಪರವಾಗಿ ಪ್ರಚಾರವನ್ನು ಮಾಡಿದಂತಹ ಉದಾಹರಣೆಗಳಿದ್ದರೆ ನೋಡಿಸಬಹುದು ಎಂದು ಸವಾಲು ಹಾಕಿದರು. ಮುಳಬಾಗಿಲು ಮೀಸಲು ಕ್ಷೇತ್ರ ವಾಗಿದ್ದು ಇಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸ್ವಾಭಿಮಾನಿ ಕಾರ್ಯಕರ್ತರ ಸಹಕಾರ ತುಂಬಾ ಅಗತ್ಯವಿದೆ ಎಂಬುದನ್ನು ಯಾರು ಮರೆಯಬಾರದು ಎಂದು ಹೇಳಿದರು.

ಹಿರಿಯ ಮುಖಂಡ ಚಾಮರೆಡ್ಡಿಹಳ್ಳಿ ಡಾ.ಸಿ.ಎನ್. ಪ್ರಕಾಶ್ ಮಾತನಾಡಿ, ಸಮೃದ್ಧಿ ಮಂಜುನಾಥ್ ಅವರಿಗೆ ಗ್ರಾ.ಪಂ, ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಪಕ್ಷದ ಸಮಿತಿಗಳನ್ನು ನಿರ್ಮಾಣ ಹಾಗೂ ಕಾರ್ಯಕರ್ತರ ಮನೆಮನೆ ಭೇಟಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚಿಸಿದ್ದೆ. ಆದರೆ ಇದುವರೆಗೆ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಅದೇ ರೀತಿ ನಮ್ಮ ತಾಲೂಕಿನಲ್ಲಿ ಆರು ಮಂದಿ ಶಕುನಿಗಳಿದ್ದಾರೆ, ಅವರ ಮಾತನ್ನು ಯಾರು ಕೇಳಬೇಡಿ ಎಂದು ಸಲಹೆ ನೀಡಿದರು.

ನಗರಸಭೆ ಅಧ್ಯಕ್ಷ ರಿಯಾಜ್, ಸದಸ್ಯ ನಾಗರಾಜ್, ಜಿ.ಪಂ ಮಾಜಿ ಸದಸ್ಯ ರಾಜ್ ಗೋಪಾಲ್, ಜೆಡಿಎಸ್ ನಗರ ಘಟಕದ ಅಧ್ಯಕ್ಷ ತೇಜೋರವಣ, ಸನ್ಯಾಸನಹಳ್ಳಿ ತಿಮ್ಮರಾಜು, ಸೊಣ್ಣೇಗೌಡ, ಮಲ್ಲೆಕುಪ್ಪ ಚಂದ್ರಶೇಖರ, ಗೊಲ್ಲಹಳ್ಳಿ ಸತೀಶ್ ಸೇರಿದಂತೆ ಸಾವಿರಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Sneha Gowda

Recent Posts

ಎಸ್​ಎಸ್​ಎಲ್​​​ಸಿ ಫಲಿತಾಂಶ; ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬೆಳ್ತಂಗಡಿ ವಿದ್ಯಾರ್ಥಿ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇದೀಗ ಪ್ರಕಟವಾಗಿದ್ದು, ಶೇ 73.4 ಮಂದಿ ತೇರ್ಗಡೆಯಾಗಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

7 mins ago

ರೇವಣ್ಣ ಲೈಂಗಿಕ ಹಗರಣ: ಮಹಿಳಾ ಕಾಂಗ್ರೆಸ್ ನಿಂದ ಪೊರಕೆ ಹಿಡಿದು ಪ್ರತಿಭಟನೆ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ ಖಂಡಿಸಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್…

14 mins ago

ಎಸ್ಎಸ್​ಎಲ್​ಸಿ ಫಲಿತಾಂಶ: ಉಡುಪಿ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ

ಇಂದು 2023-24 ನೇ ಸಾಲಿನ SSLC ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

27 mins ago

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ : ಇಬ್ಬರು ಮಹಿಳೆಯರಿಗೆ ಗಾಯ

ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಹಿಮ್ಮುಂಜೆ ಬಳಿಯ…

30 mins ago

ಮಕ್ಕಳನ್ನು ಕೊಂದು ಮಹಿಳೆ ಆತ್ಮಹತ್ಯೆ : ಡೆತ್‌ನೋಟು ಪತ್ತೆ

ತನ್ನ ಮಕ್ಕಳಿಬ್ಬರನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ…

41 mins ago

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟ; ಇಲ್ಲಿ ಫಲಿತಾಂಶ ವೀಕ್ಷಿಸಿ

2023-24ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವು ಇಂದು ಪ್ರಕಟಗೊಂಡಿದೆ. ಕರ್ನಾಟಕದ ಒಟ್ಟು 2,750 ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಈ ಸಲದ…

48 mins ago