ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಲೆ ಮಾಡಿದ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.

ಕುರ್ಣೇಗಾಲದ ಜವರಪ್ಪ ಕೊಲೆಯಾಗಿದ್ದ ದುರ್ದೈವಿ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ ಸಿದ್ದೇಶ್ (32), ಕುರ್ಣೆಗಾಲ ಗ್ರಾಮದ ಅಮೃತಾ(26) ಬಂಧಿತ ಆರೋಪಿಗಳು. ಮೊನ್ನೆ ಕುರ್ಣೇಗಾಲ ಗ್ರಾಮದಲ್ಲಿ ವ್ಯಕ್ತಿ ಶವ ಪತ್ತೆಯಾಗಿತ್ತು. ಅನುಮಾನಸ್ಪ ರೀತಿಯಲ್ಲಿ ಶವ ಪತ್ತೆಯಾಗಿತ್ತು. ಗ್ರಾಮದ ಬಡ್ಡಯ್ಯ ಪುತ್ರ ಜವರಪ್ಪ ಕೊಲೆಯಾಗಿದ್ದ ವ್ಯಕ್ತಿ.

ರಸ್ತೆ ಬದಿಯಲ್ಲಿ ಮೃತ ದೇಹ ಪತ್ತೆಯಾಗಿತ್ತು. ಅನುಮಾನಸ್ಪದ ರೀತಿಯಲ್ಲಿ ಶವ ಪತ್ತೆಯಾಗಿದ್ದರಿಂದ ತನಿಖೆ ನಡೆಸುವಂತೆ ದೂರು ದಾಖಲಾಗಿತ್ತು. ಪತ್ನಿಯ ಅಕ್ರಮ ಸಂಬಂಧಕ್ಕೆ ಜವರಪ್ಪ ಕೊಲೆಯಾಗಿದ್ದಾರೆ. ದೂರು ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನ ಸರಗೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಸಿದ್ದೇಶ್, ಮೃತನ ಪತ್ನಿ ಅಮೃತಾ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ. ಗಂಡ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿ ಅಂತಾ ಆರೋಪಿಗಳು ಕೊಲೆ ಪ್ಲಾನ್ ಮಾಡಿದ್ದರು. ಅಮೃತಾ ಕುಮ್ಮಕ್ಕಿನಿಂದ ಪ್ರಿಯಕರನಿಂದ ಜವರಪ್ಪನ ಕೊಲೆ ಮಾಡಲಾಗಿದೆ. ಪೊಲೀಸರ ತನಿಖೆಯಲ್ಲಿ ಘಟನೆ ಬೆಳಕಿಗೆ ಬಂದಿದೆ.

ಕುರ್ಣೇಗಾಲ ಗ್ರಾಮದ ಜವರಪ್ಪ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಅಮೃತಾಳನ್ನ ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸಣ್ಣಪುಟ್ಟ ವಿಚಾರಕ್ಕೆ ಗಂಡ ಹೆಂಡತಿ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು.12 ದಿನಗಳ ಹಿಂದೆ ಮಕ್ಕಳೊಂದಿಗೆ ಹಬ್ಬಕ್ಕೆಂದು ಅಮೃತಾ ತವರಿಗೆ ಹೋಗಿದ್ದರು.

ಏ.16ರಂದು ಹೆಂಡತಿ ಮನೆಗೆ ಹೋಗಿ ಬರುತ್ತೇನೆಂದು ಎಂದು ಸಹೋದರನಿಗೆ ಜವರಪ್ಪ ಹೇಳಿದ್ದರು. ಆದರೆ ಮನೆಗೆ ವಾಪಸ್ ಬಂದಿಲ್ಲ. ಮಾರನೇ ದಿನ ಬೆಳಗ್ಗೆ 6.30ಕ್ಕೆ ಗ್ರಾಮದ ಸಮೀಪದ ರಸ್ತೆ ಬದಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಯಾರೋ ಕೊಲೆ ಮಾಡಿದ್ದಾರೆಂದು ದೂರು ದಾಖಲು ಮಾಡಿದ್ದ ಜವರಪ್ಪ ಸಹೋದರ ರವಿ ದೂರು ನೀಡಿದ್ದರು. ತನಿಖೆಗಾಗಿ ಮೂರು ಪೊಲೀಸ್ ತಂಡ ರಚನೆ ಮಾಡಲಾಗಿತ್ತು.