News Karnataka Kannada
Monday, May 06 2024
ಮೈಸೂರು

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

Mysore Jamb
Photo Credit : News Kannada

ಮೈಸೂರು: ಮೈಸೂರು ದಸರಾದ ಕೇಂದ್ರ ಬಿಂದು, ಪ್ರಮುಖ ಆಕರ್ಷಣೆ ಅಂದ್ರೆ ಅದು ಜಂಬೂ ಸವಾರಿ. ಇಂದು(ಅಕ್ಟೋಬರ್ 24) ವಿಜಯದಶಮಿಯಂದು ಜಂಬೂಸವಾರಿ ನಡೆಯಲಿದೆ. ಅರಮನೆಯ ಬಲರಾಮ ದ್ವಾರದಲ್ಲಿ ಮಧ್ಯಾಹ್ನ 1.46ರಿಂದ 2.08ರೊಳಗೆ ನಂದಿಧ್ವಜಕ್ಕೆ ಪೂಜೆ ನೆರವೇರಲಿದೆ. ಬಳಿಕ ಸಂಜೆ 4.40ರಿಂದ 5 ಗಂಟೆ ನಡುವೆ ಸಲ್ಲುವ ಶುಭ ಲಗ್ನದಲ್ಲಿ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ಮಹಿಷಾಸುರ ಮರ್ಧಿನಿ ಮೂರ್ತಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಇನ್ನು ವಿಶ್ವವಿಖ್ಯಾತ ದಸರಾ ಜಂಬೂಸವಾರಿಯಲ್ಲಿ ಸತತ ಮೂರು ಬಾರಿ 750 ಕೆ.ಜಿ. ಚಿನ್ನದ ಅಂಬಾರಿ ಹೊತ್ತು ಹ್ಯಾಟ್ರಿಕ್ ಸಾಧಿಸಿರುವ ಅಭಿಮನ್ಯು ಆನೆ ಈಗ 4ನೇ ಬಾರಿಗೆ ಅಂಬಾರಿ ಹೊರಲು ಸರ್ವ ಸನ್ನದ್ಧವಾಗಿದೆ. ಈ ಅಮೋಘ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಜನ ಕಾತುರದಿಂದ ಕಾಯುತ್ತಿದ್ದಾರೆ.

ವಿಜಯದಶಮಿ ಹಿನ್ನೆಲೆ ಬೆಳಗ್ಗೆಯಿಂದ ಅರಮನೆಯಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಲಿದೆ. ವಿಶ್ವವಿಖ್ಯಾತ ಅದ್ಧೂರಿ ಜಂಬೂಸವಾರಿಯಲ್ಲಿ ಈ ಬಾರಿ 14 ಆನೆಗಳು ಹಾಗೂ 47 ಸ್ತಬ್ದಚಿತ್ರಗಳು, ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗಿಯಾಗಲಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು