News Karnataka Kannada
Monday, April 29 2024
ಮೈಸೂರು

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ಕ್ಷಣಗಣನೆ

Dasara
Photo Credit : News Kannada

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ಬಾರಿ ಅತ್ಯಂತ ಸರಳವೂ ಹಾಗೂ ಅದ್ದೂರಿಯೂ ಅಲ್ಲದ ಸಾಂಪ್ರದಾಯಿಕ ದಸರಾವನ್ನು ಆಚರಿಸಲಾಗುವುದು ಎಂದು ಈಗಾಗಲೇ ಉಸ್ತುವರಿ ಸಚಿವರು ಹೆಳಿದ್ದಾರೆ.  ಕಳೆದ ದಿನ ದಸರಾ ಸಾಂಸ್ಕೃತಿಕ ಉಪಸಮಿತಿಯಿಂದ ಪೋಸ್ಟರ್ ಬಿಡುಗಡೆ, ದಸರಾ ವೆಬ್ ಸೈಟ್ ಗೆ ಚಾಲನೆ ನೀಡಲಾಗಿದೆ.

ಇನ್ನು ದಸರಾ ಆರಂಭದ ಕಾರ್ಯಕ್ರಮಗಳನ್ನು ನೋಡುವುದಾದರೇ ಅ.9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.

ಅ.15 ರಂದು 6 ಗಂಟೆಯಿಂದ 6:25ರ ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05 ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ.
ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ನಡೆಯಲಿದೆ. ಬಳಿಕ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ.

ಬೆಳಗ್ಗೆ 10:15ಕ್ಕೆ ಕಳಸ ಪೂಜೆ ಹಾಗೂ ಸಿಂಹಾಸನ ಪೂಜೆ ನೆರವೇರಲಿದೆ. ಅ.24 ರಂದು ವಿಜಯದಶಮಿ ಆಚರಣೆ ನಡೆಯಲಿದೆ. ಬೆಳಗ್ಗೆ 9:45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 11 ರಿಂದ 11:40ರ ವೇಳೆಗೆ ವಿಜಯದಶಮಿ ಮೆರವಣಿಗೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು