ಮೈಸೂರು: ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಇನ್ನೇನು ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದೆ. ಇದಕ್ಕೂ ಮುನ್ನಾ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ಬೆನ್ನಲ್ಲೇ ಮಳೆ ಸುರಿಯುತ್ತಿದೆ.ವರುಣನ ಸಿಂಚನದ ನಡುವೆಯೂ ಜನರು ಜಂಬೂ ಸವಾರಿಯನ್ನು ಕಣ್ ತುಂಬಿಕೊಳ್ಳುತ್ತಿದ್ದಾರೆ.
ಇಂದು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮೈಸೂರಲ್ಲಿ ಕಳೆಗಟ್ಟಿದೆ. ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ನಡೆದ ನಂದಿ ಧ್ವಜಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಪೂಜೆ ನೆರವೇರಿಸಿದರು. ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದಂತೆ ಆಗಿದೆ.

