ಮೈಸೂರು

ಮೈಸೂರು: ದಸರಾ ಮುದ್ದುಪ್ರಾಣಿ ಪ್ರದರ್ಶನದಲ್ಲಿ ಚಾರ್ಲಿ ಶ್ವಾನ

ಮೈಸೂರು: ದಸರಾ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ಅ.1ರಂದು ಜೆ.ಕೆ.ಮೈದಾನದಲ್ಲಿ ನಡೆಯಲಿದ್ದು,ಅ.2ರಂದು ನಗರದ ಹಾಕಿ ಮೈದಾನದಲ್ಲಿ ಮುದ್ದು ಪ್ರಾಣಿಗಳ ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಚಾರ್ಲಿ 777 ಸಿನಿಮಾ ಖ್ಯಾತಿಯ ಶ್ವಾನ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಈ ಸಂಬಂಧ ಮಾಹಿತಿ ನೀಡಿರುವ ರೈತ ದಸರಾ ಉಪ ವಿಶೇಷಾಧಿಕಾರಿ, ಜಿಪಂ ಉಪ ಕಾರ್ಯದರ್ಶಿ (ಅಭಿವೃದ್ಧಿ) ಡಾ.ಕೃಷ್ಣರಾಜು ಅವರು, ಸೆ.29ರಂದು ಗೋಪಾಲಕರು ಹಸುಗಳೊಂದಿಗೆ ಆಗಮಿಸಬೇಕು. 30ರಂದು ವಿಶ್ರಾಂತಿ,ಅ.1ರಂದು ಸ್ಪರ್ಧೆ ನಡೆಯಲಿದೆ ಎಂದು ತಿಳಿಸಿದರು.

ಮೈಸೂರು ನಗರ ಗೋಪಾಲಕರ ಸಂಘದ ಅಧ್ಯಕ್ಷ ಡಿ.ನಾಗಭೂಷಣ ಮಾತನಾಡಿ,ಸಂಘದಿಂದ ಪ್ರತಿ ವರ್ಷ ತೂಗುದೀಪ್ ಶ್ರೀನಿವಾಸ್ ಅವರ ಹೆಸರಿನಲ್ಲಿ ರಾಜ್ಯ ಮಟ್ಟದ ಹಾಲು ಕರೆಯುವ ಸ್ಪರ್ಧೆ ಏರ್ಪಡಿಸಲಾಗುತ್ತಿದೆ.5 ವರ್ಷಗಳಿಂದ ದಸರಾದಲ್ಲೂ ಸ್ಫರ್ಧೆ ನಡೆಯುತ್ತಿದೆ. ಕೊರೊನಾದಿಂದ 3 ವರ್ಷಗಳಿಂದ ಸ್ಪರ್ಧೆ ಆಯೋಜಿಸಲಾಗಿಲ್ಲ ಎಂದು ಹೇಳಿದರು.

ಮಳೆ ನೀರು ಸೋರದಂತೆ ಶಾಮಿಯಾನ ಹಾಕಬೇಕು.ಕುಡಿಯುವ ನೀರುವ್ಯವಸ್ಥೆ ಕಲ್ಪಿಸಬೇಕು.ಡ್ರಮ್ ನೀಡಬೇಕು. ಹಸಿಹುಲ್ಲು,ಒಣಹುಲ್ಲು ನೀಡಬೇಕು.ಸೊಳ್ಳೆ ನಿಯಂತ್ರಿಸಬೇಕು. ಶೆಡ್‌ಗೊಂದು ಫ್ಯಾನ್ ಅಳವಡಿಸಬೇಕು.ಗೋಪಾಲಕರಿಗೆ ಟೀಶರ್ಟ್,ಕ್ಯಾಪ್ ನೀಡಬೇಕು ಎಂದು ಮನವಿ ಮಾಡಿದರು.

ಹಾಲು ಕರೆಯುವ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ನೀಡಲಾಗುತ್ತದೆ. ಪ್ರಥಮ 50 ಸಾವಿರ ರೂ.,ದ್ವಿತೀಯ 40ಸಾವಿರ ರೂ.,ತೃತೀಯ 30 ಸಾವಿರ ರೂ.,20 ಸಾವಿರ ರೂ. ಸಮಾಧಾನಕರ ಬಹುಮಾನ ನೀಡಲಾಗುತ್ತದೆ ಎಂದು ವಿವರಿಸಿದರು.

ಅ.2ರಂದು ಮೈಸೂರು ಹಾಕಿ ಮೈದಾನದಲ್ಲಿ ಆಯೋಜಿಸಿರುವ ಮುದ್ದು ಪ್ರಾಣಿಗಳ ಪ್ರದರ್ಶನದ ವೇಳೆ ಚಾರ್ಲಿ 777 ಸಿನಿಮಾ ಖ್ಯಾತಿಯ ಶ್ವಾನ ಭಾಗವಹಿಸಲಿದೆ. ಚಾರ್ಲಿ ಸಿನಿಮಾದ ನಿರ್ದೇಶಕರು ಮತ್ತು ನಟ ರಕ್ಷಿತ್ ಶೆಟ್ಟಿ ಆಹ್ವಾನಕ್ಕೆ ಪ್ರಯತ್ನಿಸುವುದಾಗಿ ರೈತ ದಸರಾ ಸಮಿತಿ ಕಾರ್ಯದರ್ಶಿ ಡಾ.ಷಡಕ್ಷರಿ ಮೂರ್ತಿ ತಿಳಿಸಿದರು.

ವಿವಿಧ ಜಾತಿಯ ಶ್ವಾನಗಳು, ಪಕ್ಷಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿವೆ. ಗಣಪತಿ ಸಚ್ಚಿದಾನಂದ ಆಶ್ರಮದಿಂದ ಗಿಣಿಗಳನ್ನು ತರಲಾಗುವುದು. ಆಕ್ವೇರಿಯಂ ಮೀನುಗಳ ಪ್ರದರ್ಶನ ಇರುತ್ತದೆ. ಎಲ್ಲ ಪಶು ಆಸ್ಪತ್ರೆಗಳಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ರೈತ ದಸರಾ ಕಾರ್ಯಾಧ್ಯಕ್ಷ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಚಂದ್ರಶೇಖರ್ ಮಾತನಾಡಿ,ಸೆ.30 ರಂದು ಬೆಳಗ್ಗೆ 9,30ಕ್ಕೆ ಎತ್ತಿನ ಬಂಡಿಯಲ್ಲಿ ಮೆರವಣಿಗೆ, ಬೆಳಿಗ್ಗೆ 10.30ಕ್ಕೆ ಕೃಷಿ ವಸ್ತುಪ್ರದರ್ಶನ ಉದ್ಘಾಟನೆ, ರೈತರಿಗೆ ಸನ್ಮಾನ,ರೈತರೊಂದಿಗೆ ವಿಚಾರ ವಿನಿಮಯ ನಡೆಯಲಿದೆ ಎಂದು ಮಾಹಿತಿ ನೀಡಿದರು.

Ashika S

Recent Posts

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

13 mins ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

36 mins ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

52 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

1 hour ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

2 hours ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

2 hours ago