Categories: ಮೈಸೂರು

ಮೈಸೂರು: ಪ್ರವಾಸೋದ್ಯಮ ಸರ್ಕಿಟ್ ಶೀಘ್ರವೇ ಕಾರ್ಯರಂಭವಾಗಲಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಮೈಸೂರು: ಪ್ರವಾಸೋದ್ಯಮಕ್ಕೆ ಸರ್ಕಾರ ಉತ್ತೇಜನ ನೀಡಿದ್ದು ಮೈಸೂರು ಪ್ರವಾಸೋದ್ಯಮ ಸರ್ಕಿಟ್ ಶೀಘ್ರವೇ ಕಾರ್ಯರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಅರಮನೆ ಆವರಣದ ಬಲರಾಮ ದ್ವಾರದ ಬಳಿ ನಂದಿಧ್ವಜ ಪೂಜೆಯನ್ನು ನೆರವೇರಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಮೈಸೂರು, ಹಳೇಬೀಡು, ಬೇಲೂರು ಸೋಮನಾಥಪುರ ಸೇರಿದಂತೆ ಹಲವು ಪ್ರಮುಖ ಸ್ಥಳಗಳನ್ನು ಒಳಗೊಂಡಿದೆ. ವೆಬ್ ಸೈಟ್ ನಲ್ಲಿ ಬುಕ್ ಮಾಡುವ ಸೌಲಭ್ಯವಿರಲಿದೆ ಎಂದರು.

ಉತ್ತರದಲ್ಲಿ ಹಂಪಿ, ದಕ್ಷಿಣದಲ್ಲಿ ಮೈಸೂರು ದಸರಾವನ್ನ ಟೂರಿಸ್ಟ ಸರ್ಕಿಟ್ ನ್ನು ಅರ್ಥಪೂರ್ಣವಾಗಿ ಮಾಡಲಾಗುತ್ತಿದೆ. ಇದರ ಅನುಭವದ ಆಧಾರದ ಮೇಲೆ ಸೂಕ್ತ ರೂಪುರೇಷೆಗಳನ್ನು ನೀಡಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

ಪಾರಂಪರಿಕ ವೈಭವ ಮರುಕಳಿಸಿದೆ

ಈ ಬಾರಿ ದಸರಾ ಎಲ್ಲಾ ಕಾರ್ಯಕ್ರಮಗಳು ವಿಜ್ರೃಂಭಣೆಯಿಂದ ಜರುಗಿವೆ. ನಂದಿ ಪೂಜೆ, ಜಂಬೂ ಸವಾರಿ, ದೇವಿಯನ್ನು ಅರಮನೆಗೆ ತೆಗೆದುಕೊಂಡು ಹೋಗಿರುವುದು ಎಲ್ಲವೂ ಈ ವರ್ಷ ಅರ್ಥಪೂರ್ಣ ವಾಗಿ, ಉತ್ಸಾಹದಿಂದ ನಡೆದಿದೆ. ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಿದೆ. ರಾಜ್ಯ, ದೇಶ, ವಿದೇಶದಿಂದ ಲಕ್ಷಾಂತರ ಜನರು ಬಂದದು ಪಾಲ್ಗೊಂಡಿದ್ದಾರೆ ಮಹಾಜನತೆ ಶಾಂತಿಯಿಂದ ನಡೆಸಿಕೊಟ್ಟಿದ್ದಕ್ಕಾಗಿ ಅಭಿನಂದಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿ ಮೊದಲಿನ ದಸರಾ ಸಂಭ್ರಮದ ಕಳೆ ಮೂಡಿದೆ. ಮತ್ತೊಮ್ಮೆ ಪಾರಂಪರಿಕವಾದ ವೈಭವ ನೋಡಲು ಸಾಧ್ಯವಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಸಕರು, ಸಂಸರು, ಆಡಳಿತ ವರ್ಗದವರು ಸಹಕರಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣಕ್ಕೆ ಮೈಸೂರಿಗೆ ಬರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. ನಾಡ ಹಬ್ಬ, ದೇವಿ ಆರಾಧನೆಯ ಈ ಪರಂಪರೆಯ ಮುಂದಿನ ದಿನಗಳಲ್ಲಿಯೂ ವಿಜ್ರೃಂಭಣೆಯಿಂದ ನಡೆಯಲಿ ಎಂದರು.

ದೀಪಾಲಂಕಾರ ಹತ್ತುದಿನಗಳ ಕಾಲ ವಿಸ್ತರಣೆ

ಬಹುಜನರ ಬೇಡಿಕೆಯ ಮೇರೆಗೆ ದಸರಾ ದೀಪಾಲಂಕಾರವನ್ನು ಹತ್ತು ದಿನಗಳ ಕಾಲ ವಿಸ್ತರಣೆ ಮಾಡಲು ತೀರ್ಮಾನಿಸಲಾಗಿದೆ ಎಂದರು. .

ನಮ್ಮಲ್ಲಿರುವ ತಾಮಸ ಗುಣಗಳ ವಧೆ ಮಾಡಬೇಕು ಈ ದಿನ ತಾಯಿ ಚಾಮುಂಡೇಶ್ವರಿ ಮಹಿಷಾಸುರನ ಮೇಲೆ ಸುದೀರ್ಘ ಯುದ್ಧ ಮಾಡಿ ವಿಜಯ ಸಾಧಿಸಿದ ದಿನ. ಇದರ ಅರ್ಥ ರಾಕ್ಷಸೀ ಶಕ್ತಿಗಳ ಮೇಲೆ ಶಿಷ್ಟರ ವಿಜಯ ಎಂದಿದೆ.

ಇದನ್ನು ಅರ್ಥಮಾಡಿಕೊಂಡು ನಮ್ಮ ಬದುಕಿನಲ್ಲಿ ಇವುಗಳನ್ನು ಅಳವಡಿಸಿಕೊಳ್ಳಬೇಕಿದೆ. ನಮ್ಮಲ್ಲಿರುವ ತಾಮಸ ಗುಣಗಳನ್ನು ಸಂಪೂರ್ಣವಾಗಿ ವಧೆ ಮಾಡಿ ಶ್ರೇಷ್ಠ ವಾದ, ಪರೋಪಕಾರಿ ಗುಣಗಳನ್ನು ರೂಢಿಸಿಕೊಂಡಾಗ ಮಾತ್ರ ಮನುಕುಲ ಉದ್ದಾರವಾಗುತ್ತದೆ.

ಇಂಥ ಶಕ್ತಿ ದೇವಿ ನೀಡಲಿ. ರೈತರ ಮಳೆ ಬೆಳೆ ಉತ್ತಮವಾಗಿ ಆಗಲಿ. ಸಕಲ ಕನ್ನಡ ನಾಡಿಗೆ, ಜನತೆಗೆ ಮಂಗಳ ಉಂಟಾಗಲಿ, ಸುಭಿಕ್ಷವಾಗಲಿ. ಎಲ್ಲರೂ ಸುಖ, ಶಾಂತಿ, ನೆಮ್ಮದಿಯಿಂದ ಬಾಳಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು.

Ashika S

Recent Posts

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

45 seconds ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

25 mins ago

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

36 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

47 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

57 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

1 hour ago