Categories: ಮೈಸೂರು

ಮೈಸೂರು: ಚಾಮುಂಡೇಶ್ವರಿ ವಾರ್ಷಿಕ ರಥೋತ್ಸವಕ್ಕೆ ಸಾಕ್ಷಿಯಾದ ಭಕ್ತರು

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಭಾನುವಾರ  ನಡೆದ ಚಾಮುಂಡೇಶ್ವರಿ ವಾರ್ಷಿಕ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು.

ಸಿಂಹವಾಹಿನಿ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ಚಾಮುಂಡೇಶ್ವರಿ ದೇವಿಗೆ ಬೆಳಗ್ಗೆ 7.10 ರಿಂದ 8.10 ರ ಶುಭ ಮುಹೂರ್ತದಲ್ಲಿ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರು ಪೂಜೆ ಸಲ್ಲಿಸಿದರು. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ, ಶಾಸಕ ಜಿ.ಟಿ.ದೇವೇಗೌಡರು ಪೂಜೆ ಸಲ್ಲಿಸಿದ ಬಳಿಕ ರಥದೊಳಗೆ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು. ಯದುವೀರ ಕೂಡ ರಥವನ್ನು ಎಳೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಪಟಾಕಿಗಳ ಸದ್ದು, ವಾದ್ಯಗಳ ಸದ್ದು, ಕಲಾ ತಂಡಗಳ ಪ್ರದರ್ಶನ ರಥೋತ್ಸವದ ರಂಗು ಹೆಚ್ಚಿಸಿದವು.

ರಥಬೀದಿಯ ಇಕ್ಕೆಲಗಳಲ್ಲಿ ನೆರೆದಿದ್ದ ಭಕ್ತರ ಮಧ್ಯೆ ಚಾಮುಂಡೇಶ್ವರಿ ರಥ ಸಾಗಿತು. ಈ ವೇಳೆ ಭಕ್ತರು ರಥಕ್ಕೆ ಹಣ್ಣು ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. 50 ನಿಮಿಷಗಳ ಕಾಲ ಸಾಗಿದ ರಥ ಚಾಮುಂಡೇಶ್ವರಿ ದೇಗುಲದ ಮಹಾದ್ವಾರ ತಲುಪಿದ ವೇಳೆ ಅಲ್ಲಿ ನೆರೆದಿದ್ದ ಭಕ್ತರು ಭಕ್ತಿಯಿಂದ ರಥದ ಹಗ್ಗವನ್ನು ಮುಟ್ಟಿದರು. ಇನ್ನು ಕೆಲವರು ರಥಕ್ಕೆ ನಮಸ್ಕರಿಸಿದರೆ, ರಥವನ್ನು ಅಲಂಕರಿಸಿದ ಹೂವುಗಳನ್ನು ಪಡೆಯಲು ನಿಂತರು.

ರಥೋತ್ಸವದ ಪ್ರಯುಕ್ತ ಚಾಮುಂಡೇಶ್ವರಿ ದೇವಿ ರಥದ ಮುಂಭಾಗದಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರವಿರುವ ಧ್ವಜವನ್ನು ನೋಡಿ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ನಿಂದಾಗಿ ಎರಡು ವರ್ಷಗಳ ರಥೋತ್ಸವ ಸರಳ ರೀತಿಯಲ್ಲಿ ನಡೆಯಿತು. ಈ ಬಾರಿ ನಾಡಹಬ್ಬ ದಸರಾದಂತೆ ರಥೋತ್ಸವವೂ ಅದ್ಧೂರಿಯಾಗಿ ನಡೆದಿದೆ. ಬೆಳಗ್ಗೆ 5.00 ಗಂಟೆಯಿಂದಲೇ ಭಕ್ತರು ಕಾಲ್ನಡಿಗೆ ಹಾಗೂ ವಾಹನಗಳಲ್ಲಿ ಬೆಟ್ಟಕ್ಕೆ ಆಗಮಿಸಿದ್ದರು. ರಥೋತ್ಸವ ಮುಗಿದರೂ ಭಕ್ತರು ದೇವಸ್ಥಾನಕ್ಕೆ ಬರುತ್ತಲೇ ಇದ್ದರು. ಇದರಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಲ್ಲದೆ, ಪಾರ್ಕಿಂಗ್ ಕೂಡ ಭರ್ತಿಯಾಗಿದ್ದು, ವಾಹನಗಳನ್ನು ನಿಲ್ಲಿಸಲು ಜನರು ಪರದಾಡಿದರು.

Ashika S

Recent Posts

ಭಾರೀ ಗಾಳಿ ಮಳೆಗೆ ಮನೆಯ ಗೇಟ್ ಬಿದ್ದು ಬಾಲಕಿ ಮೃತ್ಯು

ಮಳೆ ಜತೆಗೆ ರಭಸವಾಗಿ ಬೀಸಿದ ಬಿರುಗಾಳಿಗೆ ಮನೆಯ ಗೇಟ್ ಕಿತ್ತು ಬಂದಿದ್ದು, ಇದೇ ವೇಳೆ ಮನೆಯ ಮುಂದೆ ಆಟವಾಡುತ್ತಿದ್ದ 7…

32 seconds ago

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

23 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

45 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

50 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

1 hour ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

1 hour ago