Categories: ಮೈಸೂರು

ಮೈಸೂರು: ನರೇಗಾ ಯೋಜನೆ ಸೌಲಭ್ಯ ಜನತೆಗೆ ತಲುಪಿಸಿ: ಜಿಟಿಡಿ

ಮೈಸೂರು: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಿರುವ ಹಲವು ಸೌಲಭ್ಯಗಳನ್ನು ರೈತರಿಗೆ, ಸಾರ್ವಜನಿಕರಿಗೆ ತಲುಪಿಸಲು ಪಂಚಾಯಿತಿ ಪಿಡಿಓಗಳು ಇಚ್ಛಾಶಕ್ತಿಯಿಂದ ಕಾರ್ಯ ನಿರ್ವಹಿಸಬೇಕು ಎಂದು  ಶಾಸಕ ಜಿ.ಟಿ.ದೇವೇಗೌಡರು ಹೇಳಿದರು

ಮೈಸೂರು ತಾಲ್ಲೂಕಿನ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ತಾಲ್ಲೂಕಿನ ಪ್ರತಿಯೊಂದು ಗ್ರಾಮ ಪಂಚಾಯಿತಿಗಳು ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಗಂಭೀರವಾಗಿ ಪರಿಗಣಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿಗೊಳಪಡುವ ಗ್ರಾಮಗಳ ಅಭಿವೃದ್ಧಿ ಪೂರಕವಾಗುವಂತೆ ರೈತರು ಹಾಗೂ ಜನರಿಗೆ ಅನುಕೂಲವಾಗುವ ಕಾಮಗಾರಿಗಳನ್ನು ಕೈಗೊಳ್ಳುಬೇಕು ಎಂದು ತಿಳಿಸಿದರು.

ಪ್ರತಿಯೊಂದು ಗ್ರಾಮದಲ್ಲಿರುವ ಸ್ಮಶಾನಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು. ಜಾಗದ ಸಮಸ್ಯೆ ಇರುವ ಗ್ರಾಮದಲ್ಲಿ ಅವಶ್ಯಕವಿರುವಷ್ಟು ಜಾಗ ಗುರುತಿಸಿ ಹೊಸದಾಗಿ ಸ್ಮಶಾನ ನಿರ್ಮಿಸಬೇಕು. ಹಳ್ಳಿಗಳ ಪ್ರಮುಖ ಜಲಮೂಲಗಳಾದ ಕೆರೆ, ಕಟ್ಟೆ, ಕಲ್ಯಾಣಿಗಳನ್ನು ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಬೇಕು ಎಂದರು.

ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿ, ಗ್ರಾಮೀಣ ಶಾಲೆಗಳಲ್ಲಿ ಸುಸಜ್ಜಿತ ಶೌಚಾಲಯ, ಶಾಲಾ ಕಾಂಪೌಂಡ್ ನಿರ್ಮಿಸಲು ಕ್ರಮವಹಿಸಬೇಕು ಗ್ರಾಮದ ಪ್ರತೀ ಮನೆಯಲ್ಲಿ ಶೌಚಾಲಯ, ಸೋಕ್ ಫೀಟ್ ನಿರ್ಮಿಸಿ ಸ್ವಚ್ಛತೆ ಕಾಪಾಡುವ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ತಿಳಿಸಿದರಲ್ಲದೆ, ನರೇಗಾ ಯೋಜನೆಯಡಿ ರೈತರಿಗೆ ಕೃಷಿ ಚಟುವಟಿಕೆಗಳಿಗೆ ನೆರವಾಗುವಂತೆ ಅಚ್ಚುಕಟ್ಟಾದ ಮೆಂಟ್ಲಿಂಗ್ ರಸ್ತೆ ನಿರ್ಮಿಸಬೇಕು. ನೀರಾವರಿ ಸೌಲಭ್ಯಗಳಿಗೆ ತೊಡಕಾಗದಂತೆ ನಾಲೆ ಹೂಳೆತ್ತುವ ಕಾಮಗಾರಿ ಕೈಗೊಳ್ಳಬೇಕು ಎಂದು ಹೇಳಿದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಹಾಗೂ ತಾಪಂ ಆಡಳಿತಾಧಿಕಾರಿ ಎಸ್.ಪ್ರೇಮ್ ಕುಮಾರ್, ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ರಮೇಶ್, ತಹಶಿಲ್ದಾರ್ ಗಿರೀಶ್, ಸಹಾಯಕ ನಿರ್ದೇಶಕರಾದ ಕೆ.ಎಂ.ರಘುನಾಥ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.

Ashika S

Recent Posts

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

4 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

10 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

15 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

17 mins ago

ಮೊಬೈಲ್‌ಗಾಗಿ ತಮ್ಮನನ್ನೆ ಕೊಂದ ಪಾಪಿ ಅಣ್ಣ

ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ನಡೆದಿದ್ದ 15 ವರ್ಷದ ಬಾಲಕನ ಕೊಲೆ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮೃತ ಬಾಲಕ…

28 mins ago

ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ ಬಾಲಿವುಡ್​ನಿಂದ ಹೊರಬರುತ್ತೇನೆ: ಕಂಗನಾ ರಣಾವತ್

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಜಕೀಯದ ಮೊದಲ ಇನ್ನಿಂಗ್ಸ್​ ಆರಂಭಿಸಿದ ಕಂಗನಾ ರಣಾವತ್ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ…

30 mins ago