Categories: ಮೈಸೂರು

ಮೈಸೂರು: ಜುಲೈ 02 ರಿಂದ ಗುಜರಾತ್ ಕರಕುಶಲ ಉತ್ಸವ

ಮೈಸೂರು: ಗುಜರಾತ್ ಕರಕುಶಲ ಉತ್ಸವವು  ಜೆಎಸ್‌ಎಸ್ ಮೈಸೂರು ಅರ್ಬನ್ ಹಾತ್ ನಲ್ಲಿ ಜುಲೈ 02 ರಿಂದ 10ರವರೆಗೆ  ನಡೆಯಲಿದ್ದು, ಗುಜರಾತ್ ರಾಜ್ಯದ ವಿವಿಧ ಭಾಗಗಳಿಂದ 90 ಕ್ಕೂ ಹೆಚ್ಚು ಕರಕುಶಲಕರ್ಮಿಗಳು ಭಾಗವಹಿಸಲಿದ್ದಾರೆ.

ಇನ್ನು  ಸುಮಾರು  50 ಕ್ಕೂ ಹೆಚ್ಚು   ನೃತ್ಯ ಕಲಾವಿದರು ಗರ್ಬಾ ನೃತ್ಯವನ್ನು ಗುಜರಾತಿನ ಸಾಂಪ್ರದಾಯಿಕ ಉಡುಗೆ ತೊಡುಗೆಗೊಳೊಂದಿಗೆ  ಪ್ರದರ್ಶಿಸಲಿದ್ದಾರೆ. ಅಲ್ಲದೆ, ಕುಶಲಕರ್ಮಿಗಳು ತಯಾರಿಸಿದ ಪಟೋಲ ಸೀರೆಗಳು, ಬಾಂದಿನಿ ಸೀರೆಗಳು, ಕಸೂತಿ ಮಾಡಿದ ಬೆಡ್ ಶೀಟ್‌ಗಳು, ಟವಲ್‌ಗಳು, ಕುಶನ್ ಕವರ್‌ಗಳು, ಪರಿಸರ ಸ್ನೇಹಿ ಆಭರಣಗಳು, ಡ್ರೆಸ್ ಮೆಟೀರಿಯಲ್‌ಗಳು, ಮಣ್ಣಿನಿಂದ ತಯಾರಿಸಿದ ವಸ್ತುಗಳು, ಬೀಡ್ ವರ್ಕ್, ಮೆಟಲ್ ವರ್ಕ್, ಕುರ್ತಿಗಳು, ಚನಿಯಾ ಚೋಲಿ, ಬಾಂದಿನಿ ಹಾಗೂ ಇನ್ನಿತರ ಆಕರ್ಷಣೀಯ ಕರಕುಶಲ ಹಾಗೂ ಕೈಮಗ್ಗ ಉತ್ಪನ್ನಗಳನ್ನು ಪ್ರದರ್ಶಿಸಿ ಮಾರಾಟ ಮಾಡಲಿದ್ದಾರೆ.

ಜುಲೈ 2ರಂದು ಶನಿವಾರ ಸಂಜೆ 4ಕ್ಕೆ  ಉತ್ಸವವನ್ನು ಮೈಸೂರಿನ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮರವರು ಉದ್ಘಾಟಿಸಲಿದ್ದು, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಡಾ.ಬೆಟಸೂರಮಠ ರವರು ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.   ಕೈಮಗ್ಗ ಮತ್ತು ಜವಳಿ ಇಲಾಖೆಯ ಆಯುಕ್ತರಾದ ಟಿ.ಎಚ್.ಎಂ. ಕುಮಾರ್, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಮಂಡಳಿ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ರೂಪಾ ಮೌದ್ಗಿಲ್, ಮೈಸೂರಿನ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ  ಬಿ.ಆರ್. ಪೂರ್ಣಿಮಾ,   ಗುಜರಾತ್ ರಾಜ್ಯದ ಇಂಡೆಕ್ಸ್ಟ್ – ಸಿನ ವ್ಯವಸ್ಥಾಪಕ ನಿರ್ದೇಶಕರಾದ  ಶ್ರೀ.ಡಿ.ಎಂ. ಶುಕ್ಲಾ, ಎನ್.ಜಿ.ಇ.ಎಫ್. ಕಾರ್ಯನಿರ್ವಾಹಕ ನಿರ್ದೇಶಕರಾದ ಕೆ.ಎನ್.ಅರುಣಿ, ಜೆ ಎಸ್ ಎಸ್ ಮಹಾವಿದ್ಯಾಪೀಠದ ತೋಟಗಾರಿಕಾ ವಿಭಾಗದ ನಿರ್ದೇಶಕ ಶ್ರೀ.ಎನ್.ಎಂ. ಶಿವಶಂಕರಪ್ಪ,  ಮೈಸೂರಿನ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಶ್ರೀ.ಟಿ.ದಿನೇಶ್,  ಜೆಎಸ್‌ಎಸ್ ಮಹಾವಿದ್ಯಾಪೀಠದ ತಾಂತ್ರಿಕ ಶಿಕ್ಷಣ  ವಿಭಾಗದ ಜಂಟಿ ನಿರ್ದೇಶಕ ಡಾ.ಎಚ್.ಆರ್. ಮಹದೇವಸ್ವಾಮಿ,   ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

Ashika S

Recent Posts

ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ವೈರಲ್‌: ನಟಿಯ ಸ್ಲಷ್ಟನೆ ಏನು ?

ಸೋಷಿಯಲ್‌ ಮೀಡಿಯಾದಲ್ಲಿ ಹಸಿ ಬಿಸಿ ಫೋಟೋಗಳನ್ನು ಶೇರ್‌ ಮಾಡುತ್ತ, ಹಲ್‌ಚಲ್‌ ಸೃಷ್ಟಿಸುತ್ತಿದ್ದ ಕಿರುತೆರೆ ನಟಿ ಜ್ಯೋತಿ ರೈ, ಇದೀಗ ಖಾಸಗಿ…

1 min ago

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

21 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

29 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

35 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

48 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

1 hour ago