News Karnataka Kannada
Thursday, May 02 2024
ಮೈಸೂರು

ಮೈಸೂರು ಅರಮನೆ ಬಳಿ ‘ಡ್ರೋನ್’ ಬಳಕೆಗೆ ನಿರ್ಬಂಧ: ಆಡಳಿತ ಮಂಡಳಿಯಿಂದ ಆದೇಶ

mysore palace
Photo Credit : News Kannada

ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನ ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕೂಡ ನಡೆಸಿದ್ದಾರೆ.

ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.

ಒಂದು ವೇಳೆ ಈ ಪ್ರದೇಶದಲ್ಲಿ ಡ್ರೋನ್​ ಕ್ಯಾಮೆರಾವನ್ನು ಬಳಸುವುದಾದರೆ ಮೈಸೂರು ಅರಮನೆ ಮಂಡಳಿಯಿಂದ ಪೂರ್ವಾನುಮತಿ ಪಡೆಯಬೇಕು. ಅನುಮತಿ ಪಡೆಯದೆ ಅನಧಿಕೃತವಾಗಿ ಡ್ರೋನ್​ ಹಾರಾಟ ಮಾಡಿದಲ್ಲಿ ಅಂತವರ ವಿರುದ್ಧ ಕಾನುನೂ ನಿಯಮಾನುಸಾರ ಕ್ರಮಕೈಗೊಳ್ಳಲಾಗುತ್ತದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು