ಮೈಸೂರು: ದಸರಾ ಪ್ರಯುಕ್ತ ಅಂಬಾವಿಲಾಸ ಅರಮನೆಯಲ್ಲಿ ರಾಜಮನೆತನದವರ ಧಾರ್ಮಿಕ ಪೂಜಾ ಕೈಂಕರ್ಯ ಹಿನ್ನೆಲೆಯಲ್ಲಿ ನಿರ್ದಿಷ್ಟ ದಿನ ಹಾಗೂ ನಿಗದಿತ ಸಮಯದಲ್ಲಿ ಅರಮನೆಗೆ ಸಾರ್ವಜನಿಕರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.
ಸೆ.27ರಂದು ಸಿಂಹಾಸನ ಜೋಡಣೆ ಪ್ರಯುಕ್ತ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅ.3ರಂದು ಯದುವೀರ್ ಒಡೆಯರ್ ಅವರ ಖಾಸಗಿ ದರ್ಬಾರ್ ಹಿನ್ನೆಲೆಯಲ್ಲಿ ಮದ್ಯಾಹ್ನ 2ರವರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಅ.11 ಹಾಗೂ 12ರಂದು ಆಯುಧಪೂಜೆ ಹಾಗೂ ವಿಜಯದಶಮಿ ಹಿನ್ನೆಲೆಯಲ್ಲಿ ಇಡೀ ದಿನ ಅರಮನೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಅ.27ರಂದು ಸಿಂಹಾಸನ ವಿಸರ್ಜನೆ ಪ್ರಯುಕ್ತ ಅಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅರಮನೆ ಆಡಳಿತ ತಿಳಿಸಿದೆ.
Ad