ಮೈಸೂರು: ದಸರಾ ಬಳಿಕ ಮೈಸೂರು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕರಾಗಿದ್ದ ವಿಷ್ಣುವರ್ಧನ್ ಅವರನ್ನು ನೇಮಕ ಮಾಡಲಾಗಿದೆ. ಸೀಮಾ ಲಾಟ್ಕರ್ ಅವರ ಸ್ಥಾನಕ್ಕೆ ವಿಷ್ಣುವರ್ಧನ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

