ಮೈಸೂರು

ಮೈಸೂರು: ಜಯದೇವ ಆಸ್ಪತ್ರೆಯಲ್ಲಿ 4ನೇ ಕ್ಯಾಥ್‌ಲ್ಯಾಬ್ ಆರಂಭ

ಮೈಸೂರು: ಮೈಸೂರು ಜಯದೇವದಲ್ಲಿ ಹೃದಯರೋಗಿಗಳ ಸಂಖ್ಯೆ ಹೆಚ್ಚಾಗಿ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಒಂದೂವರೆ ತಿಂಗಳಲ್ಲಿ 4ನೇ ಕ್ಯಾಥ್ ಲ್ಯಾಬ್ ಅನ್ನು ಪ್ರಾರಂಭ ಮಾಡಲಾಗುವುದು ಎಂದು ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ  ಡಾ. ಸಿ.ಎನ್.ಮಂಜುನಾಥ್ ತಿಳಿಸಿದರು.

ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಸರ್ಕಾರ ಒಂದು ವರ್ಷ ಮುಂದುವರೆಸಿದ ಹಿನ್ನೆಲೆಯಲ್ಲಿ ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದರವರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು ಮೈಸೂರು ಜಯದೇವದಲ್ಲಿ ಈಗಾಗಲೇ ಪ್ರತಿ ದಿನ 700 ರಿಂದ 800 ಹೊರ ರೋಗಿಗಳು ಬರುತ್ತಿದ್ದಾರೆ. ಪ್ರತಿದಿನ 35 ರಿಂದ 40 ಕ್ಯಾಥ್‌ಲ್ಯಾಭ್ ಪ್ರೊಸಿಜರ್‍ಸ್‌ಗಳು ನಡೆಯುತ್ತಿವೆ. ಇದರಿಂದ ಜನಸಾಮಾನ್ಯರು ಕಾಯುವುದನ್ನು ಕಡಿಮೆ ಮಾಡಲು ತಜ್ಞವೈದ್ಯರ ಮೇಲೆ ಒತ್ತಡ ಕಡಿಮೆ ಮಾಡಲು ಹೊಸ ಕ್ಯಾಥ್ ಲ್ಯಾಬ್ ಪ್ರಾರಂಭಿಸಲಿದ್ದೇವೆ. ಆಗಸ್ಟ್ 4ನೇ ವಾರದಲ್ಲಿ ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ 50 ಹಾಸಿಗೆ ಸಾಮರ್ಥ್ಯದ ಜಯದೇವ ಸ್ಯಾಟಲೈಟ್ ಸೆಂಟರ್ ತೆರೆಯಲಾಗುತ್ತದೆ.   ಇದರಲ್ಲಿ ಕ್ಯಾಥ್‌ಲ್ಯಾಬ್ ಒ.ಪಿ.ಡಿ. ಐ.ಸಿ.ಯು, ಇರುತ್ತದೆ.

ಇದರಿಂದ ಆಭಾಗದ ಜನರಿಗೆ ಅನುಕೂಲವಾಗುತ್ತದೆ. ಕಲ್ಬುರ್ಗಿಯಲ್ಲಿ ಈಗಾಗಲೇ ೧೫೦ ಹಾಸಿಗೆ ಸಾಮರ್ಥ್ಯ ಜಯದೇವ ಆಸ್ಪತ್ರೆ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ವರ್ಷದಲ್ಲಿ ಕಾರ್ಯನಿರ್ವಹಣೆ ಮಾಡುತ್ತದೆ.  ಹಾಗೆಯೇ ಬೆಳಗಾವಿ ರೆವಿನ್ಯೂ ವಿಭಾಗದ ಹುಬ್ಬಳಿಯಲ್ಲಿ 400 ಹಾಸಿಗೆ ಸಾಮರ್ಥ್ಯದ ಜಯದೇವ ಆಸ್ಪತ್ರೆಯನ್ನು ಪ್ರಾರಂಭ ಮಾಡಬೇಕಾಗಿದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯ ಆಡಳಿತಾತ್ಮಕ ಸಿದ್ದತೆಯನ್ನು ಮಾಡಿಕೊಳ್ಳುತ್ತಿದ್ದೇವೆ.

ಆಗಸ್ಟ್ ಕೊನೆವಾರದಲ್ಲಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಶಂಕುಸ್ಥಾಪನೆ ನೆರವೇರಿಸುವರು ಎಂದ ಅವರು ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ರಿಯಾಯಿತಿ ದರದಲ್ಲಿ ಗುಣಮಟ್ಟದ ಚಿಕಿತ್ಸೆಯನ್ನು ಹೃದಯರೋಗಿಗಳಿಗೆ ಕೈಗೆಟುಕುವ ದರದಲ್ಲಿ ಸಿಗುತ್ತಿರುವುದು ಸಂತೋಷದ ವಿಷಯ ಎಂದ ಅವರು, ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ನಮ್ಮ ಕಾರ್ಯವೈಖರಿ, ಸಾಧನೆಯನ್ನು ಗುರುತಿಸಿ ಸೇವಾವಧಿಯನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಧನ್ಯವಾದ ಸಲ್ಲಿಸುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಡಾ. ಅನುಸೂಯ ಮಂಜುನಾಥ್, ಮೈಸೂರು ಜಯದೇವ ಆಸ್ಪತ್ರೆಯ ವೈಧ್ಯಕೀಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ್, ನರ್ಸಿಂಗ್ ಅಧೀಕ್ಷಕ ಹರೀಶ್‌ ಕುಮಾರ್ ಹಾಜರಿದ್ದರು.

Ashika S

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

12 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

30 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

48 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago