ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಾಡಂಚಿನಲ್ಲಿ ಭರತವಾಡಿ ಗ್ರಾಮದ ಬಳಿ ನಾಗರಹೊಳೆ ಮುಖ್ಯರಸ್ತೆಯಲ್ಲಿ ಜಿಂಕೆಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶುಕ್ರವಾರ ಮಧ್ಯಾಹ್ನ ರಸ್ತೆಯಂಚಿನಲ್ಲಿ ಜಾನುವಾರುಗಳನ್ನು ಮೇಯಿಸುತ್ತಿದ್ದ ಜನರು ಜಿಂಕೆ ಸಾವನ್ನಪ್ಪಿರುವುದನ್ನು ನೋಡಿ ವೀರನಹೊಸಳ್ಳಿ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಮೈಸೂರು ಸಂಚಾರಿ ವಲಯ ಅರಣ್ಯದ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.