Categories: ಮೈಸೂರು

ಮೈಸೂರು: ಗಿನ್ನಿಸ್ ಯೋಗಾಥಾನ್ ಕಾರ್ಯಕ್ರಮಕ್ಕೆ  ಎಸಿಯಿಂದ ಸ್ಥಳ ಪರಿಶೀಲನೆ

ಮೈಸೂರು: ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ಮುಂದಿನ ತಿಂಗಳು ನಡೆಯುವ ಯೋಗಾಥಾನ್-2022 ರಲ್ಲಿ ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವಂತೆ ಮಾಡಿ  ಮತ್ತೆ ಗಿನ್ನಿಸ್ ಬುಕ್ ಆಫ್ ವರ್ಡ್ ರೆಕಾರ್ಡ್ ದಾಖಲೆ ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸುವ ಸಂಬಂಧ ಉಪ ವಿಭಾಗಾಧಿಕಾರಿ ಕಮಲಾಬಾಯಿ ಬುಧವಾರ ರೈಸ್ ಕೋರ್ಸ್ ಆವರಣ  ಪರಿಶೀಲಿಸಿದರು.

ಈಗಾಗಲೇ ಮೈಸೂರಿನ ಸಾಮೂಹಿಕ ಯೋಗ ಪ್ರದರ್ಶನ ಗಿನ್ನಿಸ್ ದಾಖಲೆ ಬರೆದಿದ್ದು, ಈ ಯೋಗ ಪ್ರದರ್ಶನ ವು ಗಿನ್ನಿಸ್ ವರ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ ಸೇರಲು ಯೋಗಾಥಾನ್ – 2022 ಅನ್ನು ಯಶಸ್ವಿಗೊಳಿಸಿ, ಕೇಂದ್ರ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೇತೃತ್ವದಲ್ಲಿ ಹಲವು ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಿ. ಆಗಮಿಸುವವವರಿಗೆ ಟೀ ಶರ್ಟ್, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.

ಯೋಗಾಸನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಆನ್ ಲೈನ್ ನಲ್ಲಿ ನೊಂದಾಯಿಸಿಕೊಳ್ಳಬೇಕು. ಅಲ್ಲದೆ, ಯೋಗಾಸನ ಮಾಡುವವರಿಗೆ ಇಲಾಖೆ ಅಥವಾ ಖಾಸಗಿಯವರಿಂದ ಟೀ ಶರ್ಟ್ ಮತ್ತು ಮ್ಯಾಟ್ ವ್ಯವಸ್ಥೆ ಕಲ್ಪಿಸುವ ಸಂಬಂಧ ಮುಂದಿನ ಸಭೆಯಲ್ಲಿ ಚರ್ಚಿಸಿ ನಿರ್ಧರಿಸುವಂತೆ, ಮೈಸೂರು ವಿವಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಜೆಎಸ್ ಎಸ್  ಶಿಕ್ಷಣ ಸಂಸ್ಥೆ, ವೈದ್ಯಕೀಯ ಮಹಾ ತಾಂತ್ರಿಕ ವಿದ್ಯಾಲಯ, ಸರ್ಕಾರಿ ಹಾಗೂ ಖಾಸಗಿ ನೌಕರರು ಹಾಗೂ ಸಿಬ್ಬಂದಿ ಗಳು ನೊಂದಣಿ ಮಾಡಬಹುದಾಗಿದೆ. ಜತೆಗೆ ಈ ಹಿಂದೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕೈಗೊಂಡ ಸಮಿತಿಗಳಿಗೆ ನೀಡಿರುವ ಜವಾಬ್ದಾರಿಯನ್ನು ನಿಭಾಯಿಸುವಂತೆ ಹೇಳಿದರು.

ವೆಬ್ ಸೈಟ್: www.yogathona2022.com ನಲ್ಲಿ ಯೋಗ ಶಿಕ್ಷಕರು, ದೈಹಿಕ ಶಿಕ್ಷಕರು ನೊಂದಾಯಿಸಿಕೊಳ್ಳಬೇಕು. 1 ಲಕ್ಷಕ್ಕೂ ಹೆಚ್ಚು ಮಂದಿಯನ್ನು ಆನ್ ಲೈನ್ ನಲ್ಲಿ ನೊಂದಾಯಿಸಿಕೊಳ್ಳಲು ಜಾಗೃತಿ ಮೂಡಿಸಿ. ದೈಹಿಕ ಶಿಕ್ಷಕರು, ಪದವಿಪೂರ್ವ ಕಾಲೇಜು ಉಪನ್ಯಾಸಕರು ಮೊದಲಾದವರೆಲ್ಲರೂ ಸಹ ಪಾಲ್ಗೊಂಡು ಇದನ್ನು ಯಶಸ್ವಿಗೊಳಿಸಬಹುದಾಗಿದೆ.

ಆಯುಷ್  ಅಧಿಕಾರಿ ಡಾ.ಪುಷ್ಪಾ,  ಎಂ ಆರ್ ಸಿ  ಅಧ್ಯಕ್ಷ ಗಣೇಶಕುಮಾರ್, ಕ್ರೀಡಾ ಇಲಾಖೆ ಉಪನಿರ್ದೇಶಕ ಡಾ.ಸುರೇಶ್, ಎಂ ಆರ್ ಸಿ ಕಾರ್ಯದರ್ಶಿ ಅಜಯ್ ಅರಸ್ ಇನ್ನಿತರರು ಉಪಸ್ಥಿತರಿದ್ದರು.

Ashika S

Recent Posts

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

8 mins ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

15 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

19 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

30 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

34 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago