Categories: ಮೈಸೂರು

ಮೈಸೂರು: ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರ ಸಂಪನ್ನ

ಮೈಸೂರು: ಆಷಾಢ ಮಾಸದ ಕಡೆಯ ಶುಕ್ರವಾರ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿತ್ತಲ್ಲದೆ  ಶಕ್ತಿಸ್ವರೂಪಿಣಿಯ ದರ್ಶನ ಪಡೆಯುವುದರೊಂದಿಗೆ  ಆಷಾಢ ಶುಕ್ರವಾರ ಸಂಪನ್ನವಾಯಿತು.

ಮುಂಜಾನೆಯಿಂದಲೇ ತಾಯಿಯ ದರ್ಶನದ ಹಂಬಲದಿಂದ ವಿವಿಧೆಡೆಗಳಿಂದ ಬೆಟ್ಟಕ್ಕೆ ಆಗಮಿಸಿದ ಭಕ್ತರು ನೂಕುನುಗ್ಗಲಿಲ್ಲದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಂತು ದರ್ಶನ ಪಡೆದರು.  ಯಾವುದೇ ಗಲಾಟೆ ಗೊಂದಲಗಳಿಗೆ ಆಸ್ಪದ ಕೊಡದೆ ಸಾವಧಾನವಾಗಿ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ತೆರಳಿ ಚಾಮುಂಡೇಶ್ವರಿಯ ದರ್ಶನ ಪಡೆದು ಶಿರಭಾಗಿ ನಮಿಸಿ, ಭಕ್ತಿಭಾವ ಮೆರೆದರು. ನಟ ದರ್ಶನ್, ಸಂಸದ ಪ್ರತಾಪಸಿಂಹ ಸೇರಿದಂತೆ ಅನೇಕ ಗಣ್ಯರು ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಕಡೆಯ ಶುಕ್ರವಾರವಾದ್ದರಿಂದ ಕಳೆದ ವಾರಕ್ಕೆ ಹೋಲಿಸಿದರೆ ಹೆಚ್ಚಿನ ಭಕ್ತರು ಆಗಮಿಸಿದ್ದರು.

ಕಡೆಯ ಆಷಾಢ ಶುಕ್ರವಾದ್ದರಿಂದ ಅಮ್ಮನಿಗೆ ವಿಶೇಷ ಪೂಜೆ ನೆರವೇರಿಸಲಾತು. ಮುಂಜಾನೆ 3 ಗಂಟೆಯಿಂದಲೇ ದೇವಸ್ಥಾನದಲ್ಲಿ ಪೂಜಾ ವಿಧಿವಿಧಾನಗಳು ಆರಂಭವಾದವು. ದೇವಿಗೆ ದೇವಾಲಯದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ನೇತೃತ್ವದಲ್ಲಿ ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿ ವಿವಿಧ  ಪೂಜೆಗಳನ್ನು ನೆರವೇರಿಸಲಾಯಿತು. 5.30ರಿಂದ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಈ ಮಧ್ಯೆ ಬೆಳಗ್ಗೆ 9.30ಕ್ಕೆ ಮಹಾಮಂಗಳಾರತಿ, ಸಂಜೆ 6.30ರಿಂದ 7ರವರೆಗೆ ತಾಯಿಗೆ ಮತ್ತೊಮ್ಮೆ ಮಹಾಮಂಗಳಾರತಿ ನೆರವೇರಿಸಲಾಯಿತು. ರಾತ್ರಿ 10ಗಂಟೆವರೆಗೂ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಆಷಾಢ ಮಾಸದ ಕಡೆಯ ಶುಕ್ರವಾರವಾದ್ದರಿಂದ ದೇವಸ್ಥಾನ ವಿಶೇಷ ರೀತಿಯಲ್ಲಿ ಅಲಂಕೃತಗೊಂಡಿತ್ತು. ಕಳೆದ 3ಶುಕ್ರವಾರ ಹಾಗೂ ವರ್ಧಂತ್ಯುತ್ಸವದಂತೆ ದೇವಸ್ಥಾನದ ಆವರಣವನ್ನು  ವಿಶೇಷವಾಗಿ ಅಲಂಕರಿಸಲಾಗಿತ್ತು. ತಾಯಿ ಚಾಮುಂಡೇಶ್ವರಿಗೆ ವಿಶೇಷ ಸಿಂಹವಾಹಿನಿ ಅಲಂಕಾರ ಮಾಡಲಾಗಿತ್ತು. ವಿವಿಧ ಬಣ್ಣಗಳ ಸೇವಂತಿಗೆ, ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ಬಗೆಯ ಹೂಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದ ಪ್ರವೇಶದ್ವಾರ, ಹೊರಾವರಣವೂ ವಿಶೇಷವಾಗಿ ಸಿಂಗಾರಗೊಂಡಿತ್ತು.

ಬೆಟ್ಟಕ್ಕೆ ಮುಂಜಾನೆಯಿಂದಲೇ ಭಕ್ತರ ದಂಡು ಹರಿದುಬಂದಿತ್ತು. ಕೆಲವರು ಸಾರಿಗೆ ಬಸ್‌ನಲ್ಲಿ ಬಂದರೆ ಇನ್ನು ಕೆಲವರು ಮೆಟ್ಟಿಲುಗಳು ಮೂಲಕ ಬೆಟ್ಟಕ್ಕೆ ಆಗಮಿಸಿದರು. ಚಾಮುಂಡಿಬೆಟ್ಟದ  ಪಾದದಿಂದ ಪ್ರತಿ ಮೆಟ್ಟಿಲಿಗೂ ಅರಿಶಿಣ ಕುಂಕುಮ ಹೂಗಳನ್ನಿಟ್ಟು, ಕರ್ಪೂರ ಹಚ್ಚಿ ಭಕ್ತಿ ಭಾವದಿಂದ ಮೆಟ್ಟಿಲು ಹತ್ತಿ ತಮ್ಮ ಹರಕೆ ತೀರಿಸಿದರು.

ಕಳೆದ ವಾರಗಳಂತೆಯೇ ಬೆಟ್ಟಕ್ಕೆ ಆಗಮಿಸಿದ ಸಾವಿರಾರು ಭಕ್ತರಿಗೆ ಬಹುಮಹಡಿ ಪಾರ್ಕಿಂಗ್ ಸ್ಥಳದಲ್ಲಿ ಬೆಂಗಳೂರಿನ ಜಿ.ಕೆ.ಫೌಂಡೇಷನ್‌ನ ಜಿ.ಮಹೇಶ್ ಎಂಬುವವರು ಪ್ರಸಾದ ವ್ಯವಸ್ಥೆ ಮಾಡಿದ್ದರು. ಬೆಳಗ್ಗೆ 7ರಿಂದ ಪ್ರಾರಂಭವಾದ ಪ್ರಸಾದ ವಿತರಣೆ ರಾತ್ರಿಯವರೆಗೂ ನಡೆಯಿತು

Ashika S

Recent Posts

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

43 seconds ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

6 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

25 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

26 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

30 mins ago

ಪ್ಲೇ-ಆಫ್​ ರೇಸ್​ನಿಂದ ಹೊರ ಬಿದ್ದ ಪಂಜಾಬ್ ​: ಆರ್‌ಸಿಬಿ ಪಾಯಿಂಟ್ಸ್ ಎಷ್ಟು ?

ಐಪಿಎಲ್​ ಟೂರ್ನಿಯಲ್ಲಿ ಆರ್​ಸಿಬಿ ತಂಡ ಪ್ಲೇ-ಆಫ್ ಕನಸನ್ನು ಜೀವಂತವಾಗಿರಿಸಿಕೊಂಡಿದೆ. ನಿನ್ನೆ ಪಂಜಾಬ್ ಕಿಂಗ್ಸ್ ತಂಡವನ್ನು 60 ರನ್​ಗಳಿಂದ ಸೋಲಿಸುವ ಮೂಲಕ,…

40 mins ago