News Karnataka Kannada
Tuesday, May 07 2024
ಮೈಸೂರು

ಮೈಸೂರು: ಮತದಾನದೊಂದಿಗೆ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ

Celebrate the festival of democracy with voting
Photo Credit : By Author

ಮೈಸೂರು: ಮೇ 10ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬ ಆಚರಿಸಿ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ವಿಂಟೇಜ್ ಕಾರು ಮತ್ತು ಟಾಂಗಾ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣಾ ಅಕ್ರಮ ತಡೆಯುವ ನಿಟ್ಟಿನಲ್ಲಿ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದ್ದು ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ನೈತಿಕ ಮತದಾನ ಮಾಡುವ ಮೂಲಕ ದೇಶದ ಭವಿಷ್ಯ ಕಾಪಾಡಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆಯಂದು ಸಾರ್ವತ್ರಿಕ ರಜೆ ಇರುವ ಕಾರಣ ಅಂದು ಮನೆಯಲ್ಲಿಯೇ ಕೂರದೆ ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಳ್ಳಬೇಕು ೮೦ ವರ್ಷ ಮೇಲ್ಪಟ್ಟವರಿಗೆ ಮತದಾನ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು ವಯಸ್ಸಾದ ಮತದಾರರು ಮತಗಟ್ಟೆಗೆ ಬರಲಾಗದಿದ್ದರೆ ಅಂಥವರಿಗೆ ವಾಹನದ ವ್ಯವಸ್ಥೆ ಬೇಕಿದ್ದಲ್ಲಿ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

ರಾಜ್ಯದಲ್ಲಿ ಮೈಸೂರು ತನ್ನ ಸಾಂಸ್ಕೃತಿಕತೆಯಿಂದ ಹೆಸರುವಾಸಿಯಾಗಿದ್ದು, ಇಂದಿಗೂ ಹೆಚ್ಚಾಗಿ ಟಾಂಗಾ ಗಾಡಿಗಳ ಬಳಕೆ ನಗರದಲ್ಲಿದೆ. ವಿಂಟೇಜ್ ಕಾರುಗಳ ಪ್ರಾಮುಖ್ಯತೆ ಹಾಗೂ ಪರಿಸರಕ್ಕೆ ಹಾನಿಯಾಗದ ರೀತಿ ಅವುಗಳ ಮರುಬಳಕೆ ಬಗ್ಗೆ ಅರಿವು ಹೊಂದಿರಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ, ಪ್ರಾಚ್ಯ ವಸ್ತು ಸಂಗ್ರಹಾಲಯ ಇಲಾಖೆ ಆಯುಕ್ತ ದೇವರಾಜು ಹಾಗೂ ಅಂತರಾಷ್ಟ್ರೀಯ ಯೋಗಪಟು ಖುಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು