Categories: ಮೈಸೂರು

ಮೈಸೂರು: ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ ಪ್ರಕರಣ, ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಮತ್ತು ಅವರ ಕುಟುಂಬ ಸದಸ್ಯರ ಅಪಘಾತಕ್ಕೆ ಸಂಬಂಧಿಸಿದಂತೆ  ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಎನ್.ಸತ್ಯನಾರಾಯಣ ವಿರುದ್ಧ ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಸಂಬಂಧ ಬೆಂಗಾವಲು ಸಿಬ್ಬಂದಿ ಎಸ್.ಮಹದೇವ ದೂರು ದಾಖಲಿಸಿದ್ದರು. ಆರೋಪಿ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯು ಅಪಘಾತಕ್ಕೆ ಕಾರಣವಾಯಿತು ಎಂದು ಅವರು ದೂರಿನಲ್ಲಿ ತಿಳಿಸಿದ್ದರು.

ಡಿಸೆಂಬರ್ 27 ರಂದು ಮೈಸೂರು ಜಿಲ್ಲೆಯ ಕಡಕೋಳ ಗ್ರಾಮದ ಬಳಿ ಪ್ರಧಾನಿ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮತ್ತು ಅವರ ಕುಟುಂಬ ಸದಸ್ಯರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದರು.

ಪ್ರಹ್ಲಾದ್ ಮೋದಿ ಮತ್ತು ಅವರ ಕುಟುಂಬ ಮರ್ಸಿಡಿಸ್ ಬೆಂಝ್ ಕಾರಿನಲ್ಲಿ ಪ್ರವಾಸಿ ತಾಣ ಬಂಡೀಪುರದ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ. ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಪ್ಪತ್ತು ವರ್ಷದ ಪ್ರಹ್ಲಾದ್ ಮೋದಿ ಅವರ ಗದ್ದಕ್ಕೆ ಗಾಯವಾಗಿತ್ತು. ಅವರ ಮಗ ಮೆಹುಲ್ ಪ್ರಹ್ಲಾದ್ ಮೋದಿ (40), ಸೊಸೆ ಜಿನಾಲ್ ಮೋದಿ ಮತ್ತು 6 ವರ್ಷದ ಮೊಮ್ಮಗ ಮೇನತ್ ಮೆಹುಲ್ ಮೋದಿ ಕೂಡ ಅಪಘಾತದಲ್ಲಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಆರೋಪಿ ಚಾಲಕ ಸತ್ಯನಾರಾಯಣ ಅವರಿಗೂ ಗಾಯಗಳಾಗಿವೆ.

ಸತ್ಯನಾರಾಯಣ ಅವರ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.

Ashika S

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

6 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

6 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

7 hours ago