Categories: ಮೈಸೂರು

ಮೈಸೂರು: ಅಭಿಮಾನಿಗಳಿಗೆ ನಿರಾಸೆ ತಂದ ಜಿಟಿಡಿ ನಿರ್ಧಾರ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಒಕ್ಕಲಿಗ ಸಮುದಾಯದ ಮುಖಂಡ ಜಿ.ಟಿ.ದೇವೇಗೌಡರು ರಾಜಕೀಯದ ಬಗ್ಗೆ ನಿರಾಸೆ ತಾಳಿರುವುದು ಮತ್ತು ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿರುವುದು ಅವರ ಬೆಂಬಲಿಗರಲ್ಲಿ ಬೇಸರ ತಂದಿದೆ. ಹೀಗಾಗಿ ಬೆಂಬಲಿಗರು, ಅಭಿಮಾನಿಗಳು, ಮತದಾರರು ರಾಜಕೀಯದಲ್ಲಿ ಮುಂದುವರೆಯುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಹಾಗೆನೋಡಿದರೆ ಮೈಸೂರು ಭಾಗದಲ್ಲಿ ಒಕ್ಕಲಿಗರ ಪ್ರಭಾವಿ ಮುಖಂಡರಾಗಿರುವ ಜಿ.ಟಿ.ದೇವೇಗೌಡರು ಇತ್ತೀಚೆಗಿನ ರಾಜಕೀಯ ವಿದ್ಯಮಾನದಿಂದ ಬೇಸತ್ತಿದ್ದಾರೆ ಎನ್ನುವುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ ತಮ್ಮ ಕ್ಷೇತ್ರದ ಅಭಿವೃದ್ಧಿಯತ್ತ ಸದಾ ಒಲವು ತೋರುತ್ತಿರುವ ಅವರನ್ನು ಮತದಾರರು ಬಿಟ್ಟುಕೊಡಲು ತಯಾರಿಲ್ಲ.

ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರ ಮತ್ತು ಹುಣಸೂರು ವ್ಯಾಪ್ತಿಯಲ್ಲಿ ಹಲವು ಮುಖಂಡರು ರಾಜಕೀಯದಿಂದ ನಿವೃತ್ತಿ ಹೊಂದದಂತೆ ಮೇಲಿಂದ ಮೇಲೆ ಮನವಿ ಮಾಡುತ್ತಿದ್ದಾರೆ. ಈಗಾಗಲೇ ಜಿ.ಟಿ.ದೇವೇಗೌಡರಿಂದ ಹಲವರು ರಾಜಕೀಯ ಜೀವನ ಕಂಡುಕೊಂಡಿದ್ದು, ಅಂತಹ ನಾಯಕರಿಗೆ ಜಿಟಿಡಿ ಅವರು ರಾಜಕೀಯದಿಂದ ದೂರವಾಗುತ್ತಿರುವುದು ಬೇಸರ ತಂದಿದೆ.

ಒಬ್ಬ ಮುಖ್ಯಮಂತ್ರಿ ವಿರುದ್ಧ ಸುಮಾರು ಮೂವತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲುವು ಪಡೆದಿರುವ ಜಿಟಿಡಿ ಅವರು ಒಕ್ಕಲಿಗರ ಪ್ರಭಾವಿ ನಾಯಕರಾಗಿದ್ದು, ಅವರು ರಾಜಕೀಯವಾಗಿ ನಿವೃತ್ತಿ ಹೊಂದುವುದಕ್ಕೆ ಯಾರು ಇಷ್ಟ ಪಡದಂತಾಗಿದ್ದು, ಇನ್ನೊಂದಷ್ಟು ವರ್ಷ ರಾಜಕೀಯದಲ್ಲಿ ಇರುವಂತೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಆದರೆ ಜಿಟಿಡಿ ಈ ವಿಚಾರದಲ್ಲಿ ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

Ashika S

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

5 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

26 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

53 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

1 hour ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago