News Karnataka Kannada
Thursday, May 09 2024
ಮೈಸೂರು

ಮೈಸೂರು: ರಾಜರ ಖಾಸಗಿ ದರ್ಬಾರ್ ಹೇಗಿದೆ

How is the private durbar of kings?
Photo Credit : By Author

ಮೈಸೂರು: ದಸರಾದ ಪ್ರಮುಖ ಆಕರ್ಷಣೆ ಮತ್ತು ಐತಿಹಾಸಿಕ ರಾಜವೈಭವವನ್ನು ನೆನಪಿಸುವ ಖಾಸಗಿ ದರ್ಬಾರ್  ಮೈಸೂರು ಅರಮನೆಯಲ್ಲಿ ನಡೆಯಲಿದೆ. ಅತ್ತ ಚಾಮುಂಡಿಬೆಟ್ಟದಲ್ಲಿ ದಸರಾಕ್ಕೆ ವಿಧ್ಯುಕ್ತ ಚಾಲನೆ ನೀಡುತ್ತಿದ್ದಂತೆಯೇ ಇತ್ತ ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಬೇಕಾದ ಸಿದ್ದತೆಗಳು ನಡೆಯುತ್ತವೆ.

ಅದರಂತೆ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಗೆ ಸಿದ್ಧತೆ ಮಾಡಿಕೊಂಡಿದ್ದು ಮುಂಜಾನೆ ಬ್ರಾಹ್ಮಿ ಮುಹೂರ್ತದ ವೃಶ್ಚಿಕ ಲಗ್ನದಲ್ಲಿ ಕಂಕಣಧಾರಣೆ ಮಾಡಿಕೊಂಡು ವಿವಿಧ ವಿಧಿ ವಿಧಾನಗಳನ್ನು ನಡೆಸಲಿದ್ದಾರೆ. ಈ ದರ್ಬಾರ್ ಹತ್ತು ದಿನಗಳ ಕಾಲ ನಡೆಯಲಿದೆ.

ದರ್ಬಾರ್ ಗಾಗಿ ಅರಮನೆಗೆ  ಆಗಮಿಸುವ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪಳಪಳನೆ ಹೊಳೆಯುವ ರೇಷ್ಮೆ ವಸ್ತ್ರಕ್ಕೆ ಚಿನ್ನದ ಜರಿ ಕೂರಿಸಿದ ರಾಜಪೋಷಾಕು ಅಲ್ಲದೆ, ಜರಿಪೇಟ, ಅತ್ಯಮೂಲ್ಯ ಆಭರಣ ಧರಿಸಿ ರಾಜಗಾಂಭೀರ್ಯದಲ್ಲಿ ಆಗಮಿಸುವುದನ್ನು ನೋಡುವುದೇ ಆನಂದವಾಗಿರುತ್ತದೆ.

ಇದು ಹೇಗೆ ನಡೆಯುತ್ತದೆ ಎನ್ನುವುದನ್ನು ನೋಡುವುದಾದರೆ ನವರಾತ್ರಿಯ ಮೊದಲ ದಿನ ಅಂದರೆ  ಪಾಡ್ಯದ ದಿನ ಯದುವೀರ್ ಒಡೆಯರ್‌ಗೆ ಬೆಳಿಗ್ಗೆ ಎದ್ದ ತಕ್ಷಣ ಆರತಿ ಎತ್ತಿ ಎಣ್ಣೆ ಶಾಸ್ತ್ರ ಮಾಡಿ, ಅರಮನೆಗೆ ಬರುವ ಕ್ಷೌರಿಕರಿಂದ ಚೌಲ ಮಾಡಿಸಿ ನಂತರ ಮಂಗಳ ಸ್ನಾನ ಮಾಡಲಾಗುತ್ತದೆ. ಮುತೈದೆಯರು ಹಾಗೂ ಪುರೋಹಿತ ಮನೆತನದ ಮಹಿಳೆಯರು ಆರತಿ ಬೆಳಗುತ್ತಾರೆ. ಇದಾದ ನಂತರ ಪೂಜೆಗೆ ಅಣಿಯಾಗುತ್ತಾರೆ. ಚಾಮುಂಡಿತೊಟ್ಟಿಯಲ್ಲಿ ಗಣಪತಿಗೆ ಪೂಜೆ ಮಾಡಿ ನಂತರ ಕಳಶಪೂಜೆ, ಕಂಕಣಪೂಜೆ ನಡೆಸಿ, ಕುಲದೇವತೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಕಂಕಣ ಧರಿಸಿ, ಯದುವೀರ್ ಅವರೊಂದಿಗೆ ಪತ್ನಿ ತ್ರಿಷಿಕಾಕುಮಾರಿ ಒಡೆಯರ್ ರಾಜಮನೆತನದ ಪದ್ಧತಿಯಂತೆ ಕಂಕಣ ಧರಿಸಿ ಎಲ್ಲಾ ರೀತಿಯ ಕಠಿಣ ವೃತಗಳು ಪಾಲಿಸುತ್ತಾರೆ.

ಚಂಡಿಕಾಹೋಮ,ಬಲಿ,ಮಹಿಷವಧೆ,ಶಮೀವೃಕ್ಷ ಪೂಜೆ ಸೇರಿದಂತೆ ಹಲವು ಪೂಜಾವಿಧಿಗಳು ಸಾಂಗೋಪವಾಗಿ ನಡೆಯುತ್ತದೆಯಲ್ಲದೆ,ದೇವಿ ಭಾಗವತವನ್ನು ಪಾರಾಯಣ ಮಾಡಲಾಗುತ್ತದೆ.ಈ ಸಂದರ್ಭದಲ್ಲಿ ಸಾಂಕೇತಿಕವಾಗಿ ಮಹಿಷಾಸುರನನ್ನು ಸಂಹರಿಸಲಾಗುತ್ತದೆ.

ಬೆಳಿಗ್ಗೆಕಂಕಣಧಾರಿಗಳಾದ ಯದುವೀರ್ ದಂಪತಿಗಳಿಗೆ ಪೂಜೆ, ಜೊತೆಗೆ ದರ್ಬಾರ್‌ಗೆ ಬರುವ ಮುನ್ನ ಪತ್ನಿಸುಮಂಗಲೆಯರೊಂದಿಗೆ ಪಾದಪೂಜೆ ಮಾಡಿ ಹಣೆಗೆ ತಿಲಕ ಇಡುತ್ತಾರೆ.ಇದು ಅರಮನೆಯ ಕಲ್ಯಾಣಮಂಟಪದ ಮೇಲ್ಭಾಗದಲ್ಲಿ ದಿನನಿತ್ಯ ನಡೆಯುತ್ತದೆ.ದರ್ಬಾರ್‌ ಹಾಲ್‌ಗೆ ಆಗಮಿಸುವ ಯದುವೀರ್ಒಡೆಯರ್ಸಿಂ ಹಾಸನಕ್ಕೆ ಪೂಜೆ ಮಾಡಿ ಬಳಿಕ ರಾಜಗಾಂಭೀರ್ಯದಿಂದ ಸಿಂಹಾಸನವನ್ನೇರಿ ಆ ಸ್ಥಾನಕ್ಕೆ ಬಲಗೈಯಿಂದ ಸೆಲ್ಯೂಟ್ ಮಾಡಿ ಆಸೀನರಾಗುತ್ತಾರೆ.

ಈಸಂದರ್ಭಹೊಗಳು ಭಟರಿಂದ ಬಹುಪರಾಕ್ ನಡೆಯುತ್ತದೆ.ನವರಾತ್ರಿಯ ಮೊದಲ ದಿನ ಅಂದರೆ ಪಾಡ್ಯದಂದು ಬೆಳಿಗ್ಗೆಯಿಂದ ಖಾಸಗಿ ದರ್ಬಾರ್ ನಡೆದರೆ,ಉಳಿದಂತೆ ಸಂಜೆ ವೇಳೆಯಲ್ಲಿ ನಡೆಯುತ್ತದೆ.ಪ್ರತಿದಿನ ಖಾಸಗಿ ದರ್ಬಾರ್ ನಡೆಯುವ ಮುನ್ನ ಕೆಲವು ವಿಧಿವಿಧಾನಗಳನ್ನು  ನಡೆಸಲಾಗುತ್ತದೆ. ಪಟ್ಟದ ಆನೆ,ಹಸು,ಕುದುರೆಗಳಿಗೆ ಅಲಂಕಾರ ಮಾಡಿ ಕೋಟೆ ಆಂಜನೇಯ ಸ್ವಾಮಿಗೆ ಪೂಜೆ ಬಳಿಕ ಅರಮನೆಗೆ ಇವುಗಳು ಪ್ರವೇಶ ಮಾಡಿದ ನಂತರ ದರ್ಬಾರ್ ಆರಂಭವಾಗುವುದು ವಿಶೇಷವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು