News Karnataka Kannada
Monday, May 06 2024
ಮೈಸೂರು

ಮೈಸೂರು:  ಸಿಎಂ ಸ್ಥಾನದ ಮೇಲೆ ಹಕ್ಕು ಮಂಡಿಸುವುದು ಸರಿಯಲ್ಲ ಎಂದ ಖರ್ಗೆ

ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತ ಕಾಂಗ್ರೆಸ್ ​ ತೊರದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರ ಅತ್ಯಾಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಿವೃತ್ತ ಕೆಎಎಸ್ ಅಧಿಕಾರಿ ರುದ್ರಯ್ಯ ಅವರು ಬಿಜೆಪಿ ಬಾವುಟ ಹಿಡಿದು ಕೇಸರಿ ಮನೆಯನ್ನು ಪ್ರವೇಶಿಸಿದ್ದಾರೆ.
Photo Credit : IANS

ಮೈಸೂರು:  ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಒಳಜಗಳದ ಸುದ್ದಿಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚಿಸುವುದು ಸರಿಯಲ್ಲ, ಪಕ್ಷದ ಹೈಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ಮುಂಬರುವ ವಿಧಾನಸಭಾ ಚುನಾವಣೆಗೂ ಮೊದಲೇ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸುವುದು ಸರಿಯಲ್ಲ. ಮುಖ್ಯಮಂತ್ರಿ ಯಾರಾಗಬೇಕು ಎಂಬ ವಿಷಯ ಮೈಸೂರು, ಬೆಂಗಳೂರು ಅಥವಾ ಕಲಬುರಗಿಯಲ್ಲಿ ನಿರ್ಧಾರವಾಗುವುದಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಲವು ಬಾರಿ ಮುಖ್ಯಮಂತ್ರಿ ಸ್ಥಾನಕ್ಕೆ ಹಕ್ಕು ಮಂಡಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಬೆಂಬಲಿಗರಿಬ್ಬರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ತಮ್ಮ ನಾಯಕ ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುತ್ತಿದ್ದಾರೆ.

ಈ ರಾಜಕೀಯ ಬೆಳವಣಿಗೆಯು ಕಾಂಗ್ರೆಸ್ ನೊಳಗಿನ ಒಳಜಗಳವನ್ನು ಬಯಲಿಗೆಳೆದಿದೆ ಮತ್ತು ಚುನಾವಣೆಗಳು ಸಮೀಪಿಸುತ್ತಿದ್ದಂತೆ ಮುಂಬರುವ ದಿನಗಳಲ್ಲಿ ಅದು ಇನ್ನಷ್ಟು ಹದಗೆಡುತ್ತದೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಗೆ ೧೦ ತಿಂಗಳಿಗಿಂತ ಕಡಿಮೆ ಸಮಯವಿದೆ.

ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರೊಂದಿಗೆ, ಕಾಂಗ್ರೆಸ್ ನೊಳಗಿನ ಒಂದು ವರ್ಗದ ನಾಯಕರು ಕಾಂಗ್ರೆಸ್ ಬಹುಮತ ಗಳಿಸಿದರೆ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಾರೆ.

ನಾವು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಇದು ನಮ್ಮ ಮುಖ್ಯ ಉದ್ದೇಶವಾಗಿದೆ” ಎಂದು ಅವರು ಹೇಳಿದರು.

ಕರ್ನಾಟಕದಲ್ಲಿ ಪಕ್ಷವು ಆರಾಮದಾಯಕ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಆಂತರಿಕ ಸಮೀಕ್ಷೆಯೊಂದು ತೋರಿಸಿದ ನಂತರ ಕಾಂಗ್ರೆಸ್ ನಾಯಕರು ಹರ್ಷಗೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು