Categories: ಮೈಸೂರು

ಮೈಸೂರು: ದರ್ಶನ್ ಧ್ರುವನಾರಾಯಣ್ ಗೆ ಬೆಂಬಲ ಸೂಚಿಸಿದ ಜೆಡಿಎಸ್ ಪಕ್ಷ

ಮೈಸೂರು: ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ತಮ್ಮ ತಂದೆ ಆರ್.ಧ್ರುವನಾರಾಯಣ್ ಅವರನ್ನು ಕಳೆದುಕೊಂಡ ನೋವಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಮೊದಲೇ ನೋವಿನಲ್ಲಿದ್ದ ದರ್ಶನ್ ಗೆ ತಾಯಿ ವೀಣಾ ತೀರಿಕೊಂಡಿರುವುದು ಬರಸಿಡಿಲಿನಂತೆ ಎರಗಿದೆ. ಈ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ದರ್ಶನ್ ಧ್ರುವನಾರಾಯಣ್ ವಿರುದ್ಧ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ಜೆಡಿಎಸ್ ನಿರ್ಧರಿಸಿದೆ. ಈ ಬಗ್ಗೆ ಜೆಡಿಎಸ್ ನಾಯಕರಾದ ಜಿ.ಟಿ.ದೇವೇಗೌಡ ಮತ್ತು ಸಾ.ರಾ.ಮಹೇಶ್ ಸ್ಪಷ್ಟನೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಧ್ರುವನಾರಾಯಣ್ ಅವರ ಇಬ್ಬರು ಮಕ್ಕಳು ಲವ ಮತ್ತು ಕುಶರಂತೆ ಕಾಣುತ್ತಾರೆ. ಅವರಿಗೆ ತಂದೆಯನ್ನು ಕಳೆದುಕೊಂಡ ನೋವು ಇನ್ನೂ ಇದೆ. ತಾಯಿ ಕೂಡ ನಿಧನರಾಗಿದ್ದಾರೆ. ಈ ನಿಟ್ಟಿನಲ್ಲಿ ಸ್ಪರ್ಧೆ ಮಾಡಬೇಕೇ ಬೇಡವೇ ಎಂಬುದನ್ನು ಚರ್ಚಿಸುತ್ತಿದ್ದೇವೆ ಎಂದು ಹೇಳಿದರು.

ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯಿಸಿ, ತಂದೆಯ ನಿಧನದ ನಂತರ ಧ್ರುವನಾರಾಯಣ್ ಅವರ ಪುತ್ರನಿಗೆ ಬೆಂಬಲ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಮೈಸೂರಿನ ಶಾಸಕರೊಂದಿಗೆ ಈ ಬಗ್ಗೆ ಚರ್ಚಿಸಿದ್ದಾರೆ.  ತಂದೆ ಕಳೆದುಕೊಂಡ ದುಃಖದಲ್ಲಿರುವ ದರ್ಶನ್ ಗೆ ಬೆಂಬಲ ನೀಡುವ ಬಗ್ಗೆ ಚರ್ಚೆ ನಡೆಯಿತು. ಈಗ ದರ್ಶನ್ ಅವರ ತಾಯಿ ಕೂಡ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ಖಂಡಿತವಾಗಿಯೂ ಬೆಂಬಲ ನೀಡಲಿದ್ದಾರೆ ಎಂದು ತಿಳಿಸದ್ದಾರೆ. ಅಲ್ಲದೆ  ದರ್ಶನ್ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಬೆಂಬಲ ಘೋಷಿಸುವುದಾಗಿ ಸ್ವತಃ ಕುಮಾರಸ್ವಾಮಿ ತಿಳಿಸಿರುವುದನ್ನು ಗಮನಿಸಬಹುದು.

Ashika S

Recent Posts

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 mins ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

33 mins ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

50 mins ago

ಲೋಕಸಭೆ ಚುನಾವಣೆ: ಭಾಲ್ಕಿ ಕ್ಷೇತ್ರದಲ್ಲಿ ಅತ್ಯಧಿಕ ಮತದಾನ

ಬೀದರ್‌ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…

1 hour ago

ಕುಡಿಯುವ ನೀರಿನ ಸಮಸ್ಯೆ ನಿವಾರಣೆ: ಮಲಪ್ರಭಾ ಕಾಲುವೆಗೆ ಮೇ 14 ರಿಂದ 23 ರವರೆಗೆ ನೀರು

ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…

2 hours ago

ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್‌ ಮಾಕನೂರು ಬಂಧನ

ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್‌ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…

2 hours ago