ಮೈಸೂರು

ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾಲುಮರದ ತಿಮ್ಮಕ್ಕ ಅವರಿಗೆ ಸನ್ಮಾನ

ಮೈಸೂರು: ಮರಗಳನ್ನು ಬೆಳೆಸಿ ವೃಕ್ಷ ಮಾತೆ ಎಂದು ಖ್ಯಾತಿ, ಪರಿಸರ ರಾಯಭಾರಿ ಗೌರವದೊಂದಿಗೆ ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ  ಪಡೆದ ಸಾಲು ಮರದ ತಿಮ್ಮಕ್ಕ ಅವರನ್ನು ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ನಜರ್ ಬಾದ್ ನಲ್ಲಿರುವ ಗೌರ್ನಮೆಂಟ್ ಗೆಸ್ಟ್ ಹೌಸ್ ನಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.

ಅಭಿನಂದನೆ ಸಲ್ಲಿಸಿ ಮಾತನಾಡಿದ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್  ಅವರು, ಸರ್ಕಾರ ಈಗಲಾದರೂ ಇವರ ಸೇವೆಯನ್ನು ಗುರುತಿಸಿ ಉತ್ತಮವಾದ ಸ್ಥಾನಮಾನ ನೀಡಿರುವುದು ನಿಜಕ್ಕೂ ಶ್ಲಾಘನೀಯ ಹಾಗೆಯೇ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ನಿಸ್ವಾರ್ಥ ಪರಿಸರ ಸೇವೆ ಮೂಲಕ ಬದುಕನ್ನೇ ಪರಿಸರಕ್ಕಾಗಿ ಮುಡಿಪಿಟ್ಟ ವೃಕ್ಷಮಾತೆ ಸಾಲುಮರದ ತಿಮ್ಮಕ್ಕರಿಗೆ ಅವರಿಗೆ ಲಭಿಸಿದ ಪ್ರಶಸ್ತಿಗಳು ಹಾಗೂ ಅವರ ಸಾಧನೆ ಬಿಂಬಿಸಲು ವಸ್ತು ಸಂಗ್ರಹಾಲಯ ‌ನಿರ್ಮಿಸಲು ಸರ್ಕಾರ ಮುಂದಾಗಲಿ ಎಂದು ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ನಗರ ಪಾಲಿಕೆ ಮಾಜಿ ಸದಸ್ಯರಾದ ಎಂ.ಡಿ. ಪಾರ್ಥಸಾರಥಿ, ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಬಿಜೆಪಿ ಮಾಧ್ಯಮ ಪ್ರಮುಖ್ ಕೇಬಲ್ ಮಹೇಶ್, ಅಪೂರ್ವ ಸುರೇಶ್, ಪರಿಸರ ಸ್ನೇಹಿ ತಂಡದ ಅಧ್ಯಕ್ಷ ಲೋಹಿತ್, ಶ್ರೀಕಾಂತ್ ಕಶ್ಯಪ್, ಶಿವು, ಮಹದೇವ್ ಪ್ರಸಾದ್ ಇನ್ನಿತರರು ಹಾಜರಿದ್ದರು.

Ashika S

Recent Posts

ಸುಬ್ರಹ್ಮಣ್ಯದಲ್ಲಿ ಭಾರಿ ಗಾಳಿ-ಮಳೆ : ತೋಟದಲ್ಲಿ ಮರ ಬಿದ್ದು ಮಹಿಳೆ ಸಾವು

  ಗಾಳಿ - ಮಳೆಗೆ ಮರ ಬಿದ್ದು ವೃದ್ಧೆಯೋರ್ವರು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ಮೇ 16…

24 mins ago

‘ಜೆಟ್ ಏರ್ವೇಸ್’ ಸಂಸ್ಥಾಪಕ ನರೇಶ್ ಗೋಯಲ್ ಪತ್ನಿ ನಿಧನ

ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರ ಪತ್ನಿ ಅನಿತಾ ಗೋಯಲ್ ಇಂದು ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

28 mins ago

ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ…

39 mins ago

ಟಿ 20 ವಿಶ್ವಕಪ್​​ನಲ್ಲಿ ಕನ್ನಡಿಗರ ಸಂಭ್ರಮ ಹೆಚ್ಚಿಸಿದ ಕೆಎಮ್​ಫ್​

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಕೆಎಮ್​ಫ್​ (ಕರ್ನಾಟಕ ಹಾಲು ಮಹಾಮಂಡಳಿ) ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್ ತಂಡಕ್ಕೆ ಪ್ರಾಯೋಕತ್ವ ನೀಡಿದೆ.

1 hour ago

ಉದಯ ಟಿವಿಯಲ್ಲಿ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ ಬಹುಮಾನ ಗೆಲ್ಲಿ

ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…

1 hour ago

ಲಾರಿಗೆ ಬಸ್‌ ಡಿಕ್ಕಿ : 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…

2 hours ago