Categories: ಮೈಸೂರು

ಮೈಸೂರು-ಕುಶಾಲನಗರ ರೈಲ್ವೆ ಡಿಪಿಆರ್ ಸಿದ್ಧ

ಮೈಸೂರು: ಮೈಸೂರು-ಕುಶಾಲನಗರ ನಡುವಿನ ರೈಲ್ವೆ ಯೋಜನೆಯ ಪ್ರಾಥಮಿಕ ಡಿಪಿಆರ್ ತಯಾರಾಗಿದ್ದು, ಮತ್ತೊಂದು ಸುತ್ತಿನಲ್ಲಿ ಪರಿಶೀಲಿಸಿ ಆಗಸ್ಟ್ ತಿಂಗಳಲ್ಲಿ ಭಾರತೀಯ ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಂಸದ ಪ್ರತಾಪಸಿಂಹ ತಿಳಿಸಿದ್ದಾರೆ.

ನಗರದ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ಗತಿಶಕ್ತಿ ವಿಭಾಗ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ರೈಲ್ವೆ ಇಲಾಖೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಮೈಸೂರು-ಕುಶಾಲನಗರ ನಡುವೆ 87 ಕಿ.ಮೀ ಇದ್ದು, ಪ್ರಾಥಮಿಕವಾಗಿ 1854.62 ಕೋಟಿ ರೂ.ವೆಚ್ಚದ ಯೋಜನೆಗೆ ಸರ್ವೆ ಮಾಡಲಾಗಿದೆ. ಮತ್ತೊಂದು ಸುತ್ತಿನ ಸರ್ವೆ ನಡೆಸಿದ ಬಳಿಕ ಅಂತಿಮ ಡಿಪಿಆರ್‌ನ್ನು ರೈಲ್ವೆ ಮಂಡಳಿಗೆ ಕಳುಹಿಸಲಾಗುವುದು.

ಅಂತಿಮ ಹಂತದ ಸರ್ವೆ ಕಾರ್ಯ ಮುಗಿದ ಮೇಲೆ ಎರಡು ಸಾವಿರ ಕೋಟಿ ದಾಟಬಹುದು. ಮೈಸೂರಿನಿಂದ ಬೆಳಗೊಳ, ಇಲವಾಲ, ಬಿಳಿಕೆರೆ, ಉದ್ದೂರು, ಹುಣಸೂರು, ಸತ್ಯಗೋಳ, ಪಿರಿಯಾಪಟ್ಟಣ, ದೊಡ್ಡಹೊಸೂರು, ಕುಶಾಲನಗರ ಸೇರಿ 9 ರೈಲ್ವೆ ನಿಲ್ದಾಣಗಳು ಬರಲಿವೆ. ಈಗಾಗಲೇ ಕೇಂದ್ರ ಸರ್ಕಾರ ಅನುದಾನ ಮೀಸಲಿಟ್ಟಿರುವ ಕಾರಣ ಡಿಪಿಆರ್‌ಗೆ ಅನುಮೋದನೆ ದೊರೆಯುತ್ತಿದ್ದಂತೆ ಭೂ ಸ್ವಾಧೀನ ಕಾರ್ಯ ಆರಂಭವಾಗಲಿದೆ ಎಂದು ಹೇಳಿದರು.

ಮೈಸೂರು ರೈಲ್ವೆ ನಿಲ್ದಾಣವನ್ನು ಮುಂದಿನ 20-30 ವರ್ಷಗಳ ಪ್ರಯಾಣಿಕರನ್ನು ಗಮನದಲ್ಲಿಟ್ಟುಕೊಂಡು ಬೈಯ್ಯಪ್ಪನಹಳ್ಳಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಸೆಪ್ಟಂಬರ್ ತಿಂಗಳಲ್ಲಿ 750 ಕೋಟಿ ರೂ.ವೆಚ್ಚದಲ್ಲಿ ಹೆಚ್ಚುವರಿ ಟಿಕೆಟ್ ಕೌಂಟರ್ ಸೇರಿ ಇನ್ನಿತರ ಕಾಮಗಾರಿ ಆರಂಭವಾಗಲಿದೆ. 346.64 ಕೋಟಿ ರೂ. ವೆಚ್ಚದಲ್ಲಿ ಮೈಸೂರು ರೈಲ್ವೆ ನಿಲ್ದಾಣ ವಿಸ್ತರಣೆ ಕಾಮಗಾರಿ ಕೈಗೊಳ್ಳಲಾಗುವುದು. ಈಗಾಗಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಆ.30ಕ್ಕೆ ಟೆಕ್ನಿಕಲ್ ಬಿಡ್ ಆಗುತ್ತದೆ. ನವೆಂಬರ್ ತಿಂಗಳೊಳಗೆ ಕಾಮಗಾರಿ ಆರಂಭಿಸಲಾಗುತ್ತದೆ. ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಚಾಮರಾಜ ಒಡೆಯರ್ 1870ರಲ್ಲಿ ಕರ್ನಾಟಕಕ್ಕೆ ರೈಲ್ವೆ ಟ್ರ್ಯಾಕ್ ತಂದರು. ಹೀಗಾಗಿ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರದಲ್ಲಿ ಚಾಮರಾಜ ಒಡೆಯರ್ ಪ್ರತಿಮೆ ನಿರ್ಮಾಣ ಮಾಡಲಾಗುವುದು. ಮಾತ್ರವಲ್ಲದೇ ಮೈಸೂರು ರೈಲ್ವೆ ನಿಲ್ದಾಣಕ್ಕೆ ಚಾಮರಾಜ ಒಡೆಯರ್ ಹೆಸರಿಡಲು ಕ್ರಮವಹಿಸಲಾಗುತ್ತಿದೆ. ರೈಲು ನಿಲ್ದಾಣದಲ್ಲಿ ಆರು ಪ್ಲಾಟ್‌ಫಾರಂ ಜತೆಗೆ ಹೆಚ್ಚುವರಿಯಾಗಿ ಮೂರು ಪ್ಲಾಟ್‌ಫಾರಂ, ನಾಲ್ಕು ಫಿಟ್‌ಲೈನ್, ನಾಲ್ಕು ಸಬ್‌ಲೇನ್ ಬರಲಿವೆ ಎಂದರು.

ಬೈಯ್ಯಪ್ಪನಹಳ್ಳಿ ಮಾದರಿ ದ್ವಾರ: ಬೈಯ್ಯಪ್ಪನಹಳ್ಳಿ, ಯಶವಂತಪುರ ಟರ್ಮಿನಲ್ ಮಾದರಿಯಲ್ಲಿ ಮೈಸೂರಿನ ಸಿಎಫ್‌ಟಿಆರ್‌ಐ ಕಡೆಗಿನ ರೈಲ್ವೆ ನಿಲ್ದಾಣದ 3ನೇ ಪ್ರವೇಶ ದ್ವಾರ ನಿರ್ಮಿಸಲು ಚರ್ಚಿಸಲಾಗುತ್ತಿದೆ. ಮುಂದಿನ 2 ತಿಂಗಳಲ್ಲಿ ಡಿಪಿಆರ್ ಸಿದ್ದಪಡಿಸಲಾಗುವುದು. ಇದಕ್ಕೆ ಹೆಚ್ಚುವರಿಯಾಗಿ 200 ಕೋಟಿ ರೂ. ಖರ್ಚಾಗಲಿದೆ. 16ರಿಂದ 20 ಕೊಠಡಿ ಇರುವ ಒಂದು ಫ್ಲಾಜಾ, ಸೂಪರ್ ಮಾರ್ಕೆಟ್, ಹೋಟೆಲ್ ಮೊದಲಾದ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕೆಆರ್‌ಎಸ್ ರಸ್ತೆಯ ಬಳಿ ರೈಲ್ವೆ ಓವರ್ ಬ್ರಿಡ್ಜ್ ಮಾಡುವ ವಿನ್ಯಾಸ ಅನುಮೋದನೆ ಹಂತದಲ್ಲಿದೆ. ಕ್ರಾಫಡ್ ಹಾಲ್ ಪಕ್ಕದಲ್ಲಿರುವ ರೈಲ್ವೆ ಹಳಿ ಬಳಿಯಲ್ಲಿ ಶೀಘ್ರವೇ ಅಂಡರ್ ಪಾಸ್ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದರು ತಿಳಿಸಿದರು. ಮೈಸೂರಿನಿಂದ ಬೆಂಗಳೂರಿಗೆ ಹೋಗುವ ಕೆಲವು ರೈಲುಗಳು ಕೆಂಗೇರಿ ತಲುಪಲು ತಡವಾಗುತ್ತಿದೆ. 2 ಗಂಟೆಯೊಳಗೆ ಕೆಂಗೇರಿ ತಲುಪುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Ashika S

Recent Posts

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

23 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

39 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

50 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

1 hour ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

1 hour ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

1 hour ago