Categories: ಮೈಸೂರು

ಮೈಸೂರು: ಸಿದ್ದರಾಮಯ್ಯ ಗೆದ್ದು ತೋರಿಸಲಿ – ಶ್ರೀನಿವಾಸ ಪ್ರಸಾದ್

 

 

ಮೈಸೂರು: ನನ್ನ ಐವತ್ತು ವರ್ಷದ ರಾಜಕಾರಣದಲ್ಲಿ ಹಂತ ಹಂತವಾಗಿ ಹೋರಾಟ ಮಾಡಿ ಬಂದಿದ್ದೇನೆ. ಯಾರಿಗೂ ನಾನು ತಲೆಬಾಗುವುದಿಲ್ಲ. ಸಿದ್ದರಾಮಯ್ಯ ಕ್ಷೇತ್ರಗಳನ್ನು ಅಲೆದು ಕೊನೆಗೆ ವರುಣಕ್ಕೆ ಬಂದಿದ್ದು, ಗೆದ್ದು ತೋರಿಸಲಿ ಎಂದು ಸಂಸದ ಎ ಶ್ರೀನಿವಾಸ ಪ್ರಸಾದ್ ಸವಾಲು ಹಾಕಿದರು.

ವರುಣ ವಿಧಾನಸಭಾ ಕ್ಷೇತ್ರದ ನಾಡನಹಳ್ಳಿ ಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬಿಜೆಪಿ ಎಸ್‌ಸಿ ಮೋರ್ಚಾ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಸ್ವಾತಂತ್ರ್ಯ ಬಂದ ಮೇಲೆ ದಲಿತರ ಸ್ಥಿತಿಗತಿ ಏನಿದೆ ಎಂಬುದನ್ನು ವಿಶೇಷವಾಗಿ ನರೇಂದ್ರ ಮೋದಿ ಗಮನ ಹರಿಸಬೇಕು ಎಂದು ಸಲಹೆ ನೀಡಿದ್ದೇನೆ. ಕಾಂಗ್ರೆಸ್ ಸರ್ಕಾರದಿಂದ ದಲಿತರಿಗೆ ಏನು ಅನುಕೂಲಗಳಾಗಿಲ್ಲ. ಸಿದ್ದರಾಮಯ್ಯ ಸ್ವಾರ್ಥ ರಾಜಕಾರಿಣಿ. ತಾವು ಮುಖ್ಯ ಮಂತ್ರಿಯಾಗಲು ತಮ್ಮ ಪಕ್ಷದ ಪರಮೆಶ್ವರ್ ಅವರನ್ನು ಸೋಲಿಸಿದರು. ದಲಿತರನ್ನು ಬೆಳೆಯಲು ಬಿಡುತ್ತಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಹೋರಾಟಗಾರರಲ್ಲ ಅವರು, ಅವಕಾಶವಾದಿ. ಮಲ್ಲಿಕಾರ್ಜುನ ಖರ್ಗೆ ಎಂದೂ ಹೋರಾಟ ಮಾಡಿ ಮೇಲೆ ಬಂದಿಲ್ಲ. ಖರ್ಗೆ ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದರು. ಆದರೆ,. ಅಧಿಕಾರ ಇಲ್ಲದೆ ಅವರು ಬದುಕಲಾರರು ಎಂದು ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾ ಅಧ್ಯಕ್ಷ ಸಿಎಂ ಮಹದೇವಯ್ಯ, ನಟ ಕೆ.ಶಿವರಾಂ, ವರುಣ ಮಂಡಲ ಅಧ್ಯಕ್ಷ ವಿಜಯಕುಮಾರ್, ಜಿಪಂ ಮಾಜಿ ಸದಸ್ಯ ಸದಾನಂದ, ಗುರುಸ್ವಾಮಿ, ಕಾಪು ಸಿದ್ದಲಿಂಗಸ್ವಾಮಿ, ಚುನಾವಣಾ ವೀಕ್ಷಕ ಚನ್ನೈ ರಾಜ್ಯದ ಪ್ರಕಾಶ್, ಬಿಜೆಪಿ ತಾಲೂಕು ಅಧ್ಯಕ್ಷ ರಾಜೇಂದ್ರ, ಅರಕಲವಾಡಿ ನಾಗೇಂದ್ರ, ಬಿಜೆಪಿ ಮುಖಂಡರಾದ ನರಸಿಂಹ ಮೂರ್ತಿ, ವರಹಳ್ಳಿ ನಾಗೇಂದ್ರ, ಶ್ರೀಧರ ಶಿವಯ್ಯ, ಎಂ.ಮಂಜು, ಆನಂದರಾಜು, ಬಲರಾಜು ನರಸಿಂಹಮೂರ್ತಿ ಸೇರಿದಂತೆ ಬಿಜೆಪಿ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.

Sushma K

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

37 mins ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

42 mins ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

56 mins ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

1 hour ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

2 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

2 hours ago