Categories: ಮೈಸೂರು

ಮೈಸೂರು: ಪಕ್ಷದ ಟಿಕೆಟ್ ಗಿಂತ ಮೋದಿ ಪ್ರೀತಿ ಹೆಚ್ಚು – ರಾಮದಾಸ್

ಮೈಸೂರು: ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಎಸ್.ಎ.ರಾಮದಾಸ್ ಅವರು ತಮಗೆ ಟಿಕೆಟ್‌ ದೊರೆತಿಲ್ಲವಾದರೂ ಪಕ್ಷ ತೊರೆಯುವ ಯಾವುದೇ ಚಿಂತನೆ ಇಲ್ಲ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು. ನಾನು ನಿರಂತರವಾಗಿ ಬಿಜೆಪಿ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೆ, ಮೈಸೂರು ಜಿಲ್ಲೆಯಲ್ಲಿ  ಅಭಿವೃದ್ಧಿ ವಿಚಾರದಲ್ಲಿ ಕೆ .ಆರ್.ಕ್ಷೇತ್ರ ನಂ.1 ಸ್ಥಾನದಲ್ಲಿದೆ.

ನಾನು ಕೂಡ ಟಿಕೆಟ್ ಪಡೆಯುವ ನಿರೀಕ್ಷೆಯಲ್ಲಿದ್ದೆ, ಆದ್ದರಿಂದ ನಾನು ಬೂತ್ ಮಟ್ಟದಿಂದ ಎಲ್ಲಾ ಸಿದ್ಧತೆಗಳನ್ನು ಮಾಡಿದ್ದೆ.  ಆದರೆ ಟಿಕೆಟ್ ಕೈತಪ್ಪಿತು. ನಂತರ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಒತ್ತಡವಿತ್ತು. ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ 13,000 ಮತಗಳ ಅಂತರದಿಂದ ಗೆಲ್ಲಬಹುದು ಎಂದು ಅವರು ಹೇಳಿದರು.

ಪಕ್ಷೇತರನಾಗಿ  ಗೆದ್ದರೆ ಮತ್ತೆ ಬಿಜೆಪಿಗೆ ಬರಬಹುದು ಎಂದು ಲೆಕ್ಕಾಚಾರ ಹಾಕಿದ್ದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಸಂಬಂಧವನ್ನು ಕಳೆದುಕೊಳ್ಳಲು ಇಚ್ಛೆ ಇರದ ಕಾರಣ ಪಕ್ಷೇತರನಾಗಿ ಸ್ಪರ್ಧಿಸುವ ವಿಚಾರವನ್ನು ಕೈಬಿಟ್ಟಿದೇನೆ.  ಟಿಕೆಟ್ ಗಿಂತ ಮೋದಿ ಅವರ ಪ್ರೀತಿ ನನಗೆ ಹೆಚ್ಚು ಎಂದು ಅವರು ಹೇಳಿದರು.

ಮೈಸೂರಿನಲ್ಲಿ ಹಲವು ಶಾಸಕರು ಬಿಜೆಪಿ ತೊರೆದಿದ್ದಾರೆ. ಆದರೆ ನಾನು ನನ್ನ ನೋವನ್ನು ನುಂಗಿದೆ. ಎಷ್ಟೇ ವೈಯಕ್ತಿಕ ನಷ್ಟವಾದರೂ ದೇಶ ಸೋಲಬಾರದು ಎಂದು ನಾನು ನಿರ್ಧರಿಸಿದ್ದೇನೆ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ. ಪಕ್ಷದ ಅಭ್ಯರ್ಥಿ ಶ್ರೀವತ್ಸ ಅವರ ನಾಮಪತ್ರ ಸಲ್ಲಿಕೆಯಲ್ಲಿ ಭಾಗವಹಿಸುತ್ತೇನೆ. ನಾನು ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಕೇಳುತ್ತಿದ್ದೇನೆ. ಶಾಸಕ ಸ್ಥಾನ ನನಗೆ ಮುಖ್ಯವಲ್ಲ ಆದರೆ ದೇಶದ ಪ್ರಧಾನಿ ಮುಖ್ಯ ಎಂದು ಅವರು ಹೇಳಿದರು.

Ashika S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

6 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

6 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

6 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

7 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

7 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

8 hours ago