Categories: ಮೈಸೂರು

ಮೈಸೂರು: ಆಯುಷ್ಮಾನ್ ಕಾರ್ಡ್ ನೀಡಲು ಸಂಸದ  ಪ್ರತಾಪಸಿಂಹ ಸೂಚನೆ

ಮೈಸೂರು:  ಅರ್ಹ ಸಾರ್ವಜನಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಗಳನ್ನು ಸಕಾಲದಲ್ಲಿ ನೀಡಿ. ಇದರಿಂದ ಬಡವರಿಗೆ ಉಚಿತ ಚಿಕಿತ್ಸೆ ಪಡೆಯಲು ಅನುಕೂಲವಾಗುತ್ತದೆ ಎಂದು ಮೈಸೂರು ಮತ್ತು ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರತಾಪ್ ಸಿಂಹ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿ ಜನರ ಆರೋಗ್ಯ ದೃಷ್ಟಿಯಿಂದಾಗಿ ಜನರಿಗೆ ಆರೋಗ್ಯ  ಕಾರ್ಡ್ಗಳನ್ನು ಆದಷ್ಟು ಬೇಗ ವಿತರಣೆ ಮಾಡಬೇಕು. ಮೂರರಿಂದ ನಾಲ್ಕು ತಿಂಗಳು ಎಲ್ಲಾ ಮಂಗಳವಾರದಂದು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಮೇಳವನ್ನು ಮಾಡಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ರಸ್ತೆಯಲ್ಲಿನ ನೀರು ಗಿಡಗಳಿಗೆ ಹೋಗುವಂತೆ ಸರಿಯಾದ ಮಾರ್ಗ ಮಾಡಬೇಕು. ಜನರಿಗೆ ಸರಿಯಾಗಿ ನೀರು ಸರಬರಾಜು ಮಾಡುವ ಕೆಲಸ ಮಾಡಬೇಕು. ಕಸ ತುಂಬಿರುವ ಪ್ರದೇಶವನ್ನು ಸ್ವಚ್ಚ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮ ಸಡಕ್ ಯೋಜನೆ ಅಧಿಕಾರಿಗಳು ಆದಷ್ಟು ಬೇಗ ರಸ್ತೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿದರು. ಗಿಡ ಮರಗಳನ್ನು ಬೆಳೆದರೆ ಅದರ ಪ್ರತಿಫಲವನ್ನು ನಾವು ಪಡೆಯುತ್ತೇವೆ. ಹೊಸದಾಗಿ ನಿರ್ಮಾಣ ವಾಗುವಂತಹ ರಿಂಗ್ ರಸ್ತೆಯ ಬದಿಯಲ್ಲಿ ಗಿಡಗಳನ್ನು ನೆಡುವಂತೆ ಸೂಚಿಸಿದ ಅವರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ  ಮಕ್ಕಳಿಗೆ ಹತ್ತಿರ ವಾಗುವಂತಹ ಸ್ಥಳಗಳಲ್ಲಿ ಹಾಸ್ಟೆಲ್ ನಿರ್ಮಿಸಿ ಎಂದು ಹೇಳಿದರು.

 ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಬಗಾದಿ ಗೌತಮ್, ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷಿö್ಮಕಾಂತರೆಡ್ಡಿ ಅವರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Ashika S

Recent Posts

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ…

8 mins ago

ಇಂದಿನ ರಾಶಿ ಫಲ : ಯಾರಿಗೆ ಶುಭ , ಯಾರಿಗೆ ಅಶುಭ

ನೀವು ಮೇಷ, ವೃಷಭ, ಮಿಥುನ, ಕಟಕ ರಾಶಿಯವರಾಗಿದ್ದರೇ, 09 ಮೇ​​ 2024ರ ನಿಮ್ಮ ರಾಶಿಭವಿಷ್ಯ ಹೇಗಿದೆ? ನಿಮಗೆ ಶುಭ ಅಥವಾ…

20 mins ago

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

8 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

8 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

8 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

9 hours ago