Categories: ಮೈಸೂರು

ಮೈಸೂರು:  ಕೋಟ್ಯಾಧೀಶ್ವರಿಯಾದ ಮೈಸೂರಿನ ಚಾಮುಂಡೇಶ್ವರಿ

ಮೈಸೂರು: ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಯಲ್ಲಿ ಮೂರೂವರೆ ಕೋಟಿ ರೂಪಾಯಿಗೂ ಅಧಿಕ ಕಾಣಿಕೆ ಸಂಗ್ರಹವಾಗಿದ್ದು, ಇದು ದೇವಾಲಯದ ಇತಿಹಾಸದಲ್ಲಿಯೇ ದಾಖಲೆಯ ಸಂಗ್ರಹವಾಗಿದೆ.

ದೇವಾಲಯದ ಆವರಣದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 250 ಮಂದಿ ಸಿಸಿಟಿವಿ ಕಣ್ಗಾವಲಿನಲ್ಲಿ ದಿನವಿಡೀ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣವನ್ನು ಎಣಿಕೆ ಮಾಡಿದರು.

ಆಷಾಢಮಾಸದಲ್ಲಿ ಬಂದ 4 ಶುಕ್ರವಾರ ಹಾಗೂ ಚಾಮುಂಡೇಶ್ವರಿ ವರ್ಧುಂತ್ಯುತ್ಸವ ಅಂಗವಾಗಿ ಚಾಮುಂಡಿ ಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದಲ್ಲದೇ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಆಗಮಿಸಿ ದೇವಿಯ ದರ್ಶನ ಪಡೆದಿದ್ದರು. ಈ ವೇಳೆ ಭಕ್ತರು ಹುಂಡಿಗೆ ಅರ್ಪಿಸಿದ ಕಾಣಿಕೆ ಎಣಿಕೆ ಕಾರ್ಯದಲ್ಲಿ 2,33,51,270 ರೂಪಾಯಿ ನಗದು, 270ಗ್ರಾಂ ಚಿನ್ನ, 1 ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ಇದರ ಜೊತೆಗೆ 1,03,69,250 ರೂಪಾಯಿ ಪ್ರವೇಶ ಟಿಕೆಟ್‌ನಿಂದ ಸಂಗ್ರಹವಾಗಿದೆ ಎಂದು ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಸಿ.ಜೆ.ಕೃಷ್ಣ ಮಾಹಿತಿ ನೀಡಿದ್ದಾರೆ.

ವಿವಿಧ ಮುಖಬೆಲೆಯ ನೋಟುಗಳಿಂದ 2,29,93,739 ರೂ. ಹಾಗೂ ನಾಣ್ಯಗಳಿಂದ 3,57,531 ರೂ. ಸೇರಿ 2,33,51,270 ರೂ. ಹಣ ಹುಂಡಿಯಿಂದ ಸಂಗ್ರವಾಗಿದೆ. ಹಾಗೆಯೇ ಆಷಾಢ ಮಾಸದಲ್ಲಿ  ದೇಗುಲ ಪ್ರವೇಶಕ್ಕೆ ನೀಡಿದ್ದ ಟಿಕೆಟ್‌ನಿಂದ 1,03,69,270 ರೂ. ಸಂಗ್ರಹವಾಗಿದೆ. ಈ ಮೂಲಕ ಆಷಾಢ ಮಾಸದಲ್ಲಿ ಚಾಮುಂಡೇಶ್ವರಿ ದೇವಿ ಮೂರುವರೆ ಕೋಟಿ ಒಡತಿಯಾಗಿರುವುದು ದಾಖಲೆಯಾಗಿದ್ದು, ಹಿಂದಿನ ಎಲ್ಲಾ ದಾಖಲೆಗಳನ್ನು ಈ ಬಾರಿಯ ಆಷಾಢ ಮಾಸದ ಆದಾಯ ಮೀರಿಸಿದೆ.

ಹುಂಡಿ ಎಣಿಕೆ ವೇಳೆ ಕೆಲವರು ರಷ್ಯದ 500 ರೂ. ಮತ್ತು 1 ಸಾವಿರ ರೂ. ಮುಖಬೆಲೆಯ 1 ಲಕ್ಷಕ್ಕೂ ಅಧಿಕ ನೋಟುಗಳು, ವಿದೇಶಿ ಕರೆನ್ಸಿಗಳನ್ನು ಹಾಕಿರುವುದು ಕಂಡುಬಂದಿದೆ. ಒಟ್ಟಾರೆ ಎರಡು ವರ್ಷಗಳ ಬಳಿಕ ಆಷಾಢದಲ್ಲಿ ಚಾಮುಂಡಿಬೆಟ್ಟಕ್ಕೆ ಭಕ್ತರಿಗೆ ಅವಕಾಶ ನೀಡಿದ್ದರಿಂದ ದಾಖಲೆಯ ಕಾಣಿಕೆ ಸಂಗ್ರಹವಾಗಿದೆ.

Ashika S

Recent Posts

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

24 mins ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

37 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

52 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

1 hour ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

2 hours ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

2 hours ago