Categories: ಮೈಸೂರು

ಮೈಸೂರು: ಪತ್ರಿಕಾ ವಿತರಕರಿಗೆ ಸನ್ಮಾನ

ಮೈಸೂರು: ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಗ್ರಹಾರ ವೃತ್ತದಲ್ಲಿ ವಿಶ್ವ ಪತ್ರಿಕಾ ವಿತರಕರ ದಿನಾಚರಣೆ ಅಂಗವಾಗಿ 40 ವರ್ಷಗಳಿಂದ ಮನೆ ಮನೆಗೆ ತೆರಳಿ ಪತ್ರಿಕಾ ವಿತರಣೆ ಮಾಡುತ್ತಿರುವ ಪತ್ರಿಕಾ ವಿತರಕ ಸೇನಾನಿಗಳಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ಮಾತನಾಡಿದ ಮಾಜಿ ಮಹಾಪೌರರಾದ ಸಂದೇಶ್ ಸ್ವಾಮಿ ಅವರು, ಒಬ್ಬ ವರದಿಗಾರ ಸುದ್ದಿಯನ್ನು ಬರೆಯಬಹುದು, ಪತ್ರಿಕಾಲಯದಲ್ಲಿ ಅದನ್ನು ಪ್ರಕಟಿಸಬಹುದು. ಆದರೆ ಅದನ್ನು ಜನರಿಗೆ ತಲುಪಿಸುವ ಕಾರ್ಯ ಪ್ರಮುಖವಾದದ್ದು, ಅದನ್ನು ಮಾಡುವವರು ಇಲ್ಲದಿದ್ದರೆ ಇಡೀ ದಿನ ಮಾಡಿದ ಕೆಲಸ ವ್ಯರ್ಥವಾಗುತ್ತದೆ ಎಂದು ತಿಳಿಸಿದರು.

ಜನಸಾಮಾನ್ಯರಿಗೆ ಬೆಳಗ್ಗೆ ಏಳುತ್ತಲೇ ಪತ್ರಿಕೆ ಓದುವ ಹವ್ಯಾಸ ಇರುವುದು ಸಹಜ. ಅದನ್ನು ತಲುಪಿಸುವಲ್ಲಿ ಪತ್ರಿಕಾ ವಿತರಕರ ಪಾತ್ರ ಬಹುಮುಖ್ಯವಾಗಿದೆ. ಬೇಸಿಗೆ, ಚಳಿ, ಮಳೆ ಎನ್ನದೆ ಪ್ರತಿನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ಮನೆಮನೆಗೆ ತಲುಪಿಸವ ಕಾರ್ಯ ಮಾಡುತ್ತಾರೆ. ಜಗತ್ತು ಎಷ್ಟೇ ಆಧುನಿಕತೆಯಲ್ಲಿ ಬೆಳೆದರೂ ಪತ್ರಿಕೆಗಳನ್ನು ಓದುವುದನ್ನು ಮಾತ್ರ ಯಾರೂ ಬಿಡುವುದಿಲ್ಲ.

ಈ ನಿಟ್ಟಿನಲ್ಲಿ ಪತ್ರಿಕಾ ವಿತರಕರನ್ನು ಸಮಾಜದಲ್ಲಿ ಗೌರವದಿಂದ ಕಾಣಬೇಕು. ಸಾಮಾನ್ಯವಾಗಿ ಜನರು ಪತ್ರಿಕಾ ವಿತರಕರನ್ನು ಕೀಳು ಮಟ್ಟದಲ್ಲಿ ನೋಡುತ್ತಾರೆ. ಅದು ಬದಲಾವಣೆಯಾಗಬೇಕು. ಯಾವುದೇ ಕ್ಷೇತ್ರದಲ್ಲಾದರೂ ತಮ್ಮ ಕೆಲಸಕ್ಕೆ ತಕ್ಕಂತೆ ಗೌರವ ಇರುತ್ತದೆ. ಅದೇ ರೀತಿ ಪತ್ರಿಕಾ ವಿತರಕರನ್ನೂ ಕೂಡ ಗೌರವಿಸುವಂತಾಗಬೇಕು ಎಂದು ತಿಳಿಸಿದರು.

ನಂತರ ಮಾತನಾಡಿದ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಸಿ ನಾರಾಯಣಗೌಡ ಮಾಜಿ ಪ್ರಧಾನಿ ಅಬ್ದುಲ್ ಕಲಾಮ್ ರವರು ಸಹ ಪತ್ರಿಕಾ ವಿತರಕರಾಗಿ ಮೇಲ್ಮಟ್ಟಕ್ಕೆ ಬಂದವರು. ಪತ್ರಿಕಾ ವಿತರಕರನ್ನು ಕೀಳಾಗಿ ಕಾಣಬಾರದು, ಮಳೆಗಾಲದಲ್ಲಿ ತೊಂದರೆ ವಿತರಕರು ಮಳೆಗಾಲದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಾರೆ. ವಾಹನಗಳಿಂದ ಪತ್ರಿಕೆಗಳ ಬಂಡಲ್ ಗಳನ್ನು ಇಳಿಸಿಕೊಳ್ಳಲು, ವಿತರಕರಿಗೆ ಹಾಗೂ ಪತ್ರಿಕೆ ಹಾಕುವ ಹುಡುಗರಿಗೆ ಹಂಚಲು ಕಷ್ಟವಾಗುತ್ತದೆ. ಸ್ವಲ್ಪ ಮಳೆ ಹನಿಗಳು ಬಿದ್ದರೂ ಪತ್ರಿಕೆ ಹಾಳಾಗುತ್ತದೆ, ಆದ್ದರಿಂದ ಪತ್ರಿಕೆಗಳ ಹಂಚಿಕೆಗೆ ಮೈಸೂರು ನಗರ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಜಾಗ ಮೈಸೂರು ನಗರ ಪಾಲಿಕೆ ಶಾಶ್ವತವಾಗಿ ಜಾಗ ಕಲ್ಪಿಸಿ ಕೊಡಬೇಕು ಎಂದು ಹೇಳಿದರು.

ಸುಜೀವ್ ಫೌಂಡೇಶನ್ ಅಧ್ಯಕ್ಷರಾದ ರಾಜರಾಂ ಮಾತನಾಡಿ ಮುಂದಿನ ದಿನಗಳಲ್ಲಿ ಮೈಸೂರು ನಗರದ ಪತ್ರಿಕಾ ವಿತರಕರನ್ನು ಪ್ರತಿಯೊಬ್ಬರಿಗೂ ಗುರುತಿಸುವ ಕೆಲಸ ಆಗಬೇಕು ಸರ್ಕಾರ ಅವರಿಗೊಂದು ಗುರುತಿನ ಚೀಟಿ ನೀಡಬೇಕು ಹಾಗೆಯೇ ನಮ್ಮ ಸಂಸ್ಥೆ ವತಿಯಿಂದ ಮುಂದಿನ ದಿನಗಳಲ್ಲಿ ಪತ್ರಿಕಾ ವಿತರಕರಿಗೆ ಜೀವವಿಮೆ ಹಾಗೂ ಪತ್ರಿಕೆ ಹಾಕುವ ಬ್ಯಾಗ್ ಮತ್ತು ಅವರ ರಕ್ಷಣೆಗೆ ಗುಣಮಟ್ಟದ ಜರ್ಕಿನ್ ನೀಡಲಾಗುವುದು ಎಂದು ಹೇಳಿದರು

ಇಳೆಯಾಳ್ವಾರ್ ಸ್ವಾಮೀಜಿ, ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ್ ಗೌಡ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಮೈಸೂರು ಜಿಲ್ಲಾ ಪತ್ರಿಕಾ ಪ್ರತಿನಿಧಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಮೈಸೂರು ಜಿಲ್ಲಾ ಒಕ್ಕಲಿಗರ ಸಂಘದ ನಿರ್ದೇಶಕರಾದ ರವಿ ಎ, ಮುಡಾ ಸದಸ್ಯರಾದ ನವೀನ್ ಕುಮಾರ್, ಕೆ ಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಸುರೇಶ್ ಗೋಲ್ಡ್ ಚರಣ್ ರಾಜ್, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ವಿನಯ್ ಕಣಗಾಲ್ ,ಸುಚೀಂದ್ರ, ದುರ್ಗಾಪ್ರಸಾದ್ ಇನ್ನಿತರರು ಇದ್ದರು.

ಕಳೆದ 40 ವರ್ಷಗಳಿಂದ ಪತ್ರಿಕೆಗಳನ್ನು ವಿತರಣೆ ಮಾಡುತ್ತಿರುವ ಓಂ ದೇವ್, ಹರೀಶ್, ಜವರಪ್ಪ, ಮಂಜುನಾಥ್ , ಚಂದ್ರಶೇಖರ್ ಜೈದೇವ್ , ಪಾರ್ಶ್ವನಾಥ, ಅವರನ್ನು ಇದೇ ವೇಳೆ ಸನ್ಮಾನಿಸಲಾಯಿತು.

Ashika S

Recent Posts

ಹುಬ್ಬಳ್ಳಿಯ ಟ್ರಾಫಿಕ್ ಪೊಲೀಸರ ಕಾರ್ಯಕ್ಕೆ ಒಂದು ಹ್ಯಾಟ್ಸ್ ಅಪ್

ಹುಬ್ಬಳ್ಳಿಯ ಕೇಶ್ವಾಪುರದ ಸರ್ವೋದಯ ಸರ್ಕಲ್ ನಿಂದ ದೇಸಾಯಿ ಬ್ರಿಡ್ಜ್ ವರೆಗೂ ಅಪರಿಚಿತ ವಾಹನವೊಂದರ ಇಂಜಿನ್ ಆಯಿಲ್‌ ಲೀಕ್ ಆಗಿ ರಸ್ತೆಯ…

6 mins ago

ಮಲ್ಪೆಯಲ್ಲಿ ಸಮುದ್ರದ ಅಲೆಗಳ ಆರ್ಭಟ ಹೆಚ್ಚಳ : ವಾಟರ್ ಸ್ಪೋರ್ಟ್ಸ್ ಸ್ಥಗಿತ

ಚಂಡಮಾರುತದ ಪ್ರಭಾವದಿಂದ ಸಮುದ್ರ ಪ್ರಕ್ಷುಬ್ಧಗೊಂಡಿದ್ದು, ಮುಂದಿನ ಆದೇಶದವರೆಗೆ ಮಲ್ಪೆಯಲ್ಲಿ ಎಲ್ಲ ರೀತಿಯ ವಾಟರ್ ಸ್ಪೋರ್ಟ್ಸ್ ಸ್ಥಗಿತಗೊಳಿಸಲಾಗಿದೆ.

13 mins ago

ಫೇಲ್​ ಆದ ವಿದ್ಯಾರ್ಥಿಗಳೇ ಟೆನ್ಶನ್​ ಬೇಡ; ಮರು ಪರೀಕ್ಷೆಯ ದಿನಾಂಕ ಪ್ರಕಟ

ಎಸ್‌ ಎಸ್‌ ಎಲ್‌ ಸಿ ಪರೀಕ್ಷೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಪರೀಕ್ಷೆ ಬರೆದ 6,31,204 (73.40)ವಿದ್ಯಾರ್ಥಿಗಳು ತೇರ್ಗಡೆ ಹೊಂದಿದರೆ,…

20 mins ago

ಪರೀಕ್ಷೆ ಫಲಿತಾಂಶಕ್ಕೆ ಹೆದರಿ ನಾಪತ್ತೆಯಾದ ವಿದ್ಯಾರ್ಥಿ : ಪೋಷಕರ ಹುಡುಕಾಟ

ಇಂದು ರಾಜ್ಯದೆಲ್ಲಡೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಬಿಡುಗಡೆಯಾದ ಹಿನ್ನಲೆ ವಿದ್ಯಾರ್ಥಿನೋರ್ವ ಪರೀಕ್ಷೆ ಫಲಿತಾಂಶಕ್ಕೆ ಭಯಪಟ್ಟು ನಾಪತ್ತೆಯಾಗಿದ್ದಾನೆ. ಘಟನೆ ಬೆಂ.ಗ್ರಾಮಾಂತರ ಜಿಲ್ಲೆ…

33 mins ago

ಮಧ್ಯರಾತ್ರಿ ಸ್ನೇಹಿತರ ಎಣ್ಣೆ ಪಾರ್ಟಿ : ಬಾಟಲಿಯಿಂದ ಹೊಡೆದು ಓರ್ವನ ಕೊಲೆ

ಬಾಟಲಿಯಿಂದ ಹೊಡೆದು ಯುವಕನೋರ್ವನ ಕೊಲೆ ಮಾಡಿರುವ ಘಟನೆ ಮುಂಡರಗಿ ತಾಲೂಕಿನ ಕೆಎಚ್​ಬಿ ಹೊಸ ಕಾಲೊನಿಯಲ್ಲಿ ನಡೆದಿದೆ.ಕೊಪ್ಪಳದ ಹೈದರ್ ತಾಂಡಾದ ನಿವಾಸಿ…

50 mins ago

ಪಾಕ್ ಬಂದರಿನಲ್ಲಿ ಉಗ್ರರ ದಾಳಿ; 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ

ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗ್ವಾದರ್​ನಲ್ಲಿ ಉಗ್ರ ದಾಳಿ ನಡೆದಿದ್ದು 7 ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

1 hour ago