Categories: ಮೈಸೂರು

ಮೈಸೂರು:  ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ರಾಜಮಾತೆ ಆಕ್ಷೇಪ

ಮೈಸೂರು: ಪರೀಕ್ಷಾರ್ಥವಾಗಿ ಬೇಬಿ ಬೆಟ್ಟದ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್‌ಗೆ ಭಾರಿ ವಿರೋಧ ವ್ಯಕ್ತವಾಗಿರುವ ಬೆನ್ನೆಲ್ಲೆ ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರೂ ಟ್ರಯಲ್  ಬ್ಲಾಸ್ಟ್‌ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯದ ದೃಷ್ಟಿಯಿಂದ ಅಲ್ಲಿ ಗಣಿಗಾರಿಕೆಗೂ ಅವಕಾಶ ಕೊಡಬಾರದು. ಅಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಕೂಡ ಸರಿಯಲ್ಲ. 1950ರ ಕಾಲದಿಂದ ಬೇಬಿ ಬೆಟ್ಟದ 1,650 ಎಕರೆ ರಾಜವಂಶಸ್ಥರಿಗೆ ಸೇರಿದೆ. ಭಾರತ ಸರ್ಕಾರದ ಜೊತೆ ಮೈಸೂರು ಸಂಸ್ಥಾನ ಮಾಡಿಕೊಂಡ ಆಸ್ತಿ ಹಂಚಿಕೆಯ ಪತ್ರದಲ್ಲಿ ಬೇಬಿ ಬೆಟ್ಟ ಇದೆ. ಇದು  ಖಾಸಗಿ ಆಸ್ತಿ. ಇದರಲ್ಲಿ ಟ್ರಯಲ್ ಬ್ಲಾಸ್ಟ್ ಮಾಡೋದು ಸರಿಯಲ್ಲ ಎಂದರು.

ಟ್ರಯಲ್ ಬ್ಲಾಸ್ಟ್‌ಗೆ ತಜ್ಞರು ಸರಕಾರಿ ಜಾಗ ಗುರುತಿಸಿಕೊಳ್ಳಬೇಕು. ಬೇಬಿ ಬೆಟ್ಟದ ಜಾಗವನ್ನು ಉದ್ದೇಶ ಪೂರ್ವಕವಾಗಿ ಬಿ ಖರಾಬ್ ಪಟ್ಟಿಗೆ ಸೇರಿಸಲಾಗಿತ್ತು. ಹೀಗಾಗಿ ನಾನು ಆ ಜಾಗದ ವಿಚಾರದಲ್ಲಿ ಕೋರ್ಟ್‌ಗೆ ಹೋಗಿರಲಿಲ್ಲ. ಮೈಸೂರಿನ ಕುರುಬಾರಹಳ್ಳಿ ಬಿ ಖರಾಬ್ ಜಾಗದ ವಿವಾದದಲ್ಲಿ ಸುಪ್ರೀಂಕೋರ್ಟ್‌ನಲ್ಲಿ ಅರಮನೆಗೆ ಜಯವಾಗಿದೆ. ಆ ತೀರ್ಪು ಈ ಬೆಟ್ಟದ ಜಾಗಕ್ಕೂ  ಅನ್ವಯವಾಗಲಿದ್ದು, ಆ ಜಾಗ ನಮ್ಮ ವ್ಯಾಪ್ತಿಗೆ ಬಂದರೆ ನಾನು ಅಲ್ಲಿ ಗಣಿಗಾರಿಕೆಗೆ ಅವಕಾಶ ಮಾಡಿಕೊಡಲ್ಲ ಎಂದರು.

ಸರ್ಕಾರಗಳು ರಾಜ ಮನೆತನಗಳನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ. ನಾವೇನು ಯಾರೋದು ಆಸ್ತಿ ಕಬಳಿಸಲು ಹೊರಟ್ಟಿಲ್ಲವೇ ಎಂಬ ರೀತಿ ಯೋಚಿಸುತ್ತಿವೆ. ಇದು ನಮಗೆ ಸರ್ಕಾರ ಕೊಡುತ್ತಿರುವ ಕಿರುಕುಳವಾಗಿದೆ. ದೇಶದ ಬೇರೆ ಯಾವ ರಾಜಮನೆತನಗಳಿಗೂ ಆಸ್ತಿಯ ವಿಚಾರದಲ್ಲಿ ಅಲ್ಲಿನ ಸರ್ಕಾರಗಳು ಇಷ್ಟು ತೊಂದರೆ ಕೊಟ್ಟಿಲ್ಲ ಎಂದು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

10 ರೂಪಾಯಿ ಬೆಲೆ ಬಾಳುವುದನ್ನು 10 ಪೈಸೆಗೆ ತೆಗೆದು ಕೊಳ್ಳುವ ಮನಸ್ಥಿತಿ ಸರ್ಕಾರ ಪ್ರದರ್ಶಿಸುತ್ತಿದೆ. ಸರ್ಕಾರಕ್ಕೆ ನಾನು ಧನ್ಯವಾದ ಹೇಳ್ತಿದ್ದಿನಿ. ಬೇಬಿ ಬೆಟ್ಟದ ವಿಚಾರದಲ್ಲಿ ಈಗ ಕಾನೂನು  ತಜ್ಞರ ಜೊತೆ ಚರ್ಚಿಸಿ ಕಾನೂನು ಹೋರಾಟಕ್ಕೆ ಮುಂದಾಗುತ್ತೇನೆ ಎಂದು ತಿಳಿಸಿದರು.

Ashika S

Recent Posts

ಜೈಪುರದ ನಾಲ್ಕು ಶಾಲೆಗಳಿಗೆ ಬಾಂಬ್​ ಬೆದರಿಕೆ

ಜೈಪುರದ ಪೊಲೀಸರು ಸೋಮವಾರ ಕನಿಷ್ಠ ನಾಲ್ಕು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಿದ್ದಾರೆ ಎಂದು ವರದಿ ಮಾಡಿದ್ದಾರೆ. ಸಂತ್ರಸ್ತ…

7 mins ago

ನಾಳೆ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ : ಇಂದು ರೋಡ್‌ ಶೋ

ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಸ್ಪರ್ಧಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೆ ಒಂದು…

20 mins ago

ಇಂದು ಎಚ್‌ ಡಿ ರೇವಣ್ಣ ಬೇಲ್​ ಅರ್ಜಿ ವಿಚಾರಣೆ

ಕಿಡ್ನಾಪ್‌ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲುಪಾಲಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ಇಂದು ಮತ್ತೆ ಜಾಮೀನು ಅರ್ಜಿ ವಿಚಾರಣೆ…

1 hour ago

ಚುನಾವಣೆಗೂ ಮುನ್ನ ಸ್ಫೋಟ : ಮೂವರು ಅಪ್ರಾಪ್ತರು ಸೇರಿ ನಾಲ್ವರು ಸಾವು!

ಚುನಾವಣೆಗೂ ಮುನ್ನ ದಿನವೇ ಜಾರ್ಖಂಡ್‌ನ ಪಲಮುವಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಕನಿಷ್ಠ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು…

2 hours ago

ಚುನಾವಣೆ ಹೊತ್ತಲ್ಲೆ ಶಂಕಿತ ಪಾಕ್ ಡ್ರೋನ್ ಹಾರಾಟ : ಸೇನೆಯಿಂದ ಗುಂಡಿನ ದಾಳಿ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಎಲ್‌ಒಸಿ ಬಳಿ ಶನಿವಾರ ತಡರಾತ್ರಿ ಶಂಕಿತ ಪಾಕಿಸ್ತಾನಿ ಡ್ರೋನ್ ಮೇಲೆ ಭಾರತೀಯ ಸೇನಾ…

2 hours ago

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ನಿರೀಕ್ಷೆ: ಯೆಲ್ಲೋ ಅಲರ್ಟ್

ಇಂದು ರಾಜ್ಯದ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ದಕ್ಷಿಣ ಕನ್ನಡ, ಉಡುಪಿ,…

2 hours ago