News Karnataka Kannada
Sunday, April 28 2024
ಮೈಸೂರು

ಮೈಸೂರು: ಶಾಲಾ ಮಕ್ಕಳ ಸುರಕ್ಷತೆಗೆ ಆದ್ಯತೆ – ಎಸ್ ಪಿ ಸೀಮಾ ಲಾಟ್ಕರ್

Safety of school children is a top priority: SP Seema Latkar
Photo Credit : By Author

ಮೈಸೂರು: ರಸ್ತೆಗಳ ಅಂಚಿನಲ್ಲಿರುವ ಶಾಲಾ ಹಾಗೂ ಕಾಲೇಜುಗಳ ಮಕ್ಕಳು ಒಟ್ಟಿಗೆ ಶಾಲಾ  ಕಾಲೇಜುಗಳಿಂದ ಹೊರ ಬರುವುದರಿಂದ ಮಕ್ಕಳಿಗೆ ತೊಂದರೆಯಾಗದಂತೆ ಅವರ ಸುರಕ್ಷತೆಗೆ ಆದ್ಯತೆ ನೀಡಬೇಕೆಂದು ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ತಿಳಿಸಿದರು.

ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ  ಅವರು, ರಸ್ತೆಗಳಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಬೇಕು. ರಸ್ತೆ ಬದಿಯಲ್ಲಿ ಇರುವ ಶಾಲೆಗಳ ಬಳಿ ಹೆಚ್ಚಿನ ನಿಗಾ ವಹಿಸಬೇಕು. ವಾಹನಗಳು ವೇಗವಾಗಿ ಬರುವುದರಿಂದ ಅಪಘಾತವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಅಧಿಕಾರಿಗಳು ಹೆಚ್ಚಿನ ಗಮನ ಕೊಡಬೇಕು. ನಿಮಿಷಗಳ ಅಂತರದಲ್ಲಿ ತರಗತಿವಾರು ಮಕ್ಕಳನ್ನು ಶಾಲೆಯಿಂದ ಬಿಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಮೀಣ ಭಾಗದಲ್ಲಿ 29 ಬ್ಲಾಕ್‌ಸ್ಪಾಟ್‌ಗಳನ್ನು ಹಾಗೂ ನಗರದಲ್ಲಿ 12  ಬ್ಲಾಕ್‌ಸ್ಪಾಟ್ ಗುರುತಿಸಲಾಗಿದೆ. ಮೂರಕ್ಕಿಂತ ಹೆಚ್ಚು ಅಪಘಾತಗಳಾಗುವ ಸ್ಥಳವನ್ನು ಬ್ಲಾಕ್‌ಸ್ಪಾಟ್  ಎಂದು ಗುರುತಿಸಲಾಗಿದ್ದು, ಈ ಸ್ಥಳಗಳಲ್ಲಿ ಉಂಟಾಗುವ ಅಪಘಾತಗಳನ್ನು ನಿಯಂತ್ರಿಸಲು ಸೂಕ್ತ ರಸ್ತೆ ಸುರಕ್ಷತಾ ವ್ಯವಸ್ಥೆ ಮಾಡಬೇಕೆಂದು  ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು.

ಮಾರಣಾಂತಿಕ, ಮಾರಣಾಂತಿಕವಲ್ಲದ ಹಾಗೂ ಸಣ್ಣ ಅಪಘಾತಗಳ ಬಗ್ಗೆಯೂ ಸರಿಯಾದ ಮಾಹಿತಿ ನೀಡಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ  ನಿಗಮದ ಬಸ್ ಚಾಲಕರು ಅತಿ ವೇಗವಾಗಿ ವಾಹನ ಚಲಾಯಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇದರಿಂದ ಬಹಳ ದೊಡ್ಡ ಮಟ್ಟದ ಅಪಘಾತಗಳಾಗುವ ಸಾಧ್ಯತೆಗಳಿವೆ. ಕೂಡಲೇ ಇದಕ್ಕೆ ಸಂಬಂಧಿಸಿದಂತೆ ಚಾಲಕರುಗಳಿಗೆ ನೀವು ಸೂಚನೆಗಳನ್ನು ನೀಡಿ ಅಥವಾ ಕ್ರಮ ಕೈಗೊಳ್ಳಿ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ರಾಜು, ಡಿಡಿಪಿಐ ರಾಮಚಂದ್ರರಾಜೇ  ಅರಸ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪ್ರಾದೇಶಿಕ ಸಾರಿಗೆ ಅಧಿಕಾರಿ  ಹೇಮಂತ್ ಕುಮಾರ್, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ, ಪದವಿ  ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗಮಲ್ಲೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ  ಇಲಾಖೆಯ ಸಹಾಯಕ ನಿರ್ದೇಶಕ ಹರೀಶ್.ಟಿ.ಕೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು  ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು