News Karnataka Kannada
Monday, April 29 2024
ಮೈಸೂರು

ಮೈಸೂರು: ವಿ.ಸೋಮಣ್ಣ ಹರಕೆಯ ಕುರಿ ಎಂದ ಸಿದ್ದರಾಮಯ್ಯ

NEP to be scrapped from next year: Siddaramaiah
Photo Credit : By Author

ಮೈಸೂರು: ಸೋಮಣ್ಣನ ಅವರನ್ನು ವರುಣದಲ್ಲಿ ನಿಲ್ಲಿಸಿ ಹರಕೆ ಕುರಿ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಆರೋಪಗಳಿಲ್ಲದಿದ್ದರೂ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ರಾಮದಾಸ್ ಸೇರಿದಂತೆ ಹಲವು ಬಿಜೆಪಿ ನಾಯಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಬಿ.ಎಲ್.ಸಂತೋಷ್ ಅವರಿಂದ ಇವರೆಲ್ಲರಿಗೂ ಟಿಕೆಟ್ ತಪ್ಪಿದೆ. ಈಗಾಗಲೇ ಹಲವಾರು ಮಂದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಜತೆಗೆ ವರುಣಾದಲ್ಲಿ ವಿ.ಸೋಮಣ್ಣ ಅವರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಹೇಳಿದರು.

ಶಾಸಕ ರಾಮದಾಸ್ ಸೇರಿದಂತೆ ಬೇರೆ ಯಾರೇ ಆದರೂ ನಮ್ಮ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಪರೋಕ್ಷವಾಗಿ ರಾಮದಾಸ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿದರು. ನನ್ನ ಬಗ್ಗೆ ವರುಣಾ ಜನರಿಗೆ ಅಪಾರ ಪ್ರೀತಿಯಿದೆ. ನನ್ನ ಮತ್ತು ವರುಣಾ ಸಂಬಂಧವನ್ನು ಕಿತ್ತುಹಾಕಲು ಯಾರಿಂದಲೂ ಸಾಧವಿಲ್ಲ. ಯಾರೇ ಬರಲಿ, ಯಾರೇ ಅಭರ್ಥಿಗಳನ್ನು ಬದಲಾಯಿಸಲಿ ಏನೇ ಆದರೂ ನನ್ನ ಗೆಲುವು ನಿಶ್ಚಿತ. ವರುಣದಲ್ಲಿ ಸೋಮಣ್ಣ ಸ್ಪರ್ಧೆಗೆ ಬಿ.ಎಲ್.ಸಂತೋಷ ಒತ್ತಡವೇ ಕಾರಣ ಎಂದರು.

ಸೋಮಣ್ಣನಿಗೆ ವರುಣ ಕ್ಷೇತ್ರದ ಬಗ್ಗೆ ಏನು ಗೊತ್ತಿದೆ. ರಾಮನಗರದಲ್ಲಿ ಹುಟ್ಟಿ, ಬೆಂಗಳೂರಿನಲ್ಲಿ ರಾಜಕೀಯ ಮಾಡಿದವರು ಸೋಮಣ್ಣ. ಉಸ್ತುವಾರಿ ಸಚಿವನಾಗಿದ್ದಾಗ ವರುಣಗೆ ಒಂದೇ ಒಂದು ಮನೆ ಕೊಟ್ಟಿದ್ದರಾ? ಈಗ ಬಂದು ಅಭಿವೃದ್ಧಿ ಬಗ್ಗೆ ಮಾತನಾಡುತ್ತಾರೆ. ನನ್ನ ವರುಣ ಸಂಬಂಧ ಕಿತ್ತು ಹಾಕಲು ಯಾರಿಂದಲೂ ಸಾಧವಿಲ್ಲ ಎಂದರು.

ನನ್ನ ಮೊಮ್ಮಗ ಧವನ್ ರಾಕೇಶ್‌ಗೂ ಅವರಪ್ಪನಂತೆ ರಾಜಕೀಯದ ಬಗ್ಗೆ ಬಹಳ ಆಸಕ್ತಿ ಇದೆ. ಹಾಗಾಗಿ ನಾಮಪತ್ರ ಸಲ್ಲಿಕೆ, ಪ್ರಚಾರ ವೈಖರಿ ಎಲ್ಲವನ್ನೂ ತಿಳಿದುಕೊಳ್ಳಲು ಸ್ವ ಆಸಕ್ತಿಯಿಂದ ನನ್ನ ಜೊತೆ ಬಂದಿದ್ದಾನೆ .ಅವನಿಗೆ ಇನ್ನೂ 17 ವರ್ಷ. ರಾಜಕೀಯಕ್ಕೆ ಬರಲು ಬಹಳ ಸಮಯವಿದೆ. ಈಗ ಆಸಕ್ತಿಯಿಂದ ಎಲ್ಲವನ್ನೂ ನೋಡಿಕೊಳ್ಳಲು ಬರುತ್ತಿದ್ದಾನೆ. ಮೊಮ್ಮಗನಿಗೆ ರಾಜಕೀಯ ಆಸಕ್ತಿ ಇರುವುದು ತಾತನಾಗಿ ನನಗೆ ಖುಷಿ ಇದೆ. ಪ್ರಚಾರಕ್ಕೆ ಅವನು ಇಷ್ಟ ಪಟ್ಟು ಬಂದರೆ ಬರಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು