News Karnataka Kannada
Wednesday, April 17 2024
Cricket
ಮೈಸೂರು

ಮೈಸೂರಿನಲ್ಲಿ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ನಡೆಸಲು ಕ್ರಮ

Puc Exam
Photo Credit :

ಮೈಸೂರು: ಜಿಲ್ಲೆಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಸುಸೂತ್ರವಾಗಿ ನಡೆಯಲು ಇಲಾಖೆ ವತಿಯಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಡಿ.ಕೆ ಶ್ರೀನಿವಾಸಮೂರ್ತಿ ಅವರು ಹೇಳಿದರು.

ಪಿರಿಯಾಪಟ್ಟಣದ ಗೋಣಿಕೊಪ್ಪ ರಸ್ತೆಯ ಡಿಪಿಬಿಎಸ್ ಸರ್ಕಾರಿ ಪಿಯು ಕಾಲೇಜಿನಲ್ಲಿ ತಾಲ್ಲೂಕಿನ ವಿವಿಧೆಡೆಯ ಸರ್ಕಾರಿ ಮತ್ತು ಖಾಸಗಿ ಪಿಯು ಕಾಲೇಜುಗಳ ಪ್ರಾಂಶುಪಾಲರ ಪರೀಕ್ಷಾ ಪೂರ್ವಭಾವಿ ಸಭೆ ನಡೆಸಿ ಅವರು ಮಾತನಾಡಿ,ಪಿರಿಯಾಪಟ್ಟಣ ಸೇರಿದಂತೆ ಮೈಸೂರು ನಗರ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷೆ ಅಂಗವಾಗಿ ನೋಡಲ್ ಸೆಂಟರ್ ಗಳನ್ನು ತೆರೆದು ಪ್ರತಿ ತಾಲೂಕಿಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ತಾಲ್ಲೂಕಿನ ಎಲ್ಲಾ ಪರೀಕ್ಷಾ ಕೇಂದ್ರಗಳ ಉಸ್ತುವಾರಿಯನ್ನು ಅವರು ನಿರ್ವಹಿಸಲಿದ್ದಾರೆ.

ಪಿರಿಯಾಪಟ್ಟಣದಲ್ಲಿ ಡಿಪಿಬಿಎಸ್ ಸರ್ಕಾರಿ ಪಿಯು ಕಾಲೇಜಿನಲ್ಲಿ ನೋಡಲ್ ಸೆಂಟರ್ ತೆರೆದು ಪ್ರಾಂಶುಪಾಲ ಶಿವಶಂಕರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದ್ದು ತಾಲ್ಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ, ಪರೀಕ್ಷೆಗಳು ನಿಷ್ಪಕ್ಷಪಾತವಾಗಿ ಸುಗಮವಾಗಿ ನಡೆಯಲು ಕೊಠಡಿ ಮೇಲ್ವಿಚಾರಕರಿಗೆ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಆಯಾ ಪರೀಕ್ಷಾ ಕೇಂದ್ರಗಳಲ್ಲಿ ಪೂರ್ಣ ಪ್ರಮಾಣದ ತರಬೇತಿ ನೀಡಲಿದ್ದಾರೆ, ಪಿರಿಯಾಪಟ್ಟಣ ನಗರದ 2 ಸರ್ಕಾರಿ ಕಾಲೇಜು ಹಾಗೂ ಕಿತ್ತೂರು ಮತ್ತು ಬೆಟ್ಟದಪುರ ಸರ್ಕಾರಿ ಕಾಲೇಜು ಸೇರಿದಂತೆ ತಾಲ್ಲೂಕಿನಲ್ಲಿ 4 ಪರೀಕ್ಷಾ ಕೇಂದ್ರಗಳನ್ನು ತೆರೆದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಏ.22 ರಿಂದ ಮೇ.18 ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಯಲ್ಲಿ ತಾಲ್ಲೂಕಿನಿಂದ ಒಟ್ಟು 2255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಪಡದೆ ಆತ್ಮವಿಶ್ವಾಸದಿಂದ ಎದುರಿಸಿ ಉತ್ತಮ ಫಲಿತಾಂಶ ಪಡೆಯುವಂತೆ ಕೋರಿದರು.

ಈ ಸಂದರ್ಭ ಪಿರಿಯಾಪಟ್ಟಣ ತಾಲ್ಲೂಕು ನೋಡಲ್ ಅಧಿಕಾರಿ ಡಿಪಿಬಿಎಸ್ ಕಾಲೇಜು ಪ್ರಾಂಶುಪಾಲ ಶಿವಶಂಕರ್, ಉಪನ್ಯಾಸಕರಾದ ಬಿ.ಎಂ ಶಿವಸ್ವಾಮಿ  ಹಾಗೂ ತಾಲ್ಲೂಕಿನ ವಿವಿಧೆಡೆಯ ಪ್ರಾಂಶುಪಾಲರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು