News Karnataka Kannada
Sunday, April 21 2024
Cricket
ಮೈಸೂರು

ಮೈಸೂರು ವಿಮಾನ ನಿಲ್ದಾಣಕ್ಕೆ 319 ಕೋಟಿ ಬಿಡುಗಡೆ

Mysore Airport
Photo Credit :

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗಾಗಿ ಕರ್ನಾಟಕ ಸರ್ಕಾರವು 319 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿರುವುದಾಗಿ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಈ ಹಿಂದೆ ಭೇಟಿಯಾಗಿ ಮನವಿ ಸಲ್ಲಿಸಿದ್ದರು.  ಹಣ ಬಿಡುಗಡೆ ಮಾಡಿರುವುದಕ್ಕೆ ಸಿಎಂ ಬಸವರಾಜ  ಬೊಮ್ಮಾಯಿ, ಸಚಿವರುಗಳಾದ ವಿ.ಸೋಮಣ್ಣ, ಎಸ್.ಟಿ.ಸೋಮಶೇಖರ್ ಅವರನ್ನು ಸಂಸದ ಪ್ರತಾಪ್ ಸಿಂಹ ಶ್ಲಾಘಿಸಿದ್ದಾರೆ.

1740 ಮೀ ಇರುವ ರನ್ ವೇಯನ್ನು 2400 ಮೀ.ಗೆ ವಿಸ್ತರಣೆ ಮಾಡಲಾಗುತ್ತದೆ. ಇದೀಗ ರನ್ ವೇ ವಿಸ್ತರಣೆಗೆ ಅಗತ್ಯವಿರುವ  ಭೂಮಿಯನ್ನು ಉಚಿತವಾಗಿ ಹಸ್ತಾಂತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಅವಶ್ಯವಿರುವ ಭೂಮಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಸ್ವಾಧೀನ ಪಡಿಸಿಕೊಂಡು ನೀಡಲಾಗುತ್ತದೆ. ಬಹಳ ವರ್ಷಗಳಿಂದ ರನ್ ವೇ ವಿಸ್ತರಣೆ ಬೇಡಿಕೆ ಇತ್ತು.

ಇದಕ್ಕಾಗಿ ಕೆಎಸ್‌ಐಐಡಿಸಿ ನೋಡಲ್ ಅಧಿಕಾರಿ ನೇಮಿಸಲಾಗಿದೆ. ಮೊದಲ ಹಂತದಲ್ಲಿ ರನ್ ವೇ ವಿಸ್ತರಣೆಗೆ ೨೪೦ ಎಕರೆ  ಜಮೀನು ಅಗತ್ಯವಿದೆ ಎಂದು ಬೇಡಿಕೆ ಸಲ್ಲಿಸಲಾಗಿತ್ತು. ಇದರಲ್ಲಿ 22.9 ಎಕರೆ ಜಮೀನು ಈಗಾಗಲೇ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ಸ್ವಾಧೀನದಲ್ಲಿದೆ.

11.19 ಎಕರೆ ಜಮೀನು ಎಣ್ಣೆಹೊಳೆ ಕಾಲುವೆಯಾಗಿದ್ದು, ಸರ್ಕಾರದ ಜಮೀನು. ಭೂ ಮಾಲೀಕರಿಂದ ತೆಗೆದುಕೊಂಡಿರುವ 206 ಎಕರೆ ಪೈಕಿ 160 ಎಕರೆಗೆ ಸರ್ಕಾರ ಇದೀಗ ಅಂತಿಮ ಅಧಿಸೂಚನೆ ಹೊರಡಿಸಿದೆ. ಉಳಿದಂತೆ 46.22 ಎಕರೆ ಅಧಿಸೂಚನೆ ಬಾಕಿ ಇದೆ. 2022-23ನೇ ಸಾಲಿನ ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ಏರ್ ಪೋರ್ಟ್ ಅಭಿವೃದ್ಧಿಗೆ ಕ್ರಮಕೈಗೊಳ್ಳುವ ಭರವಸೆಯನ್ನು ಸಿಎಂ ಘೋಷಿಸಿದ್ದರು.

ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಈಗಾಗಲೇ ಕೇಂದ್ರ ಸರ್ಕಾರ 700 ಕೋಟಿ ಮೀಸಲಿಟ್ಟಿದೆ. ಇನ್ನೂ ಹೆಚ್ಚಿನ ಅನುದಾನ ಅಗತ್ಯವಿದೆ. ಅಂಡರ್ ಪಾಸ್ ನಿರ್ಮಾಣಕ್ಕೆ ಹೆಚ್ಚುವರಿಯಾಗಿ 400 ಕೋಟಿ ಬೇಕಾಗುತ್ತದೆ. ಹೀಗಾಗಿ ಅಂಡರ್ ಪಾಸ್ ನಿರ್ಮಾಣದ ಬದಲು ರಾಷ್ಟ್ರೀಯ ಹೆದ್ದಾರಿಯನ್ನೇ ಡಿವಿಯೇಷನ್ ಮಾಡುವ ಯೋಜನೆ ಇದೆ. ಸದ್ಯದಲ್ಲೇ ರನ್ ವೇ ವಿಸ್ತರಣೆ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಪ್ರತಾಪಸಿಂಹ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು