News Karnataka Kannada
Friday, April 12 2024
Cricket
ಮೈಸೂರು

ಮೈಸೂರು: ಹೆತ್ತ ಮಗು‌ವನ್ನೇ ಮಾರಾಟ ಮಾಡಿದ ತಾಯಿ!

Uttara Kannada: 2-year-old boy dies after consuming mosquito repellent liquid
Photo Credit :

ಮೈಸೂರು : ಬಡತನದಿಂದ ಬೇಸತ್ತು, ಹೆತ್ತ ತಾಯಿಯೇ ತನ್ನ ಮಗುವನ್ನು ಮಾರಾಟ ಮಾಡಿರುವ ಮನಕಲಕುವ ಘಟನೆ ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ವಿಶ್ವನಾಥ ಕಾಲೋನಿಯಲ್ಲಿ ನಡೆದಿದೆ.

ಎಲ್ಲಮ್ಮ ಎಂಬುವವರು ಮಗು ಮಾರಾಟ ಮಾಡಿದ ಮಹಿಳೆ ಎಂದು ತಿಳಿದುಬಂದಿದೆ. ಆಸ್ಪತ್ರೆಯಲ್ಲಿ ಮಾರಾಟ ಮಾಡಿದರೆ, ಗೊತ್ತಾಗುತ್ತದೆ ಎಂಬ ಕಾರಣಕ್ಕೆ ಮಹಿಳೆ ಬಸ್ ನಿಲ್ದಾಣದಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗುವನ್ನು ಮಾರಾಟ ಮಾಡಿದ್ದಾಳೆ ಎಂದು ತಿಳಿದು ಬಂದಿದೆ.

ಮಗು ಮಾರಾಟ ಮಾಡಿ, ನಂತರ ಮನೆಗೆ ಹೋದಾಗ ಮಗುವಿನ ಬಗ್ಗೆ ಅಕ್ಕಪಕ್ಕದ ಮನೆಯವರು ವಿಚಾರಿಸಿದ್ದಾರೆ. ಇದಕ್ಕೆ ಉತ್ತರಿಸಲು ತಡಬಡಿಸಿದಾಗ, ಸ್ಥಳೀಯರು ಮಕ್ಕಳ ಕಲ್ಯಾಣ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸದ್ಯ ಪೊಲೀಸರು ಎಲ್ಲಮ್ಮ ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು