ಮೈಸೂರು

ಅಂತರಾಷ್ಟ್ರೀಯ ಯೋಗ ದಿನದಂದು ಮೋದಿ ಆಗಮನ: ಮೈಸೂರಿನಲ್ಲಿ ಭರ್ಜರಿ ಸಿದ್ಧತೆ

ಮೈಸೂರು (ಮೇ) : 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಮೈಸೂರು ಸಜ್ಜಾಗುತ್ತಿದೆ. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸುತ್ತಿರುವುದು ಸ್ಥಳೀಯ ನಾಯಕರಲ್ಲಿ ಹುರುಪು ತಂದಿದೆ. ಜಿಲ್ಲಾಡಳಿತ ಕೂಡ ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು ಯೋಗ ನಡೆಯೋದು ಅರಮನೆ ಆವರಣವೋ ಅಥವಾ ರೇಸ್ ಕೋರ್ಸ್ ನಲ್ಲಿಯೋ ಇನ್ನಷ್ಟೇ ತೀರ್ಮಾನ ಆಗಬೇಕಿದೆ.

ಮೈಸೂರಿನಲ್ಲಿ 2017 ರಲ್ಲಿ ನಡೆದಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ 54 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಒಂದೇ ಸ್ಥಳದಲ್ಲಿ ಯೋಗ ಮಾಡುವ ಮೂಲಕ ದಾಖಲೆ ನಿರ್ಮಿಸಿದ್ದರು. ಬಾಬಾ ರಾಮ್ ದೇವ್ ಉತ್ತರ ಪ್ರದೇಶದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸುವ ಮೂಲಕ ಗಿನ್ನಿಸ್ ಪುಟ ಸೇರಿದ್ದರು. ಈ ಬಾರಿ ಯೋಗ ನಗರಿಯೂ ಆಗಿರುವ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಯೋಗ ಪ್ರದರ್ಶನ ಮೆರುಗು ಪಡೆದುಕೊಳ್ಳುತ್ತಿದೆ. ಅದಕ್ಕೆ ಕಾರಣ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೈಸೂರಿನಲ್ಲಿ ಭಾಗವಹಿಸುತ್ತಿರುವುದು.

ಈ ಭಾರಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಸಲು ಮೈಸೂರಿನಲ್ಲಿ ಎರಡು ಸ್ಥಳ ಗುರುತಿಸಲಾಗಿದೆ. ಖುದ್ಧು ಪ್ರಧಾನಮಂತ್ರಿಗಳು ಆಗಮಿಸುತ್ತಿರುವ ಕಾರಣ ಭದ್ರತೆಯ ದೃಷ್ಟಿಯಿಂದ ಯಾವ ಸ್ಥಳದಲ್ಲಿ ಯೋಗವನ್ನ ಮಾಡಬೇಕೆಂಬುದು ಜಿಲ್ಲಾಡಳಿಯ ಚಿಂತನೆ ನಡೆಸುತ್ತಿದೆ. ಅರಮನೆಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ರೆ ಕೇವಲ 15 ಸಾವಿರ ಜನರಿಗೆ ಮಾತ್ರ ಅವಕಾಶ ಮಾಡಿಕೊಡಬಹುದಾಗಿದೆ. ಮೋದಿ ಅವರು ಆಗಮಿಸುತ್ತಿರುವ ಕಾರಣ ದೊಡ್ಡ ಮಟ್ಟದಲ್ಲಿ ಯೋಗ ಪಟುಗಳನ್ನ ಸೇರಿಸಬೇಕೆಂಬುದು ಮೈಸೂರು ಜಿಲ್ಲಾಡಳಿತದ ಪ್ಲಾನ್ ಆಗಿದೆ.

ರೇಸ್ ಕೋರ್ಸ್ ನಲ್ಲಿ ಕಾರ್ಯಕ್ರಮ ನಡೆಸಿದರೆ ಅಂದಾಜು ಒಂದುವರೆ ಲಕ್ಷ ಜನರನ್ನ ಒಂದೇ ಕಡೆ ಸೇರಿಸಿ ಯೋಗ ಮಾಡಿಸುವ ಅವಕಾಶವಿದ್ದು, ಚಾಮುಂಡಿ ಬೆಟ್ಟದ ರಮಣಿಯ ದೃಶ್ಯದ ಸಮೇತವಾಗಿ ತೋರಿಸುವ ಅವಕಾಶ ಸಹ ಇದೆ. ಈಗಾಗಿ ಎಲ್ಲವನ್ನೂ ನೋಡಿಕೊಂಡು ಸ್ಥಳ ನಿಗದಿ ಮಾಡಲಾಗುತ್ತೆ ಎಂದಿದ್ದಾರೆ ಸಂಸದ ಪ್ರತಾಪ್ ಸಿಂಹ. ಇದರ ಜೊತೆಗೆ ಮೈಸೂರಿಗೆ ಕೇಂದ್ರ ಸರ್ಕಾರ ಕೊಟ್ಟಿರುವ ಅಭಿವೃದ್ಧಿಯ ಬಗ್ಗೆ ಜ‌ನರಿಗೆ ತಿಳಿಸುವುದು ಬಿಜೆಪಿ ಪಕ್ಷದ ಪ್ಲಾನ್ ಸಹ ಆಗಿದೆ.

ಒಟ್ಟಾರೆ ಪ್ರಧಾನಿ ನರೇಂದ್ರ ಮೋದಿ ಅವರನ್ನ ಮೈಸೂರಿಗೆ ಕರೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಸದ ಪ್ರತಾಪ್ ಸಹಜವಾಗಿಯೇ ಖುಷಿಯಾಗಿದ್ದಾರೆ. ಸಿಎಂ ಸಭೆಯ ಬಳಿಕೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಂಪ್ಲೀಟ್ ಬ್ಲೂ ಪ್ರಿಂಟ್ ಸಿದ್ಧವಾಗಲಿದೆ.

Gayathri SG

Recent Posts

ಬಸ್ ಹತ್ತುವಾಗ ಆಯಾತಪ್ಪಿ ಬಿದ್ದ ಮಹಿಳೆ : ಚಕ್ರಕ್ಕೆ ಸಿಲುಕಿ ಸಾವು

ಬಸ್ ಹತ್ತುವಾಗ ಚಕ್ರಕ್ಕೆ ಸಿಲುಕಿ ದಾರುಣವಾಗಿ ಸಾವನಪ್ಪಿರುವ ಘಟನೆ . ಶಿವಮೊಗ್ಗದ ಸಾಗರ ತಾಲೂಕಿನ ಅಂಬಾರಗೋಡ್ಲು-ಹೊಳೆಬಾಗಿಲು ಬಳಿ ನಡೆದಿದೆ. ಧಾರವಾಡ…

1 min ago

ಉಳುಮೆ ವೇಳೆ ಟ್ರ‍್ಯಾಕ್ಟರ್ ಗೆ ಸಿಲುಕಿ 8 ವರ್ಷದ ಬಾಲಕ ಸಾವು

ಅಜ್ಜಿ ಮನೆಗೆ ಬಂದಿದ್ದ ಬಾಲಕ ಟ್ರ‍್ಯಾಕ್ಟರ್‌ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ.

7 mins ago

ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ರಸ್ತೆಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್‌

ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ಬೆಂಗಳೂರು ಗ್ರಾಮಾಂತರ…

22 mins ago

ಪಾಪನಕೆರೆ ಒತ್ತುವರಿ ಆರೋಪ : ತಾಲೂಕು ಕಚೇರಿ ಮುಂದೆ ಪ್ರತಿಭಟನೆ

ಭೀಮನಗರದ ರೈತರು ಯುವ ಮುಖಂಡ ಕೃಷ್ಣಕುಮಾರ್ ನೇತೃತ್ವದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

38 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ: ಆರೋಪಿ ಬಿಭವ್‌ ಕುಮಾರ್‌ ವಶಕ್ಕೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ…

1 hour ago

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹುಸಿ ಬಾಂಬ್ ಬೆದರಿಕೆ: ಪ್ರಯಾಣಿಕನ ಮೇಲೆ ಪ್ರಕರಣ ದಾಖಲು

ಬೆಂಗಳೂರಿನಿಂದ ಪುಣೆಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಚೆಕ್-ಇನ್ ಬ್ಯಾಗ್‌ನಲ್ಲಿ ಬಾಂಬ್ ಅಡಗಿಸಿಟ್ಟಿರುವುದಾಗಿ ಸುಳ್ಳು ಬೆದರಿಕೆ ಹಾಕಿ ಭೀತಿ…

1 hour ago