Categories: ಮೈಸೂರು

ಅಂಬೇಡ್ಕರ್ ಗೆ ಅಗೌರವ: ಬಿಜೆಪಿ ಶಾಸಕನಿಂದ ಸಿಎಂಗೆ ಮನವಿ

ಮೈಸೂರು: ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸುವ ಹಾಗೂ ಅಗೌರವ ತೋರುವ ಯಾವುದೇ ಘಟನೆಗಳು  ಮರುಕಳಿಸದಂತೆ ಕ್ರಮಕೈಗೊಳ್ಳುವಂತೆ ನಂಜನಗೂಡು ಶಾಸಕ ಬಿ. ಹರ್ಷವರ್ಧನ್ ಅವರು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕಾಗಿ ಮುಖ್ಯಮಂತ್ರಿಯವರು ಮೈಸೂರಿಗೆ ಬಂದಿದ್ದ ಸಂದರ್ಭದಲ್ಲಿ ಶಾಸಕರು  ಮೈಸೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಪತ್ರವನ್ನೂ ಸಲ್ಲಿಸಿದ್ದು, ಪಠ್ಯಪುಸ್ತಕಗಳನ್ನು ಪರಿಷ್ಕರಿಸುವ ಸಂದರ್ಭದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಸಂವಿಧಾನ ಶಿಲ್ಪಿ ಎಂದು ಉಲ್ಲೇಖಿಸದಿರುವುದು ಸರಿಯಲ್ಲ. ಬಸವಣ್ಣ ಮತ್ತು ಕುವೆಂಪು ಅವರ ಕುರಿತಾದ ಪಾಠಗಳು ಸತ್ಯಕ್ಕೆ ಹತ್ತಿರವಾಗಿರಲಿಲ್ಲ ಎಂಬುದು ಹಲವರ ಅಭಿಪ್ರಾಯ.

ಭವಿಷ್ಯದಲ್ಲಿ ಇಂತಹ ಲೋಪಗಳು ಮರುಕಳಿಸಬಾರದು, ಇದರಿಂದ ಜನರ ಭಾವನೆಗಳಿಗೆ ಧಕ್ಕೆಯಾಗುತ್ತದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

6 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

7 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

7 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

7 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

8 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

8 hours ago