Categories: ಮೈಸೂರು

ಅನುದಾನಕ್ಕಾಗಿ ಯುಜಿಸಿ ಮೊರೆ ಹೋದ ಮೈಸೂರು ವಿಶ್ವವಿದ್ಯಾಲಯ

ಮೈಸೂರು: ಕೊರೋನಾ ಕಾರಣದಿಂದಾಗಿ ಆರ್ಥಿಕ ಪರಿಸ್ಥಿತಿಯ ಸಂಕಷ್ಟಕ್ಕೆ ಸಿಲುಕಿರುವ ಮೈಸೂರು ವಿಶ್ವವಿದ್ಯಾಲಯ ಇದೀಗ ಅನುದಾನಕ್ಕಾಗಿ ಯುಜಿಸಿಯ ಮೊರೆ ಹೋಗಿದೆ. ವಿವಿಯ ಆರ್ಥಿ ಪರಿಸ್ಥಿತಿ ಹದಗೆಟ್ಟಿರುವ ಹಿನ್ನಲೆಯಲ್ಲಿ ಸಂಶೋಧನಾ ಕಾರ್ಯಗಳಿಗೆ ಅನುದಾನ ನೀಡುವಂತೆ ಕೋರಿ ಮೈಸೂರು ವಿಶ್ವವಿದ್ಯಾನಿಲಯವು ಯುಜಿಸಿಗೆ ಮನವಿಯನ್ನು ಸಲ್ಲಿಸಿದೆ.

ದೆಹಲಿಯಲ್ಲಿ ಯುಜಿಸಿ ಅಧ್ಯಕ್ಷರು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿರುವ ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ವಿಶ್ವವಿದ್ಯಾಲಯದಿಂದ ನಡೆಸುವ ಸಂಶೋಧನೆ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಸಂಬAಧ ಮಾತನಾಡಿದ ಅವರು, ಕೊರೋನಾ ಪರಿಸ್ಥಿತಿಯಿಂದಾಗಿ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಶೋಧನೆ ಚಟುವಟಿಕೆಗಳಿಗೆ ಹಣಕಾಸಿನ ಕೊರತೆ ಎದುರಾಗಿದೆ. ಉನ್ನತ ಶಿಕ್ಷಣದ ಅಧ್ಯಯನ, ಸಂಶೋಧನಾ ಕಾರ್ಯಕ್ರಮಗಳಿಗೆ ಅನುದಾನ ಇಲ್ಲವಾಗಿದೆ. ಸದ್ಯ ಲಭ್ಯವಿರುವ ಸಂಪನ್ಮೂಲವು ವಿಶ್ವವಿದ್ಯಾನಿಲಯದ ನಿರ್ವಹಣೆಗೆ ಖರ್ಚಾಗುತ್ತಿದ್ದು, ಸಂಶೋಧನಾಗೆ ಯಾವುದೇ ಪ್ರತ್ಯೇಕ ಅನುದಾನ ಇಲ್ಲ ಎಂಬುದನ್ನು ಯುಜಿಸಿ ಮುಖ್ಯಸ್ಥರಿಗೆ ವಿವರಿಸಿದ್ದೇನೆ,” ಎಂದು ಹೇಳಿದರು.

ರಾಜ್ಯ ಸರಕಾರ ಸಂಶೋಧನಾ ಉದ್ದೇಶಕ್ಕೆ ಅನುದಾನ ನೀಡುವುದಿಲ್ಲ. ಯುಜಿಸಿಯೂ ಸಹ ಕಳೆದ ಹಲವು ವರ್ಷಗಳಿಂದ ಅನುದಾನ ಕಡಿತಗೊಳಿಸಿರುವುದರಿಂದ ವೈಜ್ಞಾನಿಕ ವಿಷಯಗಳ ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನಾ ಕಾರ್ಯಗಳಿಗೆ ಹಿನ್ನಡೆಯಾಗಿದೆ. ಈ ಹಿಂದೆ ಪ್ರೊ.ತಳವಾರ ಅವರು ಕುಲಪತಿಗಳಾಗಿದ್ದ ಅವಧಿಯಲ್ಲಿ 150 ಕೋಟಿ ರೂಗಳ ಅನುದಾನವನ್ನು ಯುಜಿಸಿ ನೀಡಿತ್ತು. ಅದರಲ್ಲಿ ಶೇ.55ರಷ್ಟನ್ನು ಸಂಶೋಧನಾ ಕಾರ್ಯಕ್ಕೆ ಹಾಗೂ ಶೇ.45ರಷ್ಟು ಹಣವನ್ನು ಕಟ್ಟಡ ಮತ್ತು ಮೂಲ ಸೌಕರ್ಯ ಕಲ್ಪಿಸಲು ಬಳಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.

Sneha Gowda

Recent Posts

ಆಮ್ ಆದ್ಮಿ ಪಕ್ಷಕ್ಕೆ 7 ಕೋಟಿ ರೂ ವಿದೇಶಿ ಫಂಡಿಂಗ್: ತನಿಖೆ ಕೋರಿ ಗೃಹ ಸಚಿವಾಲಯಕ್ಕೆ ಇಡಿ ಪತ್ರ

ಆಮ್ ಆದ್ಮಿ ಪಕ್ಷಕ್ಕೆ  ವಿದೇಶಿ ಮೂಲಗಳಿಂದ 7 ಕೋಟಿ ರೂ.ಗೂ ಹೆಚ್ಚು ದೇಣಿಗೆ ಸಿಕ್ಕಿರುವ ಬಗ್ಗೆ ಎಫ್‌ಸಿಆರ್‌ಎ ತನಿಖೆಯನ್ನು ಕೋರಿ…

2 hours ago

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

2 hours ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

3 hours ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

3 hours ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

3 hours ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

3 hours ago