Categories: ಮೈಸೂರು

ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲ ಪತ್ತೆ, ನಾಲ್ವರು ಬಂಧನ

ಮೈಸೂರು : ಆನೆ ದಂತ ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಮೈಸೂರು ಪೊಲೀಸರು ಭೇದಿಸಿದ್ದು, ಪ್ರಕರಣ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಮೈಸೂರು ಅರಣ್ಯ ಸಂಚಾರಿ ದಳದ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದು, ಟಿ.ನರಸೀಪುರ-ತಾಯೂರು ರಸ್ತೆಯಲ್ಲಿ ಆನೆ ದಂತಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಅಧಿಕಾರಿಗಳು ಇವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಚಾರ್ಲ್ಸ್ ಸಾಹಿವೀರ್, ಸೆಲ್ವಕುಮಾರ್, ಅಂಥೋನಿ ರಾಯ್ ಮತ್ತು ಗಣೇಶ್ ಎಂದು ಗುರುತಿಸಲಾಗಿದೆ. ಇನ್ನು ಪ್ರಕರಣದ ಪ್ರಮುಖ ಆರೋಪಿ ರಾಬರ್ಟ್ ಪಿಂಟೊ ಪೆರಿಯಾರುಗಂ, ಲಿಯೋ ಫೆರ್ನಾಂಡಿಸ್ ಮತ್ತು ಜಾನ್ ಬಾಸ್ಕೋ ಸೇರಿದಂತೆ ಮೂವರು ಪರಾರಿಯಾಗಿದ್ದು, ಬಂಧಿತರಿಂದ 8 ಕೆಜಿ ತೂಕದ ಐದು ದಂತಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮತ್ತೊಂದು ಪ್ರಕರಣದಲ್ಲಿ 25 ಕೆಜಿ ತೂಕದ ಎರಡು ದಂತಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ 29 ವರ್ಷದ ಯುವಕನನ್ನು ಕನಕಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿದ ಕೂಡಲೇ ವಶಪಡಿಸಿಕೊಂಡ ದಂತಗಳನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ. ಆರೋಪಿಯನ್ನು ಚಾಮರಾಜನಗರ ಮೂಲದ ಮರಿಸ್ವಾಮಿ ಎಂದು ಗುರುತಿಸಲಾಗಿದ್ದು, ಈ ಕಳ್ಳ ಸಾಗಣೆಯಲ್ಲಿ ಇನ್ನೂ ಹೆಚ್ಚಿನ ಜನರು ಭಾಗಿಯಾಗಿರುವ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Gayathri SG

Recent Posts

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

5 mins ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

25 mins ago

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

47 mins ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

1 hour ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

1 hour ago

ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ: ಆರು ಜನರ ದುರ್ಮರಣ

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ಬಸ್​ ಹಾಗೂ ಟ್ರಕ್​ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ  ನಡೆದಿದೆ.

2 hours ago