Categories: ಮೈಸೂರು

ಆನ್‌ಲೈನ್ ಭಗವದ್ಗೀತೆ ಸ್ಪರ್ಧೆಯ ಪೋಸ್ಟರ್ ಬಿಡುಗಡೆ

ಮೈಸೂರು: ಆನ್‌ಲೈನ್ ಮೂಲಕ ಭಗವದ್ಗೀತೆ ಸ್ಪರ್ಧೆ ಯ ಪೋಸ್ಟರ್ ನ್ನು ಬಿಜೆಪಿ ನಗರಾಧ್ಯಕ್ಷ ಟಿ.ಎಸ್.ಶ್ರೀವತ್ಸ  ಬಿಡುಗಡೆ ಮಾಡಿದ್ದಾರೆ.

ನಗರ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಭಗವದ್ಗೀತೆ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಿ, ಮಾತನಾಡಿದ ಟಿ.ಎಸ್.ಶ್ರೀವತ್ಸ  ಅವರು, ಭಗವದ್ಗೀತೆ ಹಿಂದೂಗಳ ಪವಿತ್ರ ಗ್ರಂಥಗಳಲ್ಲಿ ಒಂದು. ಭಗವದ್ಗೀತೆಯ ಪ್ರತಿಯೊಂದು ಶ್ಲೋಕ ಜ್ಞಾನದ ಕಿಡಿ. ಇದು ಒಂದು ಬೆಂಕಿ ಪೊಟ್ಟಣವಿದ್ದಂತೆ. ಅದರಲ್ಲಿನ ಪ್ರತಿಯೊಂದು ಶ್ಲೋಕವೂ ಜ್ಞಾನದ ಬೆಳಕು ನೀಡುತ್ತದೆ ಎಂದರು.

ನಮ್ಮ ಜೀವನ ಶೈಲಿ ಬದಲಾಗುತ್ತಿದೆ. ಶರೀರಕ್ಕೆ ಕೆಲಸ ಕಡಿಮೆಯಾಗಿ, ಮನಸ್ಸಿಗೆ ಉದ್ವೇಗ ಹೆಚ್ಚಾಗುತ್ತಿದೆ. ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಡಯಾಬಿಟಿಸ್, ರಕ್ತದೊತ್ತಡ, ಹೃದಯ ತೊಂದರೆ, ಮಾನಸಿಕ ಒತ್ತಡ ಹೆಚ್ಚಾಗುತ್ತಿದ್ದು, ಮಾನಸಿಕ ಆರೋಗ್ಯ ನಿರ್ವಹಣೆ ದೊಡ್ಡ ಸವಾಲಾಗಿದೆ.

ಪಾಲಕರ ಒತ್ತಡ ತಾಳಲಾಗದೇ ಕೆಲವು ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಮಕ್ಕಳಿಗೆ ಮುಕ್ತವಾಗಿ ಅಧ್ಯಯನ ಮಾಡಲು ಪೂರಕ ವಾತಾವರಣ ಸೃಷ್ಟಿಸಬೇಕು. ನಮ್ಮ ದೇಶದ ಜ್ವಲಂತ ಸಮಸ್ಯೆಗಳಿಗೆ ಭಗವದ್ಗೀತೆ ಪರಿಹಾರ ನೀಡಬಲ್ಲದು. ಹೀಗಾಗಿ ಭಗವದ್ಗೀತೆಯಲ್ಲಿ ತಿಳಿಸಿದ ರೀತಿಯಲ್ಲಿ ಜೀವನ ಕ್ರಮ ಅನುಸರಿಸಬೇಕು ಎಂದರು.

ಮೈಸೂರು ಜಿಲ್ಲಾ ವ್ಯಾಪ್ತಿ ಒಳಗೊಂಡಂತೆ 8ರಿಂದ 18ವರ್ಷದೊಳಗಿನ ಮಕ್ಕಳಿಗಾಗಿ ಸ್ಪರ್ಧೆ ಆಯೋಜಿಸಲಾಗಿದ್ದು, ಏ.8ರೊಳಗೆ ಭಗವದ್ಗೀತೆಯ ಶ್ಲೋಕಗಳನ್ನು ಮೂರು ನಿಮಿಷಗಳ ವಿಡಿಯೋ ತುಣುಕುಗಳನ್ನು ವಾಟ್ಸಪ್ ಮೂಲಕ 9880304324, 9060543667ಗೆ ಕಳುಹಿಸಿಕೊಡಬೇಕು.

ಸನಾತನ ಧರ್ಮದ ಹಿಂದೂಗಳ ಪ್ರತೀಕವಾದ 14 ಅಧ್ಯಾಯದ ಶ್ಲೋಕ ಪಠಣ ಮಾಡಿ ಪ್ರಸ್ತುತಪಡಿಸಬಹುದು. ಸ್ಫರ್ಧಿಗಳ ಭಾಷಾ ಶೈಲಿ, ಸಂಹವನ ಕೌಶಲ್ಯ, ಸ್ಪಷ್ಟತೆಯ ಆಧಾರದ ಮೇಲೆ ಬಹುಮಾನ ನೀಡಲಾಗುವುದು. ಪ್ರಥಮ ಬಹುಮಾನ 2 ಸಾವಿರ, ದ್ವಿತೀಯ ಬಹುಮಾನ 1 ಸಾವಿರ, ತೃತೀಯ ಬಹುಮಾನವಾಗಿ 500ರೂ ಹಾಗೂ ಪಾರಿತೋಷಕ ನೀಡಲಾಗುವುದು. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ.

Sneha Gowda

Recent Posts

ಹಿಂದೂಗಳ ಪವಿತ್ರ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭ

ಹಿಂದೂಗಳ ಪವಿತ್ರ ಯಾತ್ರೆ ಆಗಿರುವ ಚಾರ್ ಧಾಮ್‌ ಯಾತ್ರೆ ಇಂದಿನಿಂದ ಆರಂಭವಾಗಲಿದೆ. ಕೇದಾರನಾಥ ಮತ್ತು ಯಮುನೋತ್ರಿ ದೇವಾಲಯಗಳು ಬೆಳಿಗ್ಗೆ 7…

14 mins ago

ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರನ್ನು 3 ದಿನ ಯಾರು ಭೇಟಿ ಮಾಡುವಂತಿಲ್ಲ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ ಅವರು ನಿನ್ನೆ ಜಾಮೀನು ಸಿಗದ ಹಿನ್ನೆಲೆಯಲ್ಲಿ,…

36 mins ago

ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನೀರಿನ ಟ್ಯಾಂಕ್‌ಗೆ ಬಿದ್ದು 3 ಎಂಜಿನಿಯರ್‌ಗಳು ಮೃತ್ಯು

ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೂವರು ಎಂಜಿನಿಯರ್‌ಗಳು ಸಾವಿಗೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಜಿಂದಾಲ್‌ನ ಎಚ್ಎಸ್ಎಂ ಪ್ಲಾಂಟ್‌ನಲ್ಲಿ ನಡೆದಿದೆ.

1 hour ago

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

1 hour ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

2 hours ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

2 hours ago