ಮೈಸೂರು

ಉದ್ಯೋಗ ಸೃಷ್ಟಿಸದೆ ಪಕೋಡ ಮಾರಲು ಸಲಹೆ!

ನಂಜನಗೂಡು: ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಂಟು ವರ್ಷವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಯೋಗ ಸೃಷ್ಟಿ ಮಾಡದೆ ಪಕೋಡ ಮಾರುವಂತೆ ಕರೆ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.

ನಂಜನಗೂಡಿನಲ್ಲಿ ದಕ್ಷಿಣ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್‍ ಗೆ ನಡೆಯುವ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡ ಪರ ಮತಯಾಚನೆ ಮಾಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಯಾವುದೇ ಕೆಲಸವಾಗಬೇಕಾದರೆ ಕಮೀಷನ್ ನೀಡಬೇಕಾಗಿದೆ ಎಂದು ಆರೋಪ ಮಾಡಿದರು.

ಅಧಿಕಾರಕ್ಕೆ ಬರುವ ಮೊದಲು ಪ್ರಣಾಳಿಕೆ ಯಲ್ಲಿ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಯಾವುದೇ ಉದ್ಯೋಗ ಸೃಷ್ಟಿ ಮಾಡದೆ ನಿರುದ್ಯೋಗಿಗಳು ಹೆಚ್ಚುವಂತೆ ಮಾಡಿದ್ದಾರೆ. ಕಳೆದ ಎಂಟು ವರ್ಷದಲ್ಲಿ ಶೇ 40ರಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಉದ್ಯೋಗ ಸೃಷ್ಟಿ ಮಾಡದೆ ಪಕೋಡ ಮಾರಲು ಸಲಹೆ ನೀಡುತ್ತಿದ್ದಾರೆ. ಸೂಕ್ತವಾಗಿ ಆರ್ಥಿಕ ನೀತಿಗಳನ್ನು ನಿರ್ವಹಣೆ ಮಾಡದ ಕಾರಣ ಕೈಗಾರಿಕೆಗಳು ಮುಚ್ಚುತ್ತಿವೆ ಇವರ ಸರ್ಕಾರದಲ್ಲಿ ಹಲವಾರು ಭ್ರಷ್ಟಾಚಾರ ಗಳು ನಡೆಯುತ್ತಿವೆ  ಎಂದು ದೂರಿದರು.

ಅಭ್ಯರ್ಥಿ ಮಧು ಜಿ ಮಾದೇಗೌಡ ಮಾತನಾಡಿ 1 ಲಕ್ಷ 33 ಸಾವಿರ ಪದವೀಧರರಿದ್ದಾರೆ ನಾನು ಸುಮಾರು 65 ಸಾವಿರ ಮತದಾರರನ್ನು ಭೇಟಿಯಾಗಿದ್ದೇನೆ ಮುಂದಿನ ದಿನಗಳಲ್ಲಿ ಎಲ್ಲರನ್ನೂ ಭೇಟಿ ಮಾಡುತ್ತೇನೆ. ನಾನು ಹೋದ ಕಡೆಲ್ಲೆಲ್ಲ ಉತ್ತಮ ಬೆಂಬಲ ನೀಡುತ್ತಿದ್ದಾರೆ. ಜೊತೆಗೆ ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಪದವೀಧರರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿರುವುದು ನನಗೆ ಆನೆ ಬಲ ಬಂದಂತಾಗಿದ್ದು,  ಈ ಬಾರಿ ಗೆಲ್ಲುವ ನಿರೀಕ್ಷೆ ಯಿಟ್ಟುಕೊಂಡಿರುವುದಾಗಿ ಹೇಳಿದರು.

ಈ ವೇಳೆ ಮಾಜಿ ಶಾಸಕರಾದ ಕಳಲೆ ಕೇಶವಮೂರ್ತಿ,  ಕೃಷ್ಣಮೂರ್ತಿ, ಜಿಪಂ ಮಾಜಿ ಅಧ್ಯಕ್ಷ ಬಸವರಾಜು,  ಸೇರಿದಂತೆ ಹಲವರು ಇದ್ದರು.

Sneha Gowda

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

5 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೊ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

15 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

16 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

39 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

49 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

54 mins ago